ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು – ಕ್ರಿಸ್ತು ಜಯಂತಿ ಪರಿಗಣಿತ ವಿವಿ ಸಹಕಾರ ಒಪ್ಪಂದಕ್ಕೆ ಸಹಿ.

ಮಂಗಳೂರು: ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು ಜಯಂತಿ ಪರಿಗಣಿತ ವಿಶ್ವವಿದ್ಯಾಲಯವು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪರಸ್ಪರ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದೆ. ಕಾರ್ಯಕ್ರಮದಲ್ಲಿ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆ. ಡಾ. ಆಗಸ್ಟಿನ್ ಜಾರ್ಜ್ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಫಾ. ಜೋಶಿ ಮ್ಯಾಥ್ಯೂ ಭಾಗವಹಿಸಿದ್ದರು. ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ಪ್ರಾಂಶುಪಾಲರಾದ ಡಾ. ಎಸ್. […]
ಮಣಿಪಾಲ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನಲ್ಲಿ ಪ್ರವೇಶಾತಿಗಾಗಿ ಜೂನ್ 26ರಂದು ವಿಶೇಷ ಓಪನ್ ಹೌಸ್ ಅಡ್ಮಿಷನ್ ಕಾರ್ಯಕ್ರಮ.

ಮಣಿಪಾಲ: ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನಲ್ಲಿ 2026-27ನೇ ಸಾಲಿನ ಪ್ರವೇಶಾತಿಗಾಗಿ ಜೂನ್ 26ರಂದು (ಶುಕ್ರವಾರ) ವಿಶೇಷ ಓಪನ್ ಹೌಸ್ ಅಡ್ಮಿಷನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಿಯುಸಿ (ವಿಜ್ಞಾನ ವಿಭಾಗ) ಹಾಗೂ ಐಟಿಐ ಉತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ಗಳಿಗೆ ನೇರವಾಗಿ ದ್ವಿತೀಯ ವರ್ಷದ ಪ್ರವೇಶ (ಲ್ಯಾಟರಲ್ ಎಂಟ್ರಿ) ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ ವಿಭಾಗದಲ್ಲಿ ವಿವಿಧ ಆಯ್ಕೆಗಳು ಕಲ್ಪಿಸಲಾಗಿದೆ. ಮೊದಲ ಆಯ್ಕೆಯಲ್ಲಿ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ […]
ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿದೆ ಉದ್ಯೋಗಾವಕಾಶ; ಸ್ಕಿಲ್ ಟ್ರೈನರ್ ಹುದ್ದೆಗೆ ಅರ್ಜಿ ಆಹ್ವಾನ

ಮಣಿಪಾಲ: ಡಾ. ಟಿಎಂಎ ಪೈ ಫೌಂಡೇಶನ್‌ನ ಘಟಕವಾಗಿರುವ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ತನ್ನ ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ವಿಭಾಗಕ್ಕೆ ಸ್ಕಿಲ್ ಟ್ರೈನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಣಿಪಾಲದ ಈಶ್ವರನಗರದಲ್ಲಿರುವ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆ, ಮಾಹಿತಿ ತಂತ್ರಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಭವಿಷ್ಯ ರೂಪಿಸುವ ಉತ್ಸಾಹಿ ತರಬೇತುದಾರರನ್ನು ತನ್ನ ತಂಡಕ್ಕೆ ಆಹ್ವಾನಿಸಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅನುಭವ ಹಾಗೂ ಬೋಧನಾ ಕೌಶಲ್ಯ ಹೊಂದಿರುವ […]
ಕರಾವಳಿ ರಂಗಾಯಣ ಕಾರ್ಕಳದಲ್ಲಿದೆ ನಾಟಕ ಕಲಾವಿದರಿಗೆ, ತಂತ್ರಜ್ಞರಿಗೆ ಅತ್ಯುತ್ತಮ ಅವಕಾಶ: ಆಸಕ್ತಿ ಇದ್ರೆ ಮಿಸ್ ಮಾಡದೇ ಅರ್ಜಿ ಸಲ್ಲಿಸಿ

ಕಾರ್ಕಳ: ಕರ್ನಾಟಕ ಸರಕಾರದ ಕರಾವಳಿ ರಂಗಾಯಣಕಾರ್ಕಳ ತಾನು ಸಿದ್ಧಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರನ್ನು ಆಯ್ಕೆ, ಮಾಡಿಕೊಳ್ಳಲು ತೀರ್ಮಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.07.2026. ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಮತ್ತು ತಂತ್ರಜ್ಞರು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ/ಡಿಪ್ಲಮೋ/ ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ […]
ವನಮಹೋತ್ಸವ ಆಚರಣೆ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಡಾ. ವಿ.ಎಸ್. ಆಚಾರ್ಯ ಜಿಲ್ಲಾ ತರಬೇತಿ ಕೇಂದ್ರ, ಪ್ರಗತಿ ನಗರ, ಮಣಿಪಾಲದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭಾರತ್ […]