ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಸೊಸೈಟಿ ರಿಜಿಸ್ಟ್ರೇಷನ್ ಆ್ಯಕ್ಟ್/ಟ್ರಸ್ಟ್ ಆ್ಯಕ್ಟ್ ನಡಿ ನೋಂದಣಿಯಾಗಿ ಕನಿಷ್ಠ 02 ವರ್ಷಗಳಾಗಿರುವ, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು ಹೊಂದಿರುವ, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವ ಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹೊಂದಿರುವ, ಸಂಸ್ಥೆಯ ಆಡಳಿತ ಮಂಡಳಿಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು […]
ಎಸ್.ಎಸ್.ಸಿ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು, ಸಂಸ್ಥೆಗಳು, ವಿವಿಧ ಸಾಂವಿಧಾನಿಕ ಸಂಸ್ಥೆಗಳು, ಶಾಸನಬದ್ದ ಸಂಸ್ಥೆಗಳು, ನ್ಯಾಯಮಂಡಳಿಗಳು ಇತ್ಯಾದಿಗಳಲ್ಲಿನ ವಿವಿಧ ಗ್ರೂಪ್ ‘ಬಿ’ ಗೆಜೆಟೆಡ್ ಅಲ್ಲದ ಮತ್ತು ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಉದ್ಯೋಗಾಕಾಂಕ್ಷಿಗಳಿಂದ ವೆಬ್‌ಸೈಟ್ https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ 18 ರಿಂದ 32 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯನ್ನು […]
ಉಡುಪಿ: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಮುಳ್ಳುಹಂದಿ ರಕ್ಷಣೆ

ಉಡುಪಿ: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಮುಳ್ಳುಹಂದಿಯೊಂದನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ನಗರದ ಚಿತ್ಪಾಡಿಯ ಶ್ರೀನಿವಾಸನಗರದಲ್ಲಿ ನಡೆದಿದೆ. ಗಾಯಗೊಂಡ ಸ್ಥಿತಿಯಲ್ಲಿ ಮುಳ್ಳುಹಂದಿ ಇರುವುದನ್ನು ಸ್ಥಳೀಯ ನಿವಾಸಿ ಧನಂಜಯ ದೇವಾಡಿಗ ಗಮನಿಸಿ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅವರು ಚಾಣಕ್ಷತನದಿಂದ ಗೋಣಿ ಚೀಲದ ಸಹಾಯದಿಂದ ಕಾರ್ಯಾಚರಣೆ ನಡೆಸಿ ಮುಳ್ಳುಹಂದಿಯನ್ನು ಸುರಕ್ಷಿತವಾಗಿ ಹಿಡಿದು ರಕ್ಷಸಿದರು. ಮುಳ್ಳುಹಂದಿ ಅಪಾಯದ ಸಂದರ್ಭಗಳಲ್ಲಿ ತನ್ನ ಮುಳ್ಳುಗಳನ್ನು ಎರಗಿಸಿ ಪ್ರತಿದಾಳಿ ನಡೆಸುವ […]
ಫ್ರೀ ಬಸ್ ಸೇವೆ ಪಡೆಯಲು ಇನ್ನು ವೋಟರ್ ಐಡಿ ಕಡ್ಡಾಯ: ದುರ್ಬಳಕೆ ತಡೆಯಲು ಹೊಸ ಪ್ಲ್ಯಾನ್ ರೆಡಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯ ದುರ್ಬಳಕೆಯನ್ನು ತಡೆಯಲು ಸಾರಿಗೆ ಇಲಾಖೆ ಹೊಸ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವ ಆರೋಪಗಳ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ವ್ಯವಸ್ಥೆಯಡಿ ಕರ್ನಾಟಕದ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಹೊಂದಿರುವ ಮಹಿಳೆಯರು ಹಾಗೂ ತೃತೀಯ ಲಿಂಗಿಗಳು ಮಾತ್ರ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಹರಾಗಲಿದ್ದಾರೆ. ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ […]
ಹಿರಿಯಡ್ಕ ಉಚಿತ ಗಿಡ ವಿತರಣೆ ಕಾರ್ಯಕ್ರಮ 2026

ಹಿರಿಯಡ್ಕ: ಪ್ರಕೃತಿ ಸಂರಕ್ಷಣೆ ಮತ್ತು ಹಸಿರು ಪರಿಸರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಮಹತ್ವದ ಹೆಜ್ಜೆಯನ್ನಿಟ್ಟಿವೆ. ಪರಿಸರ ಕಾಳಜಿಯ ಈ ಉದಾತ್ತ ಉದ್ದೇಶದೊಂದಿಗೆ ಹಿರಿಯಡ್ಕದಲ್ಲಿ ಮುಂಬರುವ ಸೋಮವಾರ ಸಾರ್ವಜನಿಕರಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಈ ಅಭಿಯಾನದ ಮೂಲಕ ಸ್ಥಳೀಯ ನಿವಾಸಿಗಳಿಗೆ ಉಚಿತವಾಗಿ ಸಸ್ಯಗಳನ್ನು ವಿತರಿಸುವ ಹಾಗೂ ಗಿಡ ನೆಡುವ ಮಹತ್ತರ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಪ್ರಿ ಓನ್ಡ್ ವೆಹಿಕಲ್ ಡೀಲರ್ ಅಸೋಸಿಯೇಷನ್ (ರಿ.) ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಈ ಹಸಿರು ಕ್ರಾಂತಿಗೆ ಮುನ್ನುಡಿ ಬರೆದಿದೆ. […]