ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ “ಡ್ಯುಯಲ್ ಆಕ್ಸಿಸ್ ಸೋಲಾರ್ ಟ್ರಾಕಿಂಗ್ ಸಿಸ್ಟಮ್” ವಿನ್ಯಾಸ

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ರೋಹಿತ್ ಎನ್, ಶ್ರೇಯಸ್ ಕುಮಾರ್, ಐಶ್ವರ್ಯ ನಾಯಕ್ ಮತ್ತು ಮಾನಸ ಮಂಜುನಾಥ್ ಪೂಜಾರಿ ಇವರು ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಮಧುಕರ ನಾಯಕ್ ಇವರ ಮಾರ್ಗದರ್ಶನದಲ್ಲಿ ‘ ಡ್ಯೂಯಲ್ ಆಕ್ಸಿಸ್ ಸೋಲಾರ್ ಟ್ರಾಕಿಂಗ್ ಸಿಸ್ಟಮ್’ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಪ್ರಸ್ತುತ ಹೆಚ್ಚಿನ ಸೌರವಿದ್ಯುತ್ ಉತ್ಪಾದನಾ ಘಟಕಗಳು ಏಕಕಕ್ಷ ಟ್ರಾಕಿಂಗ್ ವ್ಯವಸ್ಥೆಗಳನ್ನು ಬಳಸುತ್ತಿವೆ. ಆದರೆ ಈ ವ್ಯವಸ್ಥೆಗಳಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುದರ […]

ಜೋರ್ಹತ್‌ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಐವರು ಯೋಧರು ಹುತಾತ್ಮ, ಸಹ ಪೈಲಟ್ ಪಾರು

ಜೋರ್ಹತ್: ಅಸ್ಸಾಂನ ಜೋರ್ಹತ್ ಜಿಲ್ಲೆಯ ರೌರಿಯಾ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ AN-32 ಸರಕು ಸಾಗಣೆ ವಿಮಾನ ಲ್ಯಾಂಡ್ ಆಗುವ ವೇಳೆ ಪತನಗೊಂಡು ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿರುವ ದಾರುಣ ಘಟನೆ ಶನಿವಾರ ನಡೆದಿದೆ. ಅಪಘಾತದಲ್ಲಿ ಸಹ ಪೈಲಟ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 43 ಸ್ಕ್ವಾಡ್ರನ್‌ಗೆ ಸೇರಿದ AN-32 ವಿಮಾನವು ವಾಯುಪಡೆ ನಿಲ್ದಾಣದಲ್ಲಿ ಇಳಿಯುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಪತನಗೊಂಡಿದೆ. ಅಪಘಾತದ ತೀವ್ರತೆಗೆ ವಿಮಾನವು ಎರಡು ತುಂಡುಗಳಾಗಿ ಮುರಿದು ಬೆಂಕಿಗಾಹುತಿಯಾಗಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ […]

ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಉದಯ್ ಶೆಟ್ಟಿ ಅವರು, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ […]

ಜೂ.15 – 20 ರವರೆಗೆ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ತಪಾಸಣೆ ಶಿಬಿರ.

ಮಣಿಪಾಲ: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ದಿನಾಂಕ ಜೂ.15 ರಿಂದ ಜೂ.20 ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಬಿಳಿ ತೊನ್ನು (ವಿಟಿಲಿಗೋ) ಮತ್ತು ಇತರ ಚರ್ಮ ಸಂಬಂಧ ರೋಗಗಳ ಉಚಿತ ತಪಾಸಣೆ ಹಾಗು ಸಲಹಾಶಿಬಿರವನ್ನು ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಚರ್ಮದ ಮೇಲೆ ಬಿಳಿ ಮಚ್ಚೆ ಅಥವಾ ಬಿಳಿ ಕಲೆ ಇರುವ ಸರ‍್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ. […]

ಕಾರ್ಕಳ: ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 6 ಕೋಟಿ ರೂ. ಅನುದಾನ ಮಂಜೂರು; ವಿ.ಸುನಿಲ್‌ ಕುಮಾರ್

ಕಾರ್ಕಳ: ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ 06.00 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಆಡಳಿತಾತ್ಮಕ ಅನುಮೋದನೆ ಆಗಿರುತ್ತದೆ. ಕಾರ್ಕಳ ಕ್ಷೇತ್ರದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಹೆಬ್ರಿ ತಾಲೂಕಿನ ಬಚ್ಚಪ್ಪುವಿನಿಂದ – ಹೆಬ್ರಿ ಕಡೆಗೆ ಹೋಗುವ ರಸ್ತೆ ಅಭಿವೃದ್ಧಿ, ಮುಂಡ್ಕೂರು ಪೇಟೆಯ ರಸ್ತೆ ಅಭಿವೃದ್ಧಿ, ನಿಟ್ಟೆ ಕೆಮ್ಮಣ್ಣು ಬಪ್ಪಗೋಳಿ […]