ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ ಹಿನ್ನೆಲೆ: ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್!

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ವಿಜಯ್ ಅವರಿಗೆ ಝಡ್ ಪ್ಲಸ್ ಭದ್ರತೆ ಇರುವುದರಿಂದ ದೇವಸ್ಥಾನ ಆವರಣ, ಪ್ರವೇಶ ದ್ವಾರಗಳು ಹಾಗೂ ಅವರು ಸಂಚರಿಸುವ ಮಾರ್ಗಗಳಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ. […]

ತಮಿಳುನಾಡು ಸಿಎಂ ವಿಜಯ್‌ಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಕರವೇ ಕಾರ್ಯಕರ್ತರ ವಶ

ಉಡುಪಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆಯಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ಮುಖ್ಯಮಂತ್ರಿ ವಿಜಯ್ ಅವರ ವಾಹನ ಸಂಚಾರಕ್ಕೂ ಮುನ್ನವೇ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ […]

ವಿದ್ಯಾರ್ಥಿಗಳೇ ಗಮನಿಸಿ, ಉಚಿತ ಬಸ್ ಪಾಸ್ ಗೆ ಇವತ್ತಿನಿಂದಲೇ ಅರ್ಜಿ ಸಲ್ಲಿಕೆ ಶುರು,ಹೇಗೆ ಅರ್ಜಿ ಸಲ್ಲಿಸಬೇಕು?

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಯೋಜನೆಗೆ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ಈ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅರ್ಹ ವಿದ್ಯಾರ್ಥಿಗಳು ಜೂನ್ 12ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಈಗಾಗಲೇ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಲಭ್ಯವಿರುವುದರಿಂದ ಅವರು ಪ್ರತ್ಯೇಕವಾಗಿ ಬಸ್ ಪಾಸ್ ಪಡೆಯುವ ಅಗತ್ಯವಿಲ್ಲ. ಮುಖ್ಯಮಂತ್ರಿ ಘೋಷಿಸಿರುವ […]

ಧರ್ಮಸ್ಥಳ ಪ್ರಕರಣ: ನನ್ನ ಬಗ್ಗೆ ಹರಿದಾಡುತ್ತಿರುವ ಗಾಳಿಸುದ್ದಿಗಳನ್ನು ನಂಬಬೇಡಿ ಎಂದ ಪ್ರಕಾಶ್ ರಾಜ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ತನ್ನ ಹೆಸರು ಪ್ರಸ್ತಾಪವಾಗುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ Prakash Raj ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಗಾಳಿಸುದ್ದಿಗಳನ್ನು ನಂಬದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಗ್ಗೆ ಕೆಲವು ಸುದ್ದಿಗಳು ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮ ಹಾಗೂ ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಈ ಅನುಮಾನಗಳಿಗೆ ಉತ್ತರಿಸುವುದು ನನ್ನ […]

ಸರ್ಕಾರಿ ನೌಕರರಿಗೆ ಹೊಸ ನಿಯಮ: ಬೆಳಿಗ್ಗೆ 10 ಗಂಟೆಯೊಳಗೆ ‘ಕರ್ತವ್ಯ’ ಆ್ಯಪ್‌ನಲ್ಲಿ ಹಾಜರಾತಿ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಿ ‘ಕರ್ತವ್ಯ’ ಆ್ಯಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ. ನೌಕರರು ಕಚೇರಿಯಲ್ಲೇ ಇದ್ದು ಹಾಜರಾತಿ ಗುರುತಿಸಬೇಕೆಂಬ ಉದ್ದೇಶದಿಂದ ಸರ್ಕಾರ ಜಿಯೋ-ಟ್ಯಾಗ್ಡ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಸಂಬಂಧ ರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು ಹಾಗೂ ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ವಿಭಾಗ ಸುತ್ತೋಲೆ ಹೊರಡಿಸಿದೆ. ಅದರಂತೆ, ಪ್ರತಿಯೊಂದು ಸರ್ಕಾರಿ ಕಚೇರಿಯ […]