ಟ್ರಂಪ್‌-ಮೆಲೊನಿ ಮುನಿಸು: ಅಮೆರಿಕ-ಇಟಲಿ ನಡುವೆ ರಾಜತಾಂತ್ರಿಕ ಬಿಕ್ಕಟ್ಟು.

ವಾಷಿಂಗ್ಟನ್/ರೋಮ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೊನಿ ನಡುವಣ ಮುಸುಕಿನ ಗುದ್ದಾಟದಿಂದಾಗಿ ಉಭಯ ರಾಷ್ಟ್ರಗಳ ನಡುವಣ ರಾಜತಾಂತ್ರಿಕ ಬಾಂಧವ್ಯದಲ್ಲಿ ಬಿರುಕು ಮೂಡಿದೆ.ಸೈದ್ಧಾಂತಿಕವಾಗಿ ಟ್ರಂಪ್‌ ಹಾಗೂ ಮೆಲೊನಿ ಬಲಪಂಥೀಯ ಹಾಗೂ ರಾಷ್ಟ್ರೀಯತಾವಾದಿ ನಾಯಕರಾಗಿದ್ದರೂ ಇತ್ತೀಚಿನ ಭೌಗೋಳಿಕ ರಾಜಕೀಯ ವಿದ್ಯಮಾನಗಳು ಅಮೆರಿಕ ಹಾಗೂ ಇಟಲಿ ನಡುವಣ ಸಂಬಂಧ ಹಳಸುವಂತೆ ಮಾಡಿದೆ.ಇಬ್ಬರು ನಾಯಕರ ನಡುವಣ ವೈಮನಸ್ಸು ಮತ್ತು ರಾಜತಾಂತ್ರಿಕ ಸಂಬಂಧಕ್ಕೆ ಪೆಟ್ಟು ನೀಡಿದ್ದಷ್ಟೇ ಅಲ್ಲ, ಇರಾನ್ ವಿರುದ್ಧದ ಯುದ್ಧ ಮತ್ತು ನ್ಯಾಟೊ ಬಣದೊಂದಿಗಿನ ಟ್ರಂಪ್‌ ಮುನಿಸಿನೊಂದಿಗೂ […]

ಕಾರ್ಕಳ: ಬಿ.ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಹಾಗೂ ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಕಾರ್ಕಳ ತಾಲೂಕಿನ ಹಿರ್ಗಾನ-ಲಕ್ಷ್ಮೀಪುರದಲ್ಲಿರುವ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಮಾತನಾಡಿ, ಸದಾಶಿವ ಪ್ರಭು ಅವರು ತಮ್ಮ ಜೀವನವನ್ನು ಆದರ್ಶಮಯವಾಗಿ ರೂಪಿಸಿಕೊಂಡು ಆಡಳಿತ ಕ್ಷೇತ್ರದಲ್ಲಿ […]

ಹಿರಿಯಡ್ಕ: ಪ್ರೀ ಓನಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಶನ್ ಉಡುಪಿ ಹಾಗೂ ಯು ಸಿ ಡೆವಲಪರ್ಸ್ ವತಿಯಿಂದ ಉಚಿತ ಗಿಡ ವಿತರಣೆ, ಗಿಡ ನೆಡುವ ಕಾರ್ಯಕ್ರಮ

ಉಡುಪಿ: ಪ್ರೀ ಓನಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಶನ್ ಉಡುಪಿ ಹಾಗೂ ಯುಸಿ ಡೆವಲಪರ್ಸ್ ವತಿಯಿಂದ 1000ಕ್ಕೂ ಮಿಕ್ಕಿ ಹಣ್ಣು ಹಂಪಲಿನ ಗಿಡಗಳ ಉಚಿತ ವಿತರಣೆ ಹಾಗೂ ನೆಡುವ ಕಾರ್ಯಕ್ರಮದ ಉದ್ಘಾಟನೆಯು ಜೂ.22 ರಂದು ಹಿರಿಯಡ್ಕ ಡಿಗ್ರಿ ಕಾಲೇಜ್, ಮುಖ್ಯ ರಸ್ತೆಯ ಬಳಿ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಭಾರತ ಸರ್ಕಾರದ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಕರ್ನಾಟಕ ಮತ್ತು ಗೋವಾ ವಿಭಾಗದ ಹೆಚ್ಚುವರಿ ಆಯುಕ್ತರಾದ ಡಾ. ಸಾಗರ್ ದೇಶಪಾಂಡೆ ಮಾತನಾಡಿ, ಮಕ್ಕಳಲ್ಲಿ ಸಂಸ್ಕಾರ ಮತ್ತು ಸಾಮಾಜಿಕ ಜಾಗೃತಿ ಬೆಳೆಯಲು […]

ಉಡುಪಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ?ಪೊಲೀಸರಿಂದ ತೀವ್ರ ಶೋಧ ಕಾರ್ಯ

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣಕ್ಕೆ ಆಗಮಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಬೆದರಿಕೆ […]