114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂ. ವ್ಯವಹಾರ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಮಂಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸುವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ.ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. 91.80 ಕೋಟಿಗೆ ಏರಿಕೆಯಾಗಿದ್ದು, ಎನ್‌ಆರ್‌ಐ ಗ್ರಾಹಕರ ಬೆಂಬಲಬ್ಯಾಂಕಿನ ಬೆಳವಣಿಗೆಗೆ ಪ್ರಮುಖ ಶಕ್ತಿಯಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ಆಡಳಿತ ಮಂಡಳಿಯ ನೇತೃತ್ವದಲ್ಲಿ ಎಂಸಿಸಿ […]
ಒಂದು ವರ್ಷದ ಜಾಮೀನು ನಿರ್ಬಂಧ ಸಡಿಲಿಕೆಗೆ ದರ್ಶನ್ ಮೊರೆ; ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಲಾಗಿರುವ ಆದೇಶವನ್ನು ಪರಿಷ್ಕರಿಸುವಂತೆ ಅವರು ಮನವಿ ಸಲ್ಲಿಸಿದ್ದಾರೆ. ಬದಲಾದ ವಕೀಲರ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಭಾರತೀಯ ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕುಗಳಾಗಿವೆ ಎಂದು ಉಲ್ಲೇಖಿಸಲಾಗಿದೆ. ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಬೇಕು ಎಂದು ಅವರು ಕೋರಿದ್ದಾರೆ. […]
ಪೆರ್ಡೂರು ಅನಂತ ದೇವಸ್ಥಾನದ ಜೀರ್ಣೋದ್ಧಾರ ಸೂಕ್ತ ಸಮಯದಲ್ಲಿ ಭವ್ಯವಾಗಿ ನೆರವೇರಲಿ – ವಿದ್ಯಾಸಾಗರತೀರ್ಥ ಶ್ರೀ

ಉಡುಪಿ: ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು. ನಮಗೆ ಈ ಅವಕಾಶ ಒದಗಿ ಬಂದಿದೆ. ಇದಕ್ಕೆ ವಿಶೇಷ ಫಲ ಸಿಗಲಿದೆ. ಊರವರುತಮ್ಮ ಊರಿನ ಜೀರ್ಣೋದ್ದಾರಕ್ಕೆ ಸಹಕಾರ ನೀಡಬೇಕು. ಈ ಮೂಲಕ ದೇವರ ವಿಶೇಷ ಅನುಗ್ರಹಕ್ಕೆ ಪಾತ್ರರಾಗಬೇಕು. ಈ ದೇವಸ್ಥಾನದ ಜೀರ್ಣೋದ್ಧಾರ ಸೂಕ್ತ ಸಮಯದಲ್ಲಿ ಭವ್ಯವಾಗಿ ನೆರವೇರಲಿ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಗಳು ಆಶೀರ್ವಚನ ನೀಡಿದರು. ಅವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯದ ಉದ್ಘಾಟನೆ […]
ಉಡುಪಿ: ಜೂ.26ರಂದು ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನೆ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ […]
AI ಅಬ್ಬರಕ್ಕೆ 21 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಒರಾಕಲ್!

ನವದೆಹಲಿ: ಕಳೆದ 12 ತಿಂಗಳಲ್ಲಿ ಅಮೆರಿಕದ ತಂತ್ರಜ್ಞಾನ ದಿಗ್ಗಜ ಒರಾಕಲ್ ಕಾರ್ಪ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು 21 ಸಾವಿರದಷ್ಟು ಕಡಿಮೆ ಮಾಡಿರುವುದಾಗಿ ಬಹಿರಂಗಪಡಿಸಿದೆ. ಈ ಹಿಂದೆ ಅಂದಾಜಿಸಲಾಗಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನಡೆದಿರುವ ಈ ಉದ್ಯೋಗ ಕಡಿತದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯಿಂದ ಉಂಟಾದ ಪರಿಣಾಮವೂ ಸೇರಿದೆ. ಅಮೆರಿಕದ ಹಣಕಾಸು ನಿಯಂತ್ರಕ ಸಂಸ್ಥೆಗೆ ಸಲ್ಲಿಸಿರುವ ವಾರ್ಷಿಕ ವರದಿಯಲ್ಲಿ, “ನಮ್ಮ ಕಾರ್ಯಾಚರಣೆಗಳಲ್ಲಿ AI ತಂತ್ರಜ್ಞಾನಗಳನ್ನು ಅಳವಡಿಸಿಕೊಂಡ ಪರಿಣಾಮ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಈ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆಯೂ ಇದೆ” […]