ಟೆಂಡರ್ ಆಹ್ವಾನ

ಉಡುಪಿ: ಕಾರ್ಕಳದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಕ್ಯಾಂಟೀನ್ ಅನ್ನು ನಡೆಸಲು ಅನುಭವವುಳ್ಳ ಹೋಟೆಲ್ ಉದ್ಯಮ / ಹೋಟೆಲ್ ಮಾಲೀಕರಿಂದ ಶರ್ತಬದ್ಧ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ನಲ್ಲಿ ಬಾಗವಹಿಸಲಿಚ್ಛಿಸುವ ಟೆಂಡರ್‌ದಾರರು ಟೆಂಡರ್ ನೋಟಿಫಿಕೇಶನ್ ನಮೂನೆಗಳನ್ನು ಕಾರ್ಕಳದ ಹಿರಿಯ ಸಿವಿಲ್ ನ್ಯಾಯಾಲಯದ ಕಚೇರಿಯಿಂದ ಜೂನ್ 23 ರಿಂದ ಜುಲೈ 14 ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರ ವರೆಗೆ ಪಡೆಯಬಹುದಾಗಿದೆ. ಮೊಹರು ಮಾಡಿದ ಲಕೋಟೆಯೊಂದಿಗೆ ಟೆಂಡರ್ ಸಲ್ಲಿಸಲು ಜುಲೈ 15 ಕೊನೆಯ ದಿನ. ಜು.16 ರಂದು ಸಂಜೆ 5 […]
ಬಾಕಿ ಉಳಿದ ಡಿಪ್ಲೋಮಾ ಕೋರ್ಸ್ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಉಡುಪಿಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಹಂಚಿಕೆಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ಜಿ.ಟಿ.ಟಿ.ಸಿ.ಯಲ್ಲಿ ವಿವಿದ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. […]
ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿಯ ಉಪ್ಪೂರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ( ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ, ಇ&ಸಿ) ಎಂ.ಎಸ್ಸಿ (ಎಲೆಕ್ಟಾçನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ […]
ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಜೂ. 30 ಕೊನೆ ದಿನ

ಉಡುಪಿ: ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, […]
ವೃದ್ಧಾಶ್ರಮ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಜಿಲ್ಲೆಯ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃದ್ಧಾಶ್ರಮ ಪ್ರಾರಂಭಿಸುವ ಸ್ವಯಂ ಸೇವಾ ಸಂಸ್ಥೆಯು ಅಸ್ತಿತ್ವಕ್ಕೆ ಬಂದು ಕನಿಷ್ಠ 2 ವರ್ಷಗಳಾಗಿರಬೇಕು ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆದು ಸೂಕ್ತ ಲಗತ್ತುಗಳೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯಲ್ಲಿ […]