ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ: ರಾಜ್ಯ ಸರ್ಕಾರದ ಭರವಸೆ, ವಿದ್ಯಾರ್ಥಿಗಳಿಗೆ ನಿರಾಳ

ಬೆಂಗಳೂರು: ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದೆ ಕಳೆದ ವರ್ಷದ ದರಗಳನ್ನೇ ಮುಂದುವರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದಿಂದ ವೈದ್ಯಕೀಯ ಶಿಕ್ಷಣದ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನೆಮ್ಮದಿ ಸಿಕ್ಕಂತಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ […]

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ಆಗಮನ: ವಿಶೇಷ ಪೂಜೆ ಸಲ್ಲಿಸಿದ ವಿಜಯ್

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನದ ವೇಳೆ ದೇವಸ್ಥಾನದಲ್ಲಿ ಭಕ್ತರ ಸಂಚಾರವನ್ನು ನಿಯಂತ್ರಿಸಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ವಿಜಯ್ […]

ಪಶ್ಚಿಮ ಬಂಗಾಳದಲ್ಲಿ ಭೀಕರ ಅಗ್ನಿ ದುರಂತ, ಈ ಸಲದ ಚುನಾವಣೆಗೆ ಬಳಸಿದ್ದ 4,000 ಇವಿಎಂ ಮತಯಂತ್ರಗಳು ಬೆಂಕಿಗಾಹುತಿ!

ಪಶ್ಚಿಮ ಬಂಗಾಳದ ಕೋಲ್ಕತ್ತ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 4,000 ಇವಿಎಂ (EVM) ಮತಯಂತ್ರಗಳು ಸುಟ್ಟು ಭಸ್ಮವಾಗಿವೆ. ಜೂನ್ 10ರಂದು ಬೆಳಿಗ್ಗೆ ಸುಮಾರು 9:50ಕ್ಕೆ ಅಲಿಪೋರ್ನಲ್ಲಿರುವ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ತಿನ 10 ಮಹಡಿಗಳ ಆಡಳಿತಾತ್ಮಕ ಸರ್ಕಾರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಟ್ಟಡದ 8 ಮತ್ತು 9ನೇ ಮಹಡಿಗಳಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 4,000 ಇವಿಎಂ ಮತಯಂತ್ರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಈ ಯಂತ್ರಗಳನ್ನು ಇತ್ತೀಚೆಗೆ ನಡೆದ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ […]

ಕೊಲ್ಲೂರಿಗೆ ನೇರವಾಗಿ ತೆರಳಿದ ತಮಿಳುನಾಡು ಸಿಎಂ ವಿಜಯ್; ಉಡುಪಿಯಲ್ಲಿ ಅಭಿಮಾನಿಗಳಿಗೆ ನಿರಾಸೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಶುಕ್ರವಾರ ಕರಾವಳಿ ಭಾಗಕ್ಕೆ ಆಗಮಿಸಿದರು. ಅವರ ಭೇಟಿಯ ನಿಮಿತ್ತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಮೂಲ ವೇಳಾಪಟ್ಟಿಯ ಪ್ರಕಾರ, ವಿಜಯ್ ಅವರು ಉಡುಪಿಗೆ ಆಗಮಿಸಿದ ಬಳಿಕ ಕರಾವಳಿ ಬೈಪಾಸ್ ಸಮೀಪದ ಖಾಸಗಿ ಹೋಟೆಲ್‌ಗೆ ತೆರಳಿ ಸ್ವಲ್ಪ ವಿಶ್ರಾಂತಿ ಪಡೆದು ಬಳಿಕ ಕೊಲ್ಲೂರಿಗೆ ಪ್ರಯಾಣ ಬೆಳೆಸಬೇಕಾಗಿತ್ತು. ಆದರೆ ಸಮಯದ ಅಭಾವದ ಹಿನ್ನೆಲೆಯಲ್ಲಿ ತಮ್ಮ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡ ಅವರು ಮಂಗಳೂರು […]

ಕೊಲ್ಲೂರಿಗೆ ಪ್ರಯಾಣ ಬೆಳೆಸಿದ ತಮಿಳುನಾಡು ಸಿಎಂ ವಿಜಯ್‌: ಜೈಕಾರ ಹಾಕಿ ಸ್ವಾಗತಿಸಿದ ಅಭಿಮಾನಿಗಳು!

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದ‌ರ್ ಅವರು ಮುಖ್ಯಮಂತ್ರಿ ವಿಜಯ್ ಅವರನ್ನು ಬರಮಾಡಿಕೊಂಡು ಸಾಥ್ ನೀಡಿದರು. ಬಳಿಕ ವಿಜಯ್ ರಸ್ತೆ ಮಾರ್ಗವಾಗಿ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದರು. ಮಂಗಳೂರು-ಉಡುಪಿ-ಕೊಲ್ಲೂರು ಮಾರ್ಗದುದ್ದಕ್ಕೂ ರಸ್ತೆಯ ಬದಿಯಲ್ಲಿ ನೆರೆದಿದ್ದ ಅಭಿಮಾನಿಗಳು ಮುಖ್ಯಮಂತ್ರಿ ವಿಜಯ್ ಅವರಿಗೆ ಜೈಕಾರ ಹಾಕಿ ಸ್ವಾಗತಿಸಿದರು. ಹಲವೆಡೆ ಅಭಿಮಾನಿಗಳು ಕೈಬೀಸಿ […]