ರಾ.ಹೆ.66ರ ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತ

ಉಡುಪಿ: ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ನೀಡಿದರು. ಮೇಲ್ಸೇತುವೆಯ ಕೆಳಭಾಗದ ಸರ್ವಿಸ್ ರಸ್ತೆ ಹೊಂಡಗಳಿಂದ ಕೂಡಿದ್ದು, ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ದುಸ್ತರವಾಗಿತ್ತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಕ್ರಮವಾಗಿ ಮೇಲ್ಸೇತುವೆಯ ಒಂದು ಬದಿಯನ್ನು ಸಂಚಾರಕ್ಕೆ ತೆರೆಯಲಾಗಿದೆ ಎಂದು […]

ಸರಕಾರಿ ಕಚೇರಿಗಳಲ್ಲಿ 10 ರೂಪಾಯಿ ಲಂಚ ಕೇಳಿದ್ರೂ ಕಾಲ್ ಮಾಡಿ ಎಂದ ಸಿಎಂ ಡಿ.ಕೆ. ಶಿವಕುಮಾರ್, ಯಾರಿಗೆ ಕಾಲ್ ಮಾಡ್ಬೇಕು ಇಲ್ಲಿದೆ ನಂಬರ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಕ್ಕೆ ಲಂಚ ಕೇಳಿದರೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಬಾರದು ಎಂದು ಜನರಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜಿಲ್ಲಾಡಳಿತವನ್ನು ಹೆಚ್ಚು ಜನಸ್ನೇಹಿ ಹಾಗೂ ಪಾರದರ್ಶಕಗೊಳಿಸುವಂತೆ ಸೂಚಿಸಿದರು. “ಸರ್ಕಾರಿ ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ 10 ರೂಪಾಯಿ ಲಂಚ ಕೇಳಿದರೂ ತಕ್ಷಣ ದೂರು ನೀಡಿ. ಭ್ರಷ್ಟಾಚಾರಕ್ಕೆ […]

ರಾಮಮಂದಿರ ದೇಣಿಗೆ ವಿವಾದ ತೀವ್ರ: ಉದ್ಯೋಗಿಯ ಮನೆಯಲ್ಲಿ ಪತ್ತೆಯಾಯ್ತು ₹10 ಲಕ್ಷ ನಗದು

ಲಕ್ನೋ:ರಾಮಮಂದಿರ Ram Mandir ದೇಣಿಗೆ ನಿಧಿ ದುರುಪಯೋಗದ ಆರೋಪಗಳು ಇತ್ತೀಚೆಗೆ ಜಾಸ್ತಿಯಾಗಿ ಕೇಳಿಬರುತ್ತಿರುವ ನಡುವೆ ಹೊಸ ಬೆಳವಣಿಗೆಯೊಂದು ಬೆಳಕಿಗೆ ಬಂದಿದ್ದು, ದೇವಾಲಯದ ಉದ್ಯೋಗಿಯೊಬ್ಬರ ನಿವಾಸದಲ್ಲಿ ₹10 ಲಕ್ಷದಿಂದ ₹12 ಲಕ್ಷದವರೆಗೆ ನಗದು ಹಣ ಪತ್ತೆಯಾಗಿದೆ. ರಾಮಮಂದಿರದ ದೇಣಿಗೆ ನಿಧಿಯಿಂದ ಸುಮಾರು ₹7 ಕೋಟಿ ದುರುಪಯೋಗವಾಗಿದೆ ಎಂಬ ಆರೋಪಗಳು ಈಗಾಗಲೇ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧ ಅಯೋಧ್ಯೆಯ ರುಡೌಲಿ ಪ್ರದೇಶದ ಮೀನಾಪುರ್ ಠಾಕೂರನ್ ಫಗೌಲಿ ಗ್ರಾಮದಲ್ಲಿರುವ ಉದ್ಯೋಗಿ ಲವಕುಶ್ ಮಿಶ್ರಾ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. […]

ನಿಮ್ಮ ಆಧಾರ್ ಕಾರ್ಡ್ ಬಳಸಿ ಯಾರಾದರೂ ಬ್ಯಾಂಕ್ ಹಣ ದೋಚಲು ಸಾಧ್ಯವೇ? ಈ ಸತ್ಯ ನಿಮಗೆ ಗೊತ್ತಿರಲೇಬೇಕು!

ಬೆಂಗಳೂರು: ನಮ್ಮ ಆಧಾರ್ ಕಾರ್ಡ್ ಸಂಖ್ಯೆ ಯಾರಿಗಾದರೂ ಗೊತ್ತಿದ್ದರೆ, ಅವರು ನಮ್ಮ ಬ್ಯಾಂಕ್ ಅಕೌಂಟ್ ನಲ್ಲಿರುವ ಹಣವನ್ನು ಕದಿಯಬಹುದು ಎನ್ನುವುದು ತುಂಬಾ ಜನರ ಭಯ. ಆದರೆ ಇದು ಸಾಧ್ಯವೇ? ಆಧಾರ್ ಕಾರ್ಡ್ ಸಂಖ್ಯೆ ಗೊತ್ತಿದ್ದರೆ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಲು ಅಥವಾ ವರ್ಗಾಯಿಸಲು ಸಾಧ್ಯವೇ, ಬನ್ನಿ ಒಂದಷ್ಟು ವಿಷಯ ತಿಳಿದುಕೊಳ್ಳೋಣ. ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅಥವಾ ಹಣ ಹಿಂಪಡೆಯಲು ಆಧಾರ್ ಸಂಖ್ಯೆ ಮಾತ್ರ ಸಾಕಾಗುವುದಿಲ್ಲ. ಇದಕ್ಕಾಗಿ ಬ್ಯಾಂಕ್ ಖಾತೆ ವಿವರಗಳು, ಡೆಬಿಟ್ ಕಾರ್ಡ್ ಮಾಹಿತಿ, ರಹಸ್ಯ […]

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಲೇಬೇಕು! ಸರಕಾರ ಹೇಳೋದೇನು?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ನಕಲಿ ಫಲಾನುಭವಿಗಳ ಪತ್ತೆ ಮತ್ತು ಅರ್ಹರ ಮರುಪರಿಶೀಲನೆಗಾಗಿ ಹೊಸ ಅರ್ಜಿ ಪ್ರಕ್ರಿಯೆ ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಇದರಂತೆ, ಎರಡೂ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D. K. Shivakumar ಅವರ ಸೂಚನೆಯಂತೆ, ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಗಟ್ಟಲು ಮತ್ತು ನೈಜ ಫಲಾನುಭವಿಗಳನ್ನು ಗುರುತಿಸಲು ಮರು ನೋಂದಣಿ ಪ್ರಕ್ರಿಯೆ ರೂಪಿಸಲಾಗುತ್ತಿದೆ ಎನ್ನಲಾಗಿದೆ. […]