ತೊಟ್ಟಂ ವಿಶ್ರಾಮ್ ಹೋಮ್ ಸ್ಟೇ ಮೇಲೆ ದಾಳಿ: ಎಂಡಿಎಂಎ, ಗಾಂಜಾ ವಶ; ಹೋಮ್ ಸ್ಟೇ ಮಾಲೀಕ ಸಹಿತ 7 ಮಂದಿಯ ಬಂಧನ

ಉಡುಪಿ: ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ. ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಉಪಾಧೀಕ್ಷಕರು (ಉಡುಪಿ ಉಪವಿಭಾಗ) ಹಾಗೂ ಮಲ್ಪೆ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆಯ […]

ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ […]

ಗ್ರಾಮ ಸಹಾಯಕ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮದ ಗ್ರಾಮ ಸಹಾಯಕ ತಾತ್ಕಾಲಿಕ ಹುದ್ದೆ ನೇಮಕಾತಿಗೆ, ಷರತ್ತಿಗೊಳಪಟ್ಟು 25 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದ್ರಿ ಗ್ರಾಮದಲ್ಲಿ ವಾಸವಿರುವ, ಓದು, ಬರಹ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ, ಈ ಹಿಂದೆ ಗ್ರಾಮ ಸಹಾಯಕರಾಗಿದ್ದು, ಸೇವೆಯಲ್ಲಿರುವಾಗಲೇ ಮರಣ ಹೊಂದಿದವರ ಕುಟುಂಬದ ಸದಸ್ಯರು ಅಥವಾ ಸ್ಥಳೀಯ ಕಚೇರಿಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 30 ರ ಒಳಗಾಗಿ ಉಡುಪಿ ತಾಲೂಕು ಕಚೇರಿಗೆ ಅರ್ಜಿ […]

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) 1 ರಿಂದ 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾoಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ […]

ಧರ್ಮಸ್ಥಳ ಪ್ರಕರಣ: ತನಿಖೆ ಚುರುಕು, ನಾಪತ್ತೆಯಾದವರ ಡಿಎನ್‌ಎ ಹೊಂದಾಣಿಕೆ ಪ್ರಕ್ರಿಯೆ ಶುರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಪತ್ತೆಯಾಗಿರುವ 17 ಮಂದಿಯ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಿ, ಬಂಗ್ಲೆಗುಡ್ಡೆ ಮೀಸಲು ಅರಣ್ಯದಲ್ಲಿ ಪತ್ತೆಯಾದ ಮಾನವ ಅವಶೇಷಗಳೊಂದಿಗೆ ಡಿಎನ್‌ಎ ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ. 2025ರಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್‌ಐಟಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಏಳು ಮಾನವ ತಲೆಬುರುಡೆಗಳು ಸೇರಿದಂತೆ ಹಲವು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಇದೇ ಪ್ರದೇಶದಿಂದ ಈ ಹಿಂದೆ ಮಾನವ ತಲೆಬುರುಡೆಯೊಂದನ್ನು ದೂರುದಾರರು ನ್ಯಾಯಾಲಯಕ್ಕೆ […]