ಸಾಂಸ್ಕೃತಿಕ ಚಟುವಟಿಕೆಗಳು ಮಾನಸಿಕ ಆರೋಗ್ಯ ವೃದ್ಧಿಯ ಶಕ್ತಿ: ಡಾ.ಗಣನಾಥ ಎಕ್ಕಾರು

ಉಡುಪಿ: ಮನುಷ್ಯನ ದೇಹಕ್ಕೆ ಮಾನಸಿಕ ದೈಹಿಕ ಹಾಗೂ ಸಾಂಸ್ಕೃತಿಕ ಅಂಶಗಳು ಅತೀ ಅವಶ್ಯ. ಈ ಮೂರು ವಿಚಾರವನ್ನು ಹೊಂದಿದಾಗ ವ್ಯಕ್ತಿ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಶಕ್ತಿಯನ್ನು ಸಾಂಸ್ಕೃತಿಕ ಚಟುವಟಿಕೆಗಳು ಹೊಂದಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಹೇಳಿದರು. ಅವರು ಭಾನುವಾರ ಮಲ್ಪೆ ಬೀಚ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಸಿಂಫನಿ ಸಂಗೀತ ಬಳಗ ಹಾಗೂ ಭ್ರಾಮರಿ ಜನಪದ ಕಲಾ ತಂಡ ಉಡುಪಿ […]

ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಹೊಸ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ, ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. ಅವರು ಇಂದು ಕುಂದಾಪುರದ ಭಂಡಾರ್‌ಕರ‍್ಸ್ ಕಾಲೇಜಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026 ರ ಸಂಬoಧ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್ ಅವರಿಗೆ […]

ಮಣಿಪಾಲ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ: ಅಧ್ಯಕ್ಷರಾಗಿ ಗಣೇಶ್ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ ಪುನರಾಯ್ಕೆ

ಉಡುಪಿ: ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಮಣಿಪಾಲ ಇದರ 2026ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪ್ರಭು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ (3ನೇ ಬಾರಿ) ಅವರು ಪುನರಾಯ್ಕೆಯಾಗಿದ್ದಾರೆ. ಮಣಿಪಾಲ ಈಶ್ವರನಗರದ ವೈಷ್ಣವಿ ಸಭಾಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಸಂಘದ ಗೌರವಾಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳ ವಿವರ ಹೀಗಿದೆ:ಗೌರವಾಧ್ಯಕ್ಷರಾಗಿ ಉಡುಪಿ ಶಾಸಕ ಯಶ್ವಾಲ್ ಸುವರ್ಣ, ಗೋಪಾಲಕೃಷ್ಣ […]

ಸಿಎಸ್‌ಐ ಲೊಂಬಾರ್ಡ್ (ಮಿಷನ್) ಸ್ಮಾರಕ ಆಸ್ಪತ್ರೆಗೆ ಹಸಿರು ಇಂಧನ ದಕ್ಷತೆಗಾಗಿ ರಾಷ್ಟ್ರೀಯ ಪ್ರಶಸ್ತಿ

ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ಸುಸ್ಥಿರ ಆರೋಗ್ಯ ಸೇವೆಗಳನ್ನು ಉತ್ತೇಜಿಸುವಲ್ಲಿ ನೀಡಿದ ಕೊಡುಗೆಗಾಗಿ ಆರೋಗ್ಯ ಮತ್ತು ಪರಿಸರ ನಾಯಕತ್ವ ವೇದಿಕೆ (ಹೆಲ್ಪ್ ಸಂಸ್ಥೆ) ವತಿಯಿಂದ ಪ್ರದಾನಗೊಳ್ಳುವ 2026ರ ಹೆಲ್ಪ್ ಸುಸ್ಥಿರತಾ ಶ್ರೇಷ್ಠತಾ ಪ್ರಶಸ್ತಿಯ ‘ಅತ್ಯುತ್ತಮ ಹಸಿರು ಇಂಧನ ದಕ್ಷತಾ ಕ್ರಮಗಳು’ ವಿಭಾಗದ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. ಆಸ್ಪತ್ರೆಯ ನಿರ್ದೇಶಕರಾದ ಡಾ.ಸುಶಿಲ್ ಜತನ್ನಾ ಅವರು 2026ರ ಜೂನ್ 20ರಂದು ಶನಿವಾರ ಹೈದರಾಬಾದ್‌ನ ಹೈಟೆಕ್ ಸಿಟಿಯ ಯಶೋದ ಆಸ್ಪತ್ರೆಯಲ್ಲಿ ನಡೆದ ಹೆಲ್ಪ್ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ […]

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಮಣಿಪಾಲ ಹಾಸ್ಪಿಸ್ ಮತ್ತು ರೆಸ್ಪೈಟ್ ಸೆಂಟರ್ (ಎಂಎಚ್ಆರ್ ಸಿ) ನಲ್ಲಿ ಮಂಗಳವಾರ ಥೆರಪಿ ಬ್ಲಾಕ್ ಅನ್ನು ಮಂಗಳವಾರ ಉದ್ಘಾಟಿಸಲಾಯಿತು.ಮಣಿಪಾಲ ಫೌಂಡೇಶನ್‌ನ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಶ್ರೀ ಹರಿನಾರಾಯಣ್ ಶರ್ಮಾ, ಅವರು ಆಸ್ಟ್ರೇಲಿಯಾದ ಮ್ಯಾಕ್ವಾರಿ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಪಿಎಚ್‌ಡಿ ಕಾರ್ಯಕ್ರಮದ ನಿರ್ದೇಶಕಿ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ (ಎಂಸಿಎಚ್‌ಪಿ) ನ ಅಂತರಾರ್ಷ್ಟ್ರೀಯ ಅಧ್ಯಾಪಕಿ ಡಾ. ಲಿಂಡ್ಸೆ ಆನ್ ನಿಕಲ್ಸ್, […]