ಜೂ.28ರಂದು ಉಡುಪಿ ಯಕ್ಷಗಾನ ಕಲಾರಂಗದಿಂದ ‘ಸೂರು ನೂರರ ಸಡಗರ’ ಕಾರ್ಯಕ್ರಮ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಡುಪಿ ಯಕ್ಷಗಾನ ಕಲಾರಂಗವು ಕಳೆದ 26 ವರ್ಷಗಳಿಂದ ಯಕ್ಷನಿಧಿಯ ಮೂಲಕ ಕಲಾವಿದರ ಕಲ್ಯಾಣಕ್ಕಾಗಿ ಹಾಗೂ 22 ವರ್ಷಗಳಿಂದ ವಿದ್ಯಾಪೋಷಕ್ ಯೋಜನೆಯಡಿ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು […]
ಉಡುಪಿ: ಬಾರ್ ಮಾಲೀಕರಿಗೆ ಅಗ್ನಿ ಸುರಕ್ಷತೆ ಕಡ್ಡಾಯವಾಗಿ ಅಳವಡಿಸುವಂತೆ ಮತ್ತು ನಿಯಮ ಪಾಲನೆ ಮಾಡುವಂತೆ ಅಬಕಾರಿ ಇಲಾಖೆ ಎಚ್ಚರಿಕೆ

ಉಡುಪಿ: ಮೈಸೂರು ಪಬ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಉಡುಪಿ ಅಬಕಾರಿ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಸನ್ನದುದಾರರು ಹಾಗೂ ಬಾರ್ ಮಾಲಕರಿಗೆ ಅಗ್ನಿ ಅವಘಡ ಸಂಭವಿಸ ದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಕಾರ್ಯಾಗಾರವನ್ನು ಉಡುಪಿ ಅಬಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಉಡುಪಿ ಅಬಕಾರಿ ಜಿಲ್ಲಾಧಿಕಾರಿ ಟಿ.ಎಂ. ಶ್ರೀನಿವಾಸ್ ಮಾತನಾಡಿ, ಎಲ್ಲ ಸನ್ನದು ಕಟ್ಟಡಗಳಲ್ಲಿ ಸನ್ನದುದಾರರು ಬೆಂಕಿ ನಂದಿಸುವ ಸಾಧನ ಹಾಗೂ ಬೆಂಕಿ ಅಲರಾಮ್‌ಗಳನ್ನು ಕಲ್ಪಿಸಬೇಕು. ಸನ್ನದು ಗಳಲ್ಲಿ ಕೆಲಸ ಮಾಡುವ […]
ಜೂನ್ 27ರಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ 15 ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, […]
ಉಡುಪಿ ಬಿಜೆಪಿ ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ

ಉಡುಪಿ: ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ಎಸ್.ಟಿ ಮೋರ್ಚಾ ಜಿಲ್ಲಾ ಕಚೇರಿಯಲ್ಲಿ ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಿಸುವ ಕಾರ್ಯಕ್ರಮ ಮೋರ್ಚಾದ ಅಧ್ಯಕ್ಷರಾದ ಭುಜಂಗ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರ್ ನವೀನ್ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ನಡೆಯಿತು. ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುತ್ಯಾರು ನವೀನ್ ಶೆಟ್ಟಿ ಅವರು ಪದಾಧಿಕಾರಿಗಳ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು. ಎಸ್.ಟಿ ಮೋರ್ಚಾದ ಪದಾಧಿಕಾರಿಗಳು ತಮ್ಮ ತಮ್ಮ ಪರಿಚಯ […]
ಜೂ. 28 ರಂದು ಕುಕ್ಕುಂದೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಾರ್ಕಳ ತಾಲೂಕು, ಕಾರ್ಕಳ ವಲಯ ಹಾಗೂ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಕುತ್ರಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘ (ನಿ.) ಜೋಡುರಸ್ತೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. 28, ರಂದು ಕುಕ್ಕುಂದೂರು ಸಮುದಾಯ ಭವನದಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯೋಜಿಸಲಾಗಿದೆ. ಶಿಬಿರದಲ್ಲಿ ಇಸಿಜಿ, ವಾತಚಿಕಿತ್ಸೆ, ಸಂಧಿವಾತ, ಬೆನ್ನುನೋವು ಹಾಗೂ ಕುತ್ತಿಗೆ ನೋವು […]