ಪಠ್ಯದೊಂದಿಗೆ ಪೂರಕ ಚಟುವಟಿಕೆಗಳು, ಬೌದ್ಧಿಕ ವಿಕಸನಕ್ಕೆ ಅತೀ ಅಗತ್ಯ: ಎಚ್.ನಾಗರಾಜ್ ಶೆಟ್ಟಿ.

ಹೆಬ್ರಿ: ಶೈಕ್ಷಣಿಕ ಬದುಕಿನಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಸಹಪಠ್ಯಗಳು ಅತೀ ಅಗತ್ಯ. ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ಜ್ಞಾನವನ್ನು ಸಂಪಾದಿಸಿದಾಗ ವಿದ್ಯಾರ್ಥಿಯ ಬದುಕು ಪರಿಪೂರ್ಣವಾಗಲು ಸಾಧ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಿರಿ. ಬೇರೆ ಬೇರೆ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಕರಾವಳಿಯ ಗಂಡುಕಲೆಯಾದ ಯಕ್ಷಗಾನವನ್ನು ಅಭ್ಯಾಸ ಮಾಡಿ ಅದರಲ್ಲಿ ವಿಶೇಷ ಸಾಧನೆಯನ್ನು ಮಾಡಬೇಕು. ತನ್ಮೂಲಕ ಕರಾವಳಿಯ ಸಂಸ್ಕೃತಿಯನ್ನು ಅರಿತುಕೊಂಡು ನಿಮ್ಮ ನಿಮ್ಮ ಊರುಗಳಲ್ಲಿ ಅದನ್ನು ಪಸರಿಸುವ ಕೆಲಸ ಮಾಡಬೇಕು. ಎಂದು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ […]

ಉಡುಪಿಯ ಹೀರೋ ಶಕ್ತಿ ಮೋಟಾರ್ಸ್‌ನಲ್ಲಿದೆ ವಿವಿಧ ಹುದ್ದೆಗಳಿಗೆ ನೇಮಕಾತಿ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ: ಜಿಲ್ಲೆಯ ಪ್ರಮುಖ ದ್ವಿಚಕ್ರ ವಾಹನ ಮಾರಾಟ ಸಂಸ್ಥೆಗಳಲ್ಲೊಂದಾದ ಹೀರೋ ಶಕ್ತಿ ಮೋಟಾರ್ಸ್ ತನ್ನ ಉಡುಪಿ ಶೋರೂಮ್‌ಗೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಿಸೆಪ್ಷನಿಸ್ಟ್, ಸಿಆರ್‌ಇ ಸೇಲ್ಸ್ (CRE Sales), ಪಿಡಿಐ ಟೆಕ್ನಿಷಿಯನ್ (PDI Technician), ಆಫೀಸ್ ಬಾಯ್ ಹಾಗೂ ಹೌಸ್‌ಕೀಪಿಂಗ್ ಹುದ್ದೆಗಳಿಗೆ ತಲಾ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ರಿಸೆಪ್ಷನಿಸ್ಟ್ ಹುದ್ದೆಗೆ ಗ್ರಾಹಕರನ್ನು ಸ್ವಾಗತಿಸುವುದು, ಮಾರಾಟ ಪ್ರಚಾರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹಾಗೂ ಕಚೇರಿ ಕಾರ್ಯನಿರ್ವಹಣೆಯ ಜವಾಬ್ದಾರಿಗಳಿರುತ್ತವೆ. […]

ಟೆಲಿಗ್ರಾಂ ಪ್ರಿಯರಿಗೆ ಶಾಕ್, ಭಾರತದಲ್ಲಿ ತಾತ್ಕಾಲಿಕವಾಗಿ ಟೆಲಿಗ್ರಾಂ ಆ್ಯಪ್ ನಿಷೇಧ, ಈ ನಿರ್ಧಾರಕ್ಕೆ ಕಾರಣವೇನು?

ನವದೆಹಲಿ: ನೀಟ್ (NEET-UG 2026) ಮರುಪರೀಕ್ಷೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಟೆಲಿಗ್ರಾಮ್ ಆ್ಯಪ್ ಬಳಕೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಡಿದ ಶಿಫಾರಸಿನ ಮೇರೆಗೆ, ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 69A ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ, ಜೂನ್ 21ರಂದು ನಡೆಯಲಿರುವ ನೀಟ್ ಮರುಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆಯನ್ನು ಕಾಪಾಡುವ ಉದ್ದೇಶದಿಂದ ಟೆಲಿಗ್ರಾಮ್‌ಗೆ ಭಾರತದಲ್ಲಿ ಜೂನ್ 22ರವರೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕಳೆದ ಕೆಲ ದಿನಗಳಿಂದ ಟೆಲಿಗ್ರಾಮ್ […]

ವೈದ್ಯರ ಚೀಟಿಯಿಲ್ಲದೇ ಇನ್ನು ಕೆಮ್ಮಿನ ಸಿರಪ್ ಸಿಗಲ್ಲ!ಆರೋಗ್ಯ ಸಚಿವಾಲಯದ ಕಟ್ಟುನಿಟ್ಟಿನ ಆದೇಶ

ನವದೆಹಲಿ: ದೇಶದಾದ್ಯಂತ ಕೆಮ್ಮಿನ ಸಿರಪ್ಗಳು ಸೇರಿದಂತೆ ವಿವಿಧ ಔಷಧೀಯ ಸಿರಪ್ಗಳ ಖರೀದಿ ಮತ್ತು ಮಾರಾಟದ ನಿಯಮಗಳಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ಗಳನ್ನು ಔಷಧಾಲಯಗಳಿಂದ ಖರೀದಿಸಲು ಸಾಧ್ಯವಾಗುವುದಿಲ್ಲ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 1945ರ ಡ್ರಗ್ಸ್ ನಿಯಮಗಳಿಗೆ ತಿದ್ದುಪಡಿ ಮಾಡಿ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ನೋಂದಾಯಿತ ವೈದ್ಯರು ನೀಡುವ ಪ್ರಿಸ್ಕ್ರಿಪ್ಷನ್ ಕಡ್ಡಾಯಗೊಳಿಸಿದೆ. ಇದುವರೆಗೆ ಕೆಮ್ಮು ಅಥವಾ ಶೀತದ ಸಮಸ್ಯೆ ಎದುರಾದಾಗ ಜನರು ನೇರವಾಗಿ […]

ಜೂ.19: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನಾಚರಣೆ- ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮವು ಜೂನ್ 19 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜರುಗಲಿದೆ. ‌ ‌‌ ‌ನಿರಂತರ ಜನರ ನೋವಿಗೆ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ಹೋರಾಡುವ, ಮಾನವೀಯ ಹೃದಯದ ನಾಯಕ ರಾಹುಲ್ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ 75 ಮಂದಿ […]