ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ; ಎರಡು ವರ್ಷದಲ್ಲೇ ಅಧಿಕಾರ ತ್ಯಾಗ !

ಲಂಡನ್ : ತೀವ್ರ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು, ಸ್ವಪಕ್ಷದೊಳಗಿನ ಹೆಚ್ಚುತ್ತಿರುವ ಅಸಮಾಧಾನ ಹಾಗೂ ನಾಯಕತ್ವದ ವಿರುದ್ಧದ ಬಹಿರಂಗ ಸವಾಲಿನ ನಡುವೆಯೇ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರ ತ್ಯಜಿಸಿರುವುದು ಬ್ರಿಟನ್ ರಾಜಕೀಯದಲ್ಲಿ ಮತ್ತೊಂದು ನಾಟಕೀಯ ಬೆಳವಣಿಗೆಗೆ ಕಾರಣವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಬ್ರಿಟಿಷ್ ಪ್ರಧಾನಿಯಾಗಿ ಅವರು ಗುರುತಿಸಿಕೊಂಡಿದ್ದಾರೆ.ಲಂಡನ್‌ನ […]

ಒಂದು ವಾಹನದ ಮೇಲೆ ಬರೋಬ್ಬರಿ 100 ಸಂಚಾರ ಉಲ್ಲಂಘನೆ ಪ್ರಕರಣ, ಶೇ.50 ರಿಯಾಯಿತಿಯಲ್ಲಿ₹27,500 ಪಾವತಿಸಿದ ವಾಹನ ಸವಾರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳನ್ನು ಪಾವತಿಸಲು ರಾಜ್ಯ ಸರ್ಕಾರ ನೀಡಿರುವ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ನಾಗರಿಕರೊಬ್ಬರು ತಮ್ಮ ವಾಹನದ ಮೇಲೆ ದಾಖಲಾಗಿದ್ದ 100 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ಸೌಲಭ್ಯ ಪಡೆದು ಒಟ್ಟು ₹27,500 ದಂಡವನ್ನು ಪಾವತಿಸಿದ್ದಾರೆ. ಈ ಮೂಲಕ ಸರ್ಕಾರದ ವಿಶೇಷ ರಿಯಾಯಿತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳ ಮೇಲೆ ಜೂನ್ […]

ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ: ಜೂ.22 ರಿಂದ 29ರವರೆಗೆ ಆಸ್ತಮಾ ರೋಗದ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲ: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ಜೂನ್ 22 ರಿಂದ 29ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಆಸ್ತಮಾ ರೋಗದ ಉಚಿತ ತಪಾಸಣೆ, ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರವು ನಡೆಯಲಿರುವುದು. ಸುಮಾರು 20 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನ ಆಸ್ತಮಾ ರೋಗಿಗಳು ಹಾಗೂ ಅಲರ್ಜಿಯಿಂದಾಗಿ ಆಗಾಗ್ಗೆ ಕೆಮ್ಮು, ವೀಸಿಂಗ್ (ಉಸಿರಾಟದಲ್ಲಿ ಶಬ್ದ) ಅಥವಾ ಉಸಿರಾಟದ ತೊಂದರೆ ಅನುಭವಿಸುವವರು. ಧೂಳಿನಿಂದ ಉಂಟಾಗುವ […]

ಕೋಟ ಸರ್ಕಲ್‌ನಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ (45) ಎಂದು ಗುರುತಿಸಲಾಗಿದೆ. ಸತೀಶ್ ಆಚಾರ್ ಅವರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಸತೀಶ್ ಆಚಾರ್ […]

ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ: ಐಎಂಡಿ

ಬೆಂಗಳೂರು: ರಾಜ್ಯದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದೆ. ಆದರೂ, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ದುರ್ಬಲ ಮುಂಗಾರು ಇರಲಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ 24 ರವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 22, 23 ಮತ್ತು 25 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು […]