ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ ಶ್ರೀಮತಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ […]

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು , ಹಂಪನಕಟ್ಟೆ

ಕಾಲೇಜು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭದ ವರದಿ:ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ 16-06-2026 ರಂದು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶವನ್ನು ಹೊಂದಿತ್ತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.ಮುಖ್ಯ […]

ರಾಹುಲ್ ಗಾಂಧಿ ಪ್ರಧಾನಿ ಆಗಬೇಕಾದರೆ ಎಸ್ ಐಆರ್ ಪ್ರಕ್ರಿಯೆ ಬಗ್ಗೆ ನಾವೆಲ್ಲ ಜಾಗರೂಕರಾಗಿರಬೇಕು: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ನಾವೆಲ್ಲ ತುಂಬ ಜಾಗರೂಕರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರದಲ್ಲಿ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ಉದ್ಯಮಿಗಳು ಮತ್ತು ಶ್ರೀಮಂತರ ಪರ ಇರುವ ಪಕ್ಷವಾಗಿದ್ದು, ಕಾಂಗ್ರೆಸ್ ಪಕ್ಷವು […]

ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು

ಉಡುಪಿ: ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ಮಾಡಬೇಕು. ಇದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ […]

ಎಸ್ ಎಲ್ ವಿ ಟಿ ಯಲ್ಲಿ ಶ್ರೀಮದ್ ಭಾಗವತ ಸಪ್ತಾಹ ಪ್ರವಚನಕ್ಕೆ ಭಕ್ತರಿಗೆ ಆಹ್ವಾನ

ಪುತ್ತೂರು: ರಜತಪೀಠಪುರ ಪುತ್ತೂರಿನ ಆರಾಧ್ಯ ದೇವರಾದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪವಿತ್ರ ಸಾನ್ನಿಧ್ಯದಲ್ಲಿ, ಸಪ್ತಗಿರಿ ಜ್ಞಾನಹಸ್ತದ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸಹಯೋಗದೊಂದಿಗೆ 2026ರ ಜೂನ್ 21ರಿಂದ 27ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಈ ಆಧ್ಯಾತ್ಮಿಕ ಮಹೋತ್ಸವದಲ್ಲಿ ಖ್ಯಾತ ವಿದ್ವಾಂಸರಾದ ಶ್ರೀಶ ಭಟ್ ಮುದರಂಗಡಿ ಹಾಗೂ ಕುತ್ಪಾಡಿ ಕೃಷ್ಣ ರಾಜ್ ಆಚಾರ್ಯ ಅವರಿಂದ ಶ್ರೀಮದ್ ಭಾಗವತ ಮಹಾಪುರಾಣದ ಪ್ರವಚನ ನಡೆಯಲಿದ್ದು, ಭಕ್ತರು ಭಾಗವಹಿಸಿ ಆಧ್ಯಾತ್ಮಿಕ ಜ್ಞಾನ […]