ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಎರಡು ಚಿನ್ನದ ಪದಕ.

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಡಾ. ಪ್ರಣೀಲ್ ರೋಡ್ರಿಗಸ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಎರಡು ಪ್ರತಿಷ್ಠಿತ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮೆರೆದಿದ್ದಾರೆ.ಪ್ರಥಮ ವರ್ಷದಿಂದ ಅಂತಿಮ ವರ್ಷದವರೆಗೆ ಅತ್ಯುತ್ತಮ ಶೈಕ್ಷಣಿಕ ಸಾಧನೆ ದಾಖಲಿಸಿ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಹಿನ್ನೆಲೆಯಲ್ಲಿ ಸೀತಾರಾಂ ಜಿಂದಾಲ್ ಸಂಸ್ಥೆ ನೀಡುವ ‘ಸೀತಾರಾಂ ಜಿಂದಾಲ್ ಚಿನ್ನದ ಪದಕ’ ಅವರಿಗೆ ಲಭಿಸಿದೆ. ಜೊತೆಗೆ, ಆಯುಷ್ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು […]
ಸಾರ್ವಜನಿಕರ ಗಮನಕ್ಕೆ

ಇದೇ 28-06-2026 ರಂದು ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ ಬೈಪಾಸ್, ಉಡುಪಿ ಹಾಗೂ ಸುಪ್ರೀಮ್ ಡಯಾಗ್ನೊಸ್ಟಿಕ್ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ರಕ್ತ ತಪಾಸಣೆ ಶಿಬಿರ ಸ್ಥಳ: ಅಂಗನವಾಡಿಕೇಂದ್ರ, ವಿಷ್ಣುಮೂರ್ತಿ ನಗರ, ನಿಟ್ಟೂರು ಸಮಯ: ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ವಿಶೇಷ ಸೂಚನೆ: ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆಯಬೇಕಾಗಿ ವಿನಂತಿಸಿಕೊಳ್ಳುತ್ತೇವೆ.
ಉಡುಪಿ: ಜೂನ್ 30ರವರೆಗೆ ಪ್ರೆಸ್ಟೀಜ್’ನಲ್ಲಿ ಭರ್ಜರಿ ಎಕ್ಸ್‌ಚೇಂಜ್ ಮೇಳ; ಹಳೆಯ ಅಡುಗೆ ಪರಿಕರಗಳಿಗೆ ಹೊಸ ಉತ್ಪನ್ನಗಳ ಖರೀದಿಗೆ ಆಕರ್ಷಕ ರಿಯಾಯಿತಿ

ಉಡುಪಿ: ಅಡುಗೆಮನೆಯನ್ನು ಹೊಸ ರೂಪದಲ್ಲಿ ಸಜ್ಜುಗೊಳಿಸಲು ಬಯಸುವ ಗ್ರಾಹಕರಿಗಾಗಿ ಪ್ರೆಸ್ಟೀಜ್ ವಿಶೇಷ ಎಕ್ಸ್‌ಚೇಂಜ್ ಮೇಳವನ್ನು ಆಯೋಜಿಸಿದೆ. ನಿಮ್ಮ ಮನೆಯಲ್ಲಿ ಬಳಕೆಯಲ್ಲಿರುವ ಹಳೆಯ ಕುಕ್ಕರ್, ಕುಕ್ವೇರ್, ಗ್ಯಾಸ್ ಸ್ಟೋವ್, ಮಿಕ್ಸರ್ ಗ್ರೈಂಡರ್ ಸೇರಿದಂತೆ ಯಾವುದೇ ಅಡುಗೆ ಪರಿಕರಗಳನ್ನು ನೀಡಿ, ಹೊಸ ಪ್ರೆಸ್ಟೀಜ್ ಉತ್ಪನ್ನಗಳನ್ನು ಆಕರ್ಷಕ ರಿಯಾಯಿತಿಯಲ್ಲಿ ಖರೀದಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಉಡುಪಿ ಬನ್ನಂಜೆಯಲ್ಲಿರುವ ಪ್ರೆಸ್ಟೀಜ್ ಎಕ್ಸ್‌ಕ್ಲೂಸಿವ್ ಮಳಿಗೆಯಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ ಹಲವು ಜನಪ್ರಿಯ ಉತ್ಪನ್ನಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಗ್ಯಾಸ್ ಸ್ಟೋವ್‌ಗಳ ಮೇಲೆ ಶೇ.36, ಡಿಯೋ […]
ಉದ್ಯಾವರ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ

ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ. ಮೃತ ಯುವಕನನ್ನು ಉದ್ಯಾವರ ಪಿತ್ರೋಡಿ ನಿವಾಸಿ ರಮೇಶ್ ಮತ್ತು ಪ್ರಮೋದಿನಿ ಶೆಟ್ಟಿಯವರ ಪುತ್ರ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಮೃತ ಹರ್ಷಿತ್ ಮಂಗಳವಾರ ಬೆಳಿಗ್ಗಿ 5 ಗಂಟೆಗೆ ಬೋಳಾರುಗುಡ್ಡೆ ಮೈದಾನದಲ್ಲಿ ಕ್ರಿಕೆಟ್ ಆಡಲು ತೆರಳುವುದಾಗಿ ಹೇಳಿದ್ದು ಬಳಿಕ ಮನೆಗೆ ವಾಪಾಸಾಗಿರಲಿಲ್ಲ. ಆತನ ಮೊಬೈಲ್ ಸ್ವಿಚ್ಚ್ ಆಫ್ ಆಗಿದ್ದು ದ್ವಿಚಕ್ರ ವಾಹನ ಸೇತುವೆಯ […]
ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಜೂನ್ 25ರಂದು ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ.

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು,ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ […]