ಹೆಬ್ರಿ: ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ.

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ಜೂನ್ 18ರ ಗುರುವಾರದಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಅವರು ವಹಿಸಿದ್ದರು. ಎಸ್.ಆರ್. […]
ಎಸ್ ಎಲ್ ವಿ ಟಿ ಯಲ್ಲಿ ಶ್ರೀಮದ್ ಭಾಗವತ ಸಪ್ತಾಹ ಪ್ರವಚನಕ್ಕೆ ಭಕ್ತರಿಗೆ ಆಹ್ವಾನ

ಪುತ್ತೂರು: ರಜತಪೀಠಪುರ ಪುತ್ತೂರಿನ ಆರಾಧ್ಯ ದೇವರಾದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪವಿತ್ರ ಸಾನ್ನಿಧ್ಯದಲ್ಲಿ, ಸಪ್ತಗಿರಿ ಜ್ಞಾನಹಸ್ತದ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸಹಯೋಗದೊಂದಿಗೆ 2026ರ ಜೂನ್ 21ರಿಂದ 27ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಈ ಆಧ್ಯಾತ್ಮಿಕ ಮಹೋತ್ಸವದಲ್ಲಿ ಖ್ಯಾತ ವಿದ್ವಾಂಸರಾದ ಶ್ರೀಶ ಭಟ್ ಮುದರಂಗಡಿ ಹಾಗೂ ಕುತ್ಪಾಡಿ ಕೃಷ್ಣ ರಾಜ್ ಆಚಾರ್ಯ ಅವರಿಂದ ಶ್ರೀಮದ್ ಭಾಗವತ ಮಹಾಪುರಾಣದ ಪ್ರವಚನ ನಡೆಯಲಿದ್ದು, ಭಕ್ತರು ಭಾಗವಹಿಸಿ ಆಧ್ಯಾತ್ಮಿಕ ಜ್ಞಾನ […]
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಜನ್ಮದಿನಾಚರಣೆ, ಅಶಕ್ತರಿಗೆ ಸವಲತ್ತುಗಳ ವಿತರಣೆ

ಉಡುಪಿ: ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ […]