ಮೀಟರ್ ಬದಲಾವಣೆ ಕಾಮಗಾರಿ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ಕುಡಿಯುವ ನೀರು ಸ್ಥಾವರದ ಆರ್.ಆರ್. ನಂಬರ್ 6 ರ ಕ್ಯುಬಿಕಲ್ ಮೀಟರ್ ಬದಲಾವಣೆ ಕಾಮಗಾರಿ ನಿರ್ವಹಿಸಲಿರುವ ಹಿನ್ನೆಲೆ, ಜೂನ್ 19 ರಂದು ಉಡುಪಿ ನಗರಸಭೆಯ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾoಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂತನ್, ಡ್ರ‍್ಯಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ ಲಭ್ಯವಿದೆ. ಸಣ್ಣ ಸಸ್ಯಾಗಾರಗಳ/ ನರ್ಸರಿಗಳ ಸ್ಥಾಪನೆಗೆ ಶೇ. 50 ರ ದರದಲ್ಲಿ (ಗರಿಷ್ಠ ರೂ. 10.00 […]

ಜೂನ್ 21ರಂದು ಬಿ.ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನಾ ಸಮಾರಂಭ.

ಕಾರ್ಕಳ: ಭಾರತೀಯ ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಪಡೆದು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಹಾಗೂ ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವು ಜೂನ್ 21ರಂದು ಭಾನುವಾರ ಸಂಜೆ 4 ಗಂಟೆಗೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಲಕ್ಷ್ಮೀಪುರದಲ್ಲಿರುವ […]

ಸ್ಪೈಕರ್ಸ್ ತಂಡದ ವತಿಯಿಂದ ಹಿರಿಯ ಕ್ರೀಡಾಪಟು ಪಾಂಗಾಳ ವಾಸುದೇವ ನಾಯಕ್ ಅವರಿಗೆ ಸನ್ಮಾನ

ಉಡುಪಿ: ಕ್ರೀಡಾ ಮನೋಭಾವ, ಶಿಸ್ತು, ಸಮರ್ಪಣೆ ಮತ್ತು ಯುವ ಪ್ರತಿಭೆಗಳನ್ನು ರೂಪಿಸುವ ಅಪೂರ್ವ ಸಾಮರ್ಥ್ಯದ ಮೂಲಕ ಉಡುಪಿ ಜಿಲ್ಲೆಯ ವಾಲಿಬಾಲ್ ಕ್ರೀಡೆಗೆ ಭದ್ರ ಅಡಿಪಾಯ ಹಾಕಿದ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರ ಪಾಂಗಾಳ ವಾಸುದೇವ ನಾಯಕ್ (ಬಾಬಣ್ಣ) ಅವರನ್ನು ಉಡುಪಿ ರೆಸಿಡೆನ್ಸಿ ಸಭಾಂಗಣದಲ್ಲಿ ಸ್ಪೈಕರ್ಸ್ ತಂಡದ ವತಿಯಿಂದ ಭಾನುವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು, ಬಾಬಣ್ಣ ಅವರು ಕೇವಲ ತರಬೇತುದಾರರಲ್ಲ, ಸಾವಿರಾರು ಕ್ರೀಡಾಪಟುಗಳ ಬದುಕಿಗೆ ದಿಕ್ಕು ತೋರಿದ ಮಾರ್ಗದರ್ಶಕರಾಗಿದ್ದಾರೆ ಎಂದು ಶ್ಲಾಘಿಸಿದರು. ಉಡುಪಿ ಜಿಲ್ಲೆಯ ವಾಲಿಬಾಲ್ […]

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನ ಆಚರಣೆ.

ಮಣಿಪಾಲ, ಜೂನ್ 17: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರ ಅಮೂಲ್ಯ ಕೊಡುಗೆಗಳನ್ನು ಗುರುತಿಸಲು ಮೀಸಲಾಗಿರುವ ವಿಶೇಷ ಕಾರ್ಯಕ್ರಮದೊಂದಿಗೆ 2026 ರ ವಿಶ್ವ ರಕ್ತದಾನಿಗಳ ದಿನವನ್ನು ಡಾ ಟಿ ಎಂ ಎ ಪೈ ಹಾಲ್ ನಲ್ಲಿ ಆಚರಿಸಲಾಯಿತು. ಪ್ರತೀ ವರ್ಷ ಜೂನ್ 14 ರಂದು ವಾರ್ಷಿಕವಾಗಿ ಆಚರಿಸಲಾಗುವ ಈ ಜಾಗತಿಕ ಉಪಕ್ರಮವು ಸುರಕ್ಷಿತ ರಕ್ತ ಮತ್ತು ರಕ್ತ ಉತ್ಪನ್ನಗಳ ನಿರ್ಣಾಯಕ ಅಗತ್ಯವನ್ನು ಎತ್ತಿ ತೋರಿಸುತ್ತದೆ ಮತ್ತು ಸ್ವಯಂಸೇವಕರ ನಿಸ್ವಾರ್ಥ ಕೊಡುಗೆಗಳು ಜೀವಗಳನ್ನು ಉಳಿಸುವವರಿಗೆ […]