ದೇವಾಲಯಗಳು ಸಮಾಜದ ಸಂಸ್ಕೃತಿ ಉಳಿಸುವ ಕೇಂದ್ರಗಳು: ಗುರ್ಮೆ ಸುರೇಶ್ ಶೆಟ್ಟಿ

ಹಿರಿಯಡ್ಕ: ದೇವಾಲಯಗಳು ಕೇವಲ ಪೂಜಾ ಕೇಂದ್ರಗಳಲ್ಲ, ಅವು ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಐಕ್ಯತೆಯ ಪ್ರತೀಕಗಳಾಗಿವೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಹೀರೆಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವರ ಜೀರ್ಣೋದ್ಧಾರ ಸಮಿತಿ ವತಿಯಿಂದ ಬುಧವಾರ ನಡೆದ ದೇವಾಲಯದ ಜೀರ್ಣೋದ್ಧಾರ ಸಂಬಂಧಿತ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಶತಮಾನಗಳ ಇತಿಹಾಸ ಹೊಂದಿರುವ ದೇವಾಲಯಗಳ ಜೀರ್ಣೋದ್ಧಾರವು ಕೇವಲ ಕಟ್ಟಡದ ನವೀಕರಣವಲ್ಲ. ಪೂರ್ವಜರು ಕಟ್ಟಿಕೊಟ್ಟ ಸಂಸ್ಕೃತಿ ಮತ್ತು ಧಾರ್ಮಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಕೊಡುವ ಮಹತ್ವದ […]
ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ

ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ -9’ ಭರತನಾಟ್ಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಭ್ರಾಮರೀ ನಾಟ್ಯಾಲಯದ ಗುರುಗಳಾದ ವಿದ್ವಾನ್ ಕೆ. ಭವಾನಿ ಶಂಕರ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆಯ ನಂತರ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಪ್ರಾತ್ಯಕ್ಷಿಕೆ ಆರಂಭವಾಯಿತು. ಭರತನಾಟ್ಯ ಎಂದರೇನು? ಅದರ […]
ರಾಮಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು

ಉಡುಪಿ: ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರವಾಗಿ ರುವ ರಾಮ ಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಸತ್ಯವಾದರೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಮೇಲೆ ವಿಶ್ವಾಸ ಇದೆ. ಸರಿಯಾಗಿ ತನಿಖೆ ನಡೆಯುವ ವಿಶ್ವಾಸ ಇದೆ. ಆ ಮೂಲಕ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಬೇಕು. ಎಸ್‌ಐಟಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆರೋಪಿಗಳಿಗೆ […]
ಜುಲೈ 3ರ ದಲಿತ ಜನಾಗ್ರಹ ಸಮಾವೇಶಕ್ಕೆ ಉಡುಪಿಯಿಂದ 500 ಕಾರ್ಯಕರ್ತರು

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯ ಸುಮಾರು 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ ದಲಿತ ಸಂಘರ್ಷ ಸಮಿತಿಯ ಸ್ಥಾಪಕ […]
ವಾರಸುದಾರರಿಲ್ಲದ ಅಪರಿಚಿತ ಶವಕ್ಕೆ ಗೌರವಯುತ ಅಂತ್ಯಸಂಸ್ಕಾರ

ಉಡುಪಿ: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಬದಕೋಣೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವಕ್ಕೆ ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಸಿಟ್ಟಿದ್ದ ಶವದ ಗೌರವಯುತ ಅಂತ್ಯಸಂಸ್ಕಾರವನ್ನು ನಗರದ ಬಿಡಿನಗುಡ್ಡೆ ದಹನ ಭೂಮಿಯಲ್ಲಿ ಶುಕ್ರವಾರ ನೆರವೇರಿಸಲಾಯಿತು. ಶವದ ವಾರಸುದಾರರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ನಡೆಸಿದರೂ ಯಾವುದೇ ಮಾಹಿತಿ ದೊರೆಯದ ಕಾರಣ, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಬೈಂದೂರು ಪೊಲೀಸ್ ಠಾಣೆಯ ಎಎಸ್‌ಐ ಸೀತಾರಾಮ್ […]