ಧರ್ಮಸ್ಥಳ ತಲೆಬುರುಡೆ ಪ್ರಕರಣ ತನಿಖೆ: ಎಸ್‌ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ; ನಾಲ್ವರಿಗೆ ಸಣ್ಣಪುಟ್ಟ ಗಾಯ

ಬೆಳ್ತಂಗಡಿ: ಧರ್ಮಸ್ಥಳ ತಲೆಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಸಮೀಪ ನಡೆದಿದೆ. ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಎಸ್ಪಿ ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಕಾರಿನಲ್ಲಿ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರು ಪ್ರಯಾಣಿಸುತ್ತಿದ್ದರು. ಧರ್ಮಸ್ಥಳ ತಲೆಬುರುಡೆ […]
ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗದಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ […]
ಸ್ಥಳೀಯ ಯುವಜನರಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಿ, ಉದ್ಯೋಗಸ್ಥರನ್ನಾಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತವಿರುವ ಕೈಗಾರಿಕಾ ಘಟಕಗಳಲ್ಲಿ ವೃತ್ತಿಯನ್ನು ಕೈಗೊಳ್ಳಲು ಅವಶ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು, ಕೈಗಾರಿಕಾ ತರಬೇತಿ ಸಂಸ್ಥೆಗಳು ಯುವಜನರಿಗೆ ನೀಡಿ, ಸ್ಥಳೀಯವಾಗಿ ಉದ್ಯೋಗ ಲಭ್ಯವಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ […]
ಎಲ್ ನಿನೊ ಆತಂಕ: ಭಾರತಕ್ಕೆ ತಟ್ಟಲಿದೆಯಾ ತೀವ್ರ ಬರಗಾಲ ಅಥವಾ ಪ್ರವಾಹ?

ನವದೆಹಲಿ: ಜಾಗತಿಕ ಹವಾಮಾನ ವೈಪರೀತ್ಯಗಳಲ್ಲಿ ಒಂದಾದ ಎಲ್ ನಿನೊ (El Niño) ಮತ್ತೆ ಸಕ್ರಿಯವಾಗಿದ್ದು, ಅದರ ಪರಿಣಾಮ ಇಡೀ ವಿಶ್ವದ ಹವಾಮಾನ ವ್ಯವಸ್ಥೆಯ ಮೇಲೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ವಿಶ್ವ ಹವಾಮಾನ ಸಂಸ್ಥೆ (WMO) ನೀಡಿರುವ ಮುನ್ಸೂಚನೆಯ ಪ್ರಕಾರ, ಈ ಬಾರಿ ಎಲ್ ನಿನೊದ ಪರಿಣಾಮಗಳು ಆಗಸ್ಟ್‌ನಿಂದ ನವೆಂಬರ್‌ವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ದೇಶದ ಮಾನ್ಸೂನ್ ಮಳೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಭಾರತದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸುರಿಯುವ ನೈಋತ್ಯ ಮಾನ್ಸೂನ್ […]
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್, ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ

ನವದೆಹಲಿ: ದೇಶದ ಪ್ರಮುಖ ಮತ್ತು ಜನನಿಬಿಡ ರೈಲು ನಿಲ್ದಾಣಗಳ ಮರುಅಭಿವೃದ್ಧಿಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಮಂಗಳೂರು ಸೆಂಟ್ರಲ್ ಸೇರಿದಂತೆ ಹಲವು ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ ತೋರಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ಮರುಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಅವಲೋಕಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಅತಿಯಾದ ಪ್ರಯಾಣಿಕರ ದಟ್ಟಣೆ ಹೊಂದಿರುವ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಮರುಅಭಿವೃದ್ಧಿ ಯೋಜನೆಗೆ ವಿಶೇಷ ಆದ್ಯತೆ […]