ಆಗುಂಬೆ ಘಾಟಿ: ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ಣಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ […]
ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ: ರಮೇಶ್ ಕಾಂಚನ್

ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಇಂದು ನಗರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನಗಳು ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಅರ್ಹ ಫಲಾನುಭವಿಗಳು […]
ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಜಿರ್ಣೋದ್ದಾರ ಶಿಲಾನ್ಯಾಸ ನೆರವೇರಿಸಿದ ನ್ಯಾ.ಪುರುಷೋತ್ತಮ್

ಹಿರಿಯಡ್ಕ: ಇಲ್ಲಿನ ಹಿರೇಬೆಟ್ಟು ಭಟ್ರಕೋಡಿಯಲ್ಲಿನ ಗ್ರಾಮದ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ದಾರದ ಕಾರ್ಯದ ಅಂಗವಾಗಿ ಶಿಲಾಮಯ ಗರ್ಭಗೃಹದ ನಿರ್ಮಾಣಕ್ಕೆ ಬಳಸುವ ನೂತನ ಶಿಲೆಗಳಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಸಿಜೆಎಮ್ ಎಮ್.ಪುರುಷೋತ್ತಮ್ ಬುಧವಾರ ಚಾಲನೆ ನೀಡಿದರು. ಶ್ರೀ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಡಾ| ಸತ್ಯ ಕೃಷ್ಣ ಭಟ್ ಮಂಗಳೂರು ಇವರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಶಿಲಾನ್ಯಾಸದ ಶಿಲೆಗಳಿಗೆ ಅರಶಿನ, ಕುಂಕುಮ, ಹಾಲು, ಹೂಗಳನ್ನು ಸಮರ್ಪಿಸಿ, ಸ್ವತಃ […]
ನಮ್ಮ ನಾಡ ಸಂಸ್ಥೆ(ರಿ) ಬ್ರಹ್ಮಾವರ ವತಿಯಿಂದ ಆತ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಐ ಡಿ ಕಾರ್ಡ್’ಗಳ ವಿತರಣೆ

ಉಡುಪಿ: ನಮ್ಮ ನಾಡ ಸಂಸ್ಥೆ(ರಿ ) ಬ್ರಹ್ಮಾವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಇಲ್ಲಿಯ ಎಲ್ಲಾ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಐ ಡಿ ಕಾರ್ಡ್’ಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿ ಸಬೀನಾ ರವರು ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಆತ್ರಾಡಿ ಇವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡುತ್ತ ಶಾಲೆಗೆ ನಮ್ಮ ನಾಡ ಸಂಸ್ಥೆಯು ಶಾಲೆಗೆ ನೀಡಿದ ಕೊಡುಗೆ ಮತ್ತು ಊರವರ ಸಹಕಾರವನ್ನು ಸ್ಮರಿಸಿದರು […]
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ‘ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ’ ಯಶಸ್ವಿ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಸಂಕೀರ್ಣವಾದ ಶ್ವಾಸನಾಳದ (ಎದೆಯೊಳಗಿನ) ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ, ಇದು ಕರ್ನಾಟಕ ರಾಜ್ಯದ, ಸುಧಾರಿತ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 36 ವರ್ಷದ ಪುರುಷ ರೋಗಿಯ ಮೇಲೆ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಎಂಡೋಸ್ಕೋಪಿಯಿಂದ ಶ್ವಾಸನಾಳದ ಕೆಳಗಿನ ಭಾಗದಲ್ಲಿ ಗೆಡ್ಡೆ ಇರುವುದು ಪತ್ತೆಯಾಯಿತು. ಹೊರಗಿನ ಆಸ್ಪತ್ರೆಯಲ್ಲಿ ಗೆಡ್ಡೆಯನ್ನು ಭಾಗಶಃ ತೆಗೆದುಹಾಕುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಶ್ವಾಸನಾಳದ ಕೆಳಗಿನ ಭಾಗದ ಜೊತೆಗೆ ಉಳಿದಿರುವ ಗೆಡ್ಡೆಯನ್ನು […]