ಹಲಸಿನ ಸೀಸನ್‌ ಎಚ್ಚರವಿರಲಿ! ಈ ಪದಾರ್ಥಗಳ ಜೊತೆ ಹಲಸು ತಿಂದರೆ ಕಾಡಬಹುದು ಸಮಸ್ಯೆ

ಹಸಿದು ಹಲಸು ಅನ್ನೋ ಜನಪ್ರಿಯ ಮಾತಿದೆ. ಹಲಸಿನ ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ. ಇದು ಪೋಷಕಾಂಶಗಳ ಭಂಡಾರವಾಗಿದ್ದು, ಜೀರ್ಣಕ್ರಿಯೆ ಸುಧಾರಿಸಲು ಸಹಾಯಕ. ಹಾಗೇ ರೋಗನಿರೋಧಕ ಶಕ್ತಿ ಹೆಚ್ಚಿಸುವುದು ಹಾಗೂ ಹೃದಯದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಆದರೆ ಹಲಸು ತಿಂದ ತಕ್ಷಣ ಕೆಲವು ಆಹಾರಗಳನ್ನು ಸೇವಿಸಿದರೆ ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಇತರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಾರೆ. ಹಲಸು ತಿಂದ ಬಳಿಕ ಯಾವ ಆಹಾರಗಳನ್ನು ತಪ್ಪಿಸಬೇಕು? ಹಾಲು ಮತ್ತು ಹಾಲಿನ […]

ವಿದೇಶದಿಂದಲೇ ಸಿಸಿಟಿವಿ ನಿಗಾ: ಪೊಲೀಸ್ ಪತಿಯ ‘ಕಳ್ಳಾಟ’ ಬಯಲು ಮಾಡಿತು ಪತ್ನಿಯ ಈ ಮಾಸ್ಟರ್ ಪ್ಲ್ಯಾನ್!

ಚೆನ್ನೈ: ಕಳ್ಳರನ್ನು ಹಿಡಿಯಲು ಪೊಲೀಸರು ಬಲೆ ಬೀಸುವುದು ಸಾಮಾನ್ಯ. ಆದರೆ ತಮಿಳುನಾಡಿನಲ್ಲಿ ಪೊಲೀಸ್ ಪತಿಯೇ ನಡೆಸುತ್ತಿದ್ದ ಗುಪ್ತ ಸಂಬಂಧವನ್ನು ಪತ್ತೆಹಚ್ಚಲು ಪತ್ನಿ ರೂಪಿಸಿದ ಮಾಸ್ಟರ್ ಪ್ಲ್ಯಾನ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚೆನ್ನೈನ ಮಾಂಬಲಂ ಸಂಚಾರ ವಿಭಾಗದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಅರುಲ್ ಪ್ರಸಾದ್ ಅವರು, ಕಡಲೂರು ಮೂಲದ ಅಭಿನಯ ಅವರನ್ನು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮದುವೆಯಾದ ಕೆಲವೇ ತಿಂಗಳಲ್ಲಿ ಅಭಿನಯ ಅವರಿಗೆ ವಿದೇಶದಲ್ಲಿ ಉದ್ಯೋಗ ದೊರೆತಿದ್ದು, ಅಲ್ಲಿಯೇ ನೆಲೆಸಿ ಕೆಲಸ ಮಾಡುತ್ತಿದ್ದರು. […]

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ, ಸರಕಾರದ ಮಹತ್ವದ ಆದೇಶ,ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಬೆಂಗಳೂರು: ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕಟ್ಟಡ ಮಾಲೀಕರಿಗೆ ಇಂಧನ ಇಲಾಖೆ ಮಹತ್ವದ ಸಡಿಲಿಕೆ ನೀಡಿದೆ. ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವವರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವವರು ಹಾಗೂ ಯಾವುದೇ ವಿದ್ಯುತ್ ಸಂಪರ್ಕವಿಲ್ಲದೆ ಕಟ್ಟಡ ಪೂರ್ಣಗೊಳಿಸಿರುವವರಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Possession Certificate) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ಸೌಲಭ್ಯವು 2026ರ ಮೇ 31ರೊಳಗೆ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಅನ್ವಯವಾಗಲಿದೆ. ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಅರ್ಜಿ […]

ಅನ್ನಭಾಗ್ಯ ಯೋಜನೆಯಿಂದ 13-14 ಲಕ್ಷ ಅನರ್ಹರನ್ನು ಕೈಬಿಡಲು ಸರ್ಕಾರ ನಿರ್ಧಾರ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಆರ್ಥಿಕ ಒತ್ತಡ ಎದುರಿಸುತ್ತಿರುವ ರಾಜ್ಯ ಸರ್ಕಾರ, ಪ್ರಮುಖ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಗೃಹಜ್ಯೋತಿ, ಗೃಹಲಕ್ಷ್ಮಿ ಜೊತೆಗೆ ಅನ್ನಭಾಗ್ಯ ಯೋಜನೆಯಲ್ಲೂ ಫಲಾನುಭವಿಗಳ ಮರುಪರಿಶೀಲನೆ ನಡೆಸುವ ಚರ್ಚೆ ನಡೆಯುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ K. H. Muniyappa ಈ ಕುರಿತು ಸುಳಿವು ನೀಡಿದ್ದು, ಸುಮಾರು 13-14 ಲಕ್ಷ ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಹೊರಗಿಡುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ನೌಕರರ ಕುಟುಂಬಗಳಿಗೆ ಗ್ಯಾರಂಟಿ ಸೌಲಭ್ಯಗಳನ್ನು ಕಡಿತಗೊಳಿಸುವ […]