“ಧರ್ಮಸ್ಥಳ ಪ್ರಕರಣದಲ್ಲಿ ಸುಮ್ಮನೆ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ, ಹೆಣ್ಣು ಮಕ್ಕಳ ಸಾವುಗಳು ಹೇಗೆ ಸಂಭವಿಸಿದವು ಎಂದು ಪ್ರಶ್ನೆ ಮಾಡುವುದು ತಪ್ಪೇ”:ಪ್ರಕಾಶ್ ರಾಜ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ತಮ್ಮ ಹೆಸರನ್ನು ಉದ್ದೇಶಪೂರ್ವಕವಾಗಿ ತಳುಕು ಹಾಕಲಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ವ್ಯಕ್ತಿ ಎಂದು ಹೇಳಲಾಗುತ್ತಿರುವ ಚಿನ್ನಯ್ಯನೊಂದಿಗೆ ತಮ್ಮ ಯಾವುದೇ ನೇರ ಸಂಪರ್ಕ ಇಲ್ಲ ಎಂದು ಸ್ಪಷ್ಟಪಡಿಸಿದರು. “ಚಿನ್ನಯ್ಯನಿಗೆ ನೀನು ನನ್ನ ಮುಂದೆ ಹೇಳಿದ ಸತ್ಯವನ್ನು ಎಸ್‌ಐಟಿ ಮುಂದೆ ಹೋಗಿ ಹೇಳು. ಸತ್ಯ ಹೇಳಿದರೆ ಊರೇ ಕೊಂಡಾಡುತ್ತದೆ, ನಾನು ನಿನ್ನನ್ನು ತಬ್ಬಿಕೊಳ್ಳುತ್ತೇನೆ […]

ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ನಲ್ಲಿದೆ ಸ್ಪರ್ಧಾತ್ಮಕ ಕೋರ್ಸ್ ಗಳು: ನಿಮ್ಮ ಬದುಕಿಗೆ ಹೊಸ ದಾರಿ ತೋರಿಸುವ ಕೋರ್ಸ್ ಗಳಿಗೆ ಇದೀಗ ಪ್ರವೇಶಾತಿ ಶುರು!

ಮಣಿಪಾಲ: ಶಿಕ್ಷಣ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿರುವ Dr. T.M.A. Pai Polytechnic ನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಎಐಸಿಟಿಇ ಅನುಮೋದನೆ ಹಾಗೂ ಕರ್ನಾಟಕ ಸರ್ಕಾರದ ಡಿಟಿಇಗೆ ಸಂಯೋಜಿತವಾಗಿರುವ ಈ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ತಾಂತ್ರಿಕ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆಗೆ ಹೆಸರಾಗಿದೆ. “ಇಂದು ಕಲಿಯಿರಿ, ನಾಳೆ ನಾಯಕತ್ವ ವಹಿಸಿರಿ” ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಸಂಸ್ಥೆ ಒತ್ತು ನೀಡುತ್ತಿದೆ. ಯಾವೆಲ್ಲ ಕೋರ್ಸ್ ಗಳಿವೆ? ಯಾರು ಸೇರಬಹುದು? […]

ಕಾರ್ಕಳ ತಾಲೂಕು ಆಸ್ಪತ್ರೆಗೆ ಹೊಸ ಪ್ರಸೂತಿ ತಜ್ಞರ ನೇಮಕ

ಕಾರ್ಕಳ: ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾಗಿ ಗುತ್ತಿಗೆ ಆಧಾರದ ಮೇಲೆ ಡಾ. ಸಾಹಿತಿರಮ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಸಂದೀಪ್ ಕುಡ್ವ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ಸುಮಾರು 50 ಗ್ರಾಮಗಳ ಮಹಿಳೆಯರು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಆಗಮಿಸುತ್ತಿದ್ದು, ಕಳೆದ ಮೂರು ವರ್ಷಗಳ ಹಿಂದೆ ಇಲ್ಲಿ ಕಾರ್ಯನಿರ್ವಹಿಸಿದ್ದ ಹೆರಿಗೆ ತಜ್ಞ ಡಾ. ಗಣೇಶ್ ಭಟ್ ಅವರ ಅವಧಿಯಲ್ಲಿ ತಿಂಗಳಿಗೆ ಸರಾಸರಿ 100 ರಿಂದ 150 ಹೆರಿಗೆಗಳು ದಾಖಲಾಗುತ್ತಿದ್ದರು. ಕಾರ್ಕಳ ಮಾತ್ರವಲ್ಲದೆ […]

ಕಾರ್ಕಳದ ಮುಳ್ಕಾಡು ಎಳ್ಳಾರೆ ಶಾಲೆಗೆ ರಾಷ್ಟ್ರಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರದ ಗರಿ, ಕರ್ನಾಟಕದಲ್ಲೇ ಇದು ಟಾಪ್ ಶಾಲೆ

ಕಾರ್ಕಳ: ಗ್ರಾಮೀಣ ಪ್ರದೇಶದಲ್ಲಿದ್ದರೂ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಚಟುವಟಿಕೆಗಳ ಮೂಲಕ ರಾಜ್ಯದ ಗಮನ ಸೆಳೆದಿರುವ ಉಡುಪಿ ಜಿಲ್ಲೆಯ ಮುಳ್ಕಾಡು ಎಳ್ಳಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರತಿಷ್ಠಿತ ಸ್ವಚ್ಛ ವಿದ್ಯಾಲಯ ಪುರಸ್ಕಾರ–2025-26ರ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಸರ್ಕಾರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ್ದು, ಶಾಲೆಯ ಈ ಸಾಧನೆ ಜಿಲ್ಲೆಯಷ್ಟೇ ಅಲ್ಲದೆ ರಾಜ್ಯಕ್ಕೂ ಹೆಮ್ಮೆ ತಂದಿದೆ. ಸ್ವಚ್ಛ ವಿದ್ಯಾಲಯ ಪುರಸ್ಕಾರ ಯೋಜನೆಯಡಿ ದೇಶದಾದ್ಯಂತ ಒಟ್ಟು 11,54,898 ಶಾಲೆಗಳು ನೋಂದಾಯಿಸಿಕೊಂಡಿದ್ದವು. ಕರ್ನಾಟಕದಿಂದ 71,369 ಶಾಲೆಗಳು […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ಮಾರ್ಟ್ ಎನರ್ಜಿ ಹಾರ್ವೆಸ್ಟಿಂಗ್ ವ್ಯವಸ್ಥೆಯ ಅಭಿವೃದ್ಧಿ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪಾದರಾವ್, ಸಾತ್ವಿಕ್, ಶ್ರೀಶಾ ಹಾಗೂ ಕೃಷ್ಣ ಹೆಬ್ಬಾರ್ ಇವರು ಶ್ರೀಮತಿ ಅಕ್ಷತಾ ರಾವ್ ಎಲ್ ಮತ್ತು ಡಾ. ಗಣೇಶ್ ಶ್ರೀನಿವಾಸ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಕಾಲ್ನಡಿಗೆಯ ಒತ್ತಡದಿಂದ ವಿದ್ಯುತ್ ಉತ್ಪಾದಿಸುವ ಸ್ಮಾರ್ಟ್ ಎನರ್ಜಿ ಹಾರ್ವೆಸ್ಟಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ದೈನಂದಿನ ಮಾನವ ಚಟುವಟಿಕೆಗಳಿಂದ ಉಂಟಾಗುವ ಶಕ್ತಿಯನ್ನು ನವೀಕರಿಸಬಹುದಾದ ಇಂಧನದ ಮೂಲವಾಗಿ ಬಳಸಿಕೊಂಡು ಸುಸ್ಥಿರ ಇಂಧನ ಪರಿಹಾರಗಳು ಹಾಗೂ […]