ಕಾಂಗ್ರೆಸ್ ಕಾರ್ಯಕ್ರಮದಿಂದ ನೀಟ್ ವಿದ್ಯಾರ್ಥಿಗಳಿಗೆ ತೊಂದರೆ : ಆರ್.ಅಶೋಕ್ ಆರೋಪ

ಬೆಂಗಳೂರು,ಜೂ.22- ವೈದ್ಯಕೀಯ ಪ್ರವೇಶಾತಿ ಕೋರ್ಸ್‌ಗಳಿಗೆ ನಡೆದ ನೀಟ್-ಯುಜಿ 2026 ಪರೀಕ್ಷೆಗೆ ಕೆಲವು ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕೇಂದ್ರಗಳಿಗೆ ಬಾರದಿರಲು ಕಾರಣವಾಗಿದ್ದೇ ಕಾಂಗ್ರೆಸ್ ಸಮಾವೇಶ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು, ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಹೆಚ್ಚಿನ ವಾಹನಗಳು ವಿವಿಧ ಭಾಗಗಳಿಂದ ಆಗಮಿಸಿ ನಗರದಲ್ಲಿ ಸಂಚಾರಿ ದಟ್ಟಣೆ ಶುರುವಾಯಿತು. ಪರಿಣಾಮ ವಿದ್ಯಾರ್ಥಿಗಳು ರಸ್ತೆ ಮಧ್ಯೆ ಭಾಗದಲ್ಲಿ ಸಿಲುಕಿ ಹಾಕಿಕೊಂಡಿದ್ದರಿಂದ ಸಕಾಲಕ್ಕೆ ಸರಿಯಾಗಿ ಬರಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾಂಗ್ರೆಸ್ […]
ಕಾರ್ಕಳ: ಕ್ರೈಸ್ಟ್ ಕಿಂಗ್ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ವಿನಾಯಕ ಕುಡ್ವರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಆರೋಗ್ಯಕರ ಜೀವನಕ್ಕೆ ಯೋಗವೇ ಸರಳ ಮತ್ತು ಪರಿಣಾಮಕಾರಿ ಮಾರ್ಗವಾಗಿದೆ. ಬೆಳಗ್ಗಿನ ಓದು ವಿದ್ಯಾರ್ಥಿಗಳಜ್ಞಾನವನ್ನು ಹೆಚ್ಚಿಸಿದರೆ, ಯೋಗವು ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯವೃದ್ದಿಯಾಗುತ್ತದೆ” ಎಂಬುದನ್ನು ತಿಳಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ […]
ಮನೆಗೆ ವಾಪಾಸ್ ಬಂದ ‘ಚಿನ್ನು’,ಹುಡುಕಿಕೊಟ್ಟವರಿಗೆ ಸಿಕ್ಕಿತು ಬಂಪರ್ ಬಹುಮಾನ: ನಾಯಿಯಾಗಿ ಮಿಡಿದ ಹೃದಯ!

ಪುತ್ತೂರು: ಪುತ್ತೂರು ಸಮೀಪದ ಪೋಳ್ಯದಲ್ಲಿ ನಡೆದ ಒಂದು ಅಪರೂಪದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮನೆಯ ಸದಸ್ಯನಂತೆಯೇ ಪ್ರೀತಿಯಿಂದ ಸಾಕಿದ್ದ ದೇಸಿ ತಳಿಯ ‘ಚಿನ್ನು’ ಎಂಬ ನಾಯಿ ಕಾಣೆಯಾದಾಗ, ಅದರ ಮಾಲೀಕ ಗಣೇಶ್ ಕೇರ ಅವರು ಪಟ್ಟ ಆತಂಕ ಮತ್ತು ಹುಡುಕಾಟ ಕೊನೆಗೂ ಸಂತಸದ ಕ್ಷಣಕ್ಕೆ ಕಾರಣವಾಗಿದೆ. ಕೊಟ್ಟ ಮಾತಿನಂತೆ ನಾಯಿ ಹುಡುಕಿಕೊಟ್ಟವರಿಗೆ ಬರೋಬ್ಬರಿ ₹50 ಸಾವಿರ ಬಹುಮಾನ ನೀಡಿ ಅವರು ಮಾನವೀಯತೆ ಮೆರೆದಿದ್ದಾರೆ. ಗಣೇಶ್ ಕೇರ ಅವರು ತಮ್ಮ ಮನೆಯಲ್ಲಿ ಸುಮಾರು […]
ಉಡುಪಿ ಪ್ರಕೃತಿ ಕ್ಲಬ್‌ನ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ

ಉಡುಪಿ: ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಲ| ಪ್ರಮೋದ್ ಕುಮಾರ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಲ| ಪ್ರಶಾಂತ್ ಶೀರೂರು ಅವಿರೋಧವಾಗಿ ಖಜಾಂಚಿ ಯಾಗಿ ಲ | ಸದಾಶಿವ ಶೆಟ್ಟಿ ಉಪಾಧ್ಯಕ್ಷರಾಗಿ ಲ | ಸುಧಾಕರ್ ವಿ ಶೆಟ್ಟಿ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಆಯ್ಕೆಯ ಹಿನ್ನೆಲೆಯಲ್ಲಿ ಕ್ಲಬ್ ಸದಸ್ಯರು ಅಭಿನಂದನೆ ಸಲ್ಲಿಸಿ, ಅವರ ನೇತೃತ್ವದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಹಾಗೂ ಜನಪರ ಚಟುವಟಿಕೆಗಳು ಇನ್ನಷ್ಟು ಪರಿಣಾಮಕಾರಿಯಾಗಿ […]
ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ‘ಇಷ್ಟವಿಲ್ಲದಿದ್ದರೆ ನಂದಿನಿ ಹಾಲು ಕುಡಿಯಬೇಡಿ’ ಎಂದ ನ್ಯಾಯಪೀಠ

ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ಚರ್ಮರೋಗ ತಜ್ಞೆ ಡಾ. ಶರಣ್ಯ ಪದ್ಮ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ವಿಚಾರಣೆ ವೇಳೆ ನ್ಯಾಯಪೀಠ ವೈದ್ಯೆಯ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಏನಿದು ಪ್ರಕರಣ? ಕಳೆದ ಫೆಬ್ರವರಿಯಲ್ಲಿ ಡಾ. ಶರಣ್ಯ ಪದ್ಮ ಅವರು ನಂದಿನಿಯ ಸ್ಟ್ರಾಬೆರಿ ರುಚಿಯ ಹಾಲು ಸೇರಿದಂತೆ ಕೆಲವು ಉತ್ಪನ್ನಗಳು ನೈಸರ್ಗಿಕ ಹಣ್ಣುಗಳನ್ನು ಹೊಂದಿಲ್ಲ ಹಾಗೂ ಕೃತಕ ಬಣ್ಣ ಮತ್ತು ಸಂರಕ್ಷಕಗಳನ್ನು ಬಳಸಲಾಗುತ್ತದೆ ಎಂದು ಹೇಳುತ್ತಾ ಇನ್‌ಸ್ಟಾಗ್ರಾಮ್ ಸೇರಿದಂತೆ […]