ಐಟಿಐ ಮುಗಿಸಿದ್ದೀರಾ, ಹಾಗಾದ್ರೆ ಕೆಎಸ್‌ಆರ್‌ಟಿಸಿಯ ಈ ತರಬೇತಿ ಮೂಲಕ ಉದ್ಯೋಗ ಪಡೆಯಲು ನಿಮಗಿದೆ ಒಂದು ಬೆಸ್ಟ್ ಆಯ್ಕೆ! ಬೇಗ ಅರ್ಜಿ ಸಲ್ಲಿಸಿ

ಮಂಡ್ಯ: ಐಟಿಐ (ITI) ಪೂರ್ಣಗೊಳಿಸಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಮಂಡ್ಯ ವಿಭಾಗವು ಸಿಹಿಸುದ್ದಿ ನೀಡಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಶಿಶಿಕ್ಷು ತರಬೇತಿ (Apprenticeship) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ತರಬೇತಿ ಪಡೆಯುವ ಮೂಲಕ ವೃತ್ತಿಜೀವನಕ್ಕೆ ಉತ್ತಮ ಅಡಿಪಾಯ ಹಾಕಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ಯಾವೆಲ್ಲಾ ಹುದ್ದೆಗಳಿಗೆ ಅವಕಾಶ? ಮಂಡ್ಯ ವಿಭಾಗದ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕೆಳಕಂಡ ತಾಂತ್ರಿಕ ವೃತ್ತಿಗಳಲ್ಲಿ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸುವ […]
ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್’ಆ್ಯಪ್ ನಲ್ಲಿ ಇನ್ನು ಎಲ್ಲಾ ರೈಲುಸೇವೆಗಳು ಲಭ್ಯ, ಟಿಕೆಟ್ ಬುಕ್ಕಿಂಗ್ ನಿಂದ ಹಿಡಿದು ಊಟವನ್ನೂ ಬುಕ್ ಮಾಡಬಹುದು

ನವದೆಹಲಿ: ರೈಲು ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ‘ರೈಲ್ಒನ್ (RailOne)’ ಹೆಸರಿನ ಹೊಸ ಸೂಪರ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ರೈಲ್ವೆಗೆ ಸಂಬಂಧಿಸಿದ ಎಲ್ಲಾ ಪ್ರಮುಖ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಈ ಆ್ಯಪ್, ಪ್ರಯಾಣಿಕರ ಸಮಯ ಉಳಿಸುವುದರ ಜೊತೆಗೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸುವ ಗುರಿ ಹೊಂದಿದೆ. ಇಲ್ಲಿಯವರೆಗೆ ರೈಲು ಟಿಕೆಟ್ ಬುಕ್ ಮಾಡಲು, ರೈಲುಗಳ ಲೈವ್ ಸ್ಥಿತಿ ಪರಿಶೀಲಿಸಲು, ಪಿಎನ್ಆರ್ (PNR) ಮಾಹಿತಿ ತಿಳಿದುಕೊಳ್ಳಲು, ಆಹಾರ ಆರ್ಡರ್ ಮಾಡಲು […]
ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್‌ನಿಂದ ಜೂ. 23ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಜೂ. 30 ರಿಂದ ಜು. 29 ರ ವರೆಗೆ ನಡೆಯಲಿದೆ. ಚುನಾವಣಾ ಆಯೋಗದ ಮೂಲಕ […]
ಜಿಮ್ ಮುಗಿಸಿ ಬಂದ ಬಾಡಿ ಬಿಲ್ಡರ್ ಕುಸಿದು ಸಾವು; ಅಂತರರಾಷ್ಟ್ರೀಯ ಸ್ಪರ್ಧೆಗೆ ಸಜ್ಜಾಗಿದ್ದ ಯುವ ಸಾಧಕನಿಗೆ ಅಂತಿಮ ವಿದಾಯ

ದಾವಣಗೆರೆ: ಜಿಮ್‌ನಲ್ಲಿ ತರಬೇತಿ ಮುಗಿಸಿಕೊಂಡು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಕೆಟಿಜೆ ನಗರದ ನಿವಾಸಿ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಜ್ಜಾಗುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಮೃತಪಟ್ಟವರು. ಮಂಗಳವಾರ ರಾತ್ರಿ ಸುಮಾರು 8.30ರ ವೇಳೆಗೆ ಜಿಮ್‌ನಿಂದ ಮನೆಗೆ ಬಂದಿದ್ದ ಸುಶೀಲ್ ಕುಮಾರ್ ಅವರಿಗೆ ತಲೆ ಸುತ್ತುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅವರು […]