ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಆರೋಪ: ಯುವಕನ ಬಂಧನ

ಉಡುಪಿ: ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ, ಮೂಲತಃ ಶಿರೂರಿನ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಉಡುಪಿ […]

ಅಯೋಧ್ಯೆ ರಾಮ ಮಂದಿರದ ದೇಣಿಗೆ ಅಕ್ರಮ ಪ್ರಕರಣ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ!

ಅಯೋಧ್ಯೆ,:  ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ಅವರು  ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ರಾಮ ಮಂದಿರದ ದೇಣಿಗೆ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆ ಈ ಬೆಳವಣಿಗೆ ನಡೆದಿದೆ. ಲಭ್ಯವಿರುವ ವರದಿಗಳ ಪ್ರಕಾರ, ಚಂಪತ್ ರಾಯ್ ಅವರು “ನೈತಿಕ ಹೊಣೆಗಾರಿಕೆ” ಆಧಾರದ ಮೇಲೆ ರಾಜೀನಾಮೆ ಸಲ್ಲಿಸಿದ್ದು, ಟ್ರಸ್ಟಿ ಅನಿಲ್ ಮಿಶ್ರಾ ಅವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ದೇವಾಲಯದ ಕಾಣಿಕೆ […]

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಪೋಲಿಯೋ ಲಸಿಕೆ ಜಾಗೃತಿ

ಉಡುಪಿ: ಮಹೇಶ್ ಮರ್ಣೆ ಅಪರೂಪದ ಕಲಾವಿದ. ಅಶ್ವತ್ಥ ಎಲೆಯಲ್ಲಿ ಇವರು ಖ್ಯಾತನಾಮರ ಭಾವಚಿತ್ರಗಳನ್ನು ಮೂಡಿಸಿ ಹೆಸರು ಮಾಡಿದ್ದಾರೆ. ಅದೇ ರೀತಿ ವಿವಿಧ ಸಂದರ್ಭಗಳಲ್ಲಿ ಕಲೆಯ ಮೂಲಕ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಇದೀಗ ಮಹೇಶ್ ಮರ್ಣೆ ಅವರು 5 ವರ್ಷದ ಕೆಳಗಿನ ಮಕ್ಕಳಿಗೆ ಜೂ. 28ರಂದು ನಡೆಯುವ ಪೋಲಿಯೋ ಲಸಿಕೆ ತಪ್ಪದೆ ಹಾಕಿಸಿ ಎಂಬ ಚಿತ್ತಾರವನ್ನು ಅಶ್ವತ್ಥ ಎಲೆಯಲ್ಲಿ ರಚಿಸುವ ಮೂಲಕ ಜನ ಜಾಗೃತಿ ಮೂಡಿಸಿದ್ದಾರೆ.

ಇನ್ನು ಶನಿವಾರ ಮಧ್ಯಾಹ್ನ 12.30ರವರೆಗೆ ಮಾತ್ರ ಕ್ಲಾಸ್, ಶಿಕ್ಷಣ ಇಲಾಖೆ ಘೋಷಿಸಿತು ಹೊಸ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶನಿವಾರದ ಶಾಲಾ ಅವಧಿಗೆ ಏಕರೂಪದ ವೇಳಾಪಟ್ಟಿಯನ್ನು ಜಾರಿಗೊಳಿಸಿದೆ. ಹೊಸ ಆದೇಶದಂತೆ, ಇನ್ನು ಮುಂದೆ ಪ್ರತಿ ಶನಿವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಈವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಸಮಯದಲ್ಲಿ ವ್ಯತ್ಯಾಸವಿದ್ದು, ಕೆಲವು ಶಾಲೆಗಳಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ, ಇನ್ನೂ ಕೆಲವು ಶಾಲೆಗಳಲ್ಲಿ ಬೆಳಿಗ್ಗೆ 7.30ರಿಂದ 11.30ರವರೆಗೆ […]

ಮಂಗಳೂರು:ರೋಹನ್ ಕಾರ್ಪೊರೇಷನ್‌ನ ಕಾರ್ಯಕ್ರಮದಲ್ಲಿ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಜಾದೂ!

ಮಂಗಳೂರು: ಖ್ಯಾತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಷನ್ ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಗುರುವಾರ ಸಂಜೆ ಆನ್ ಇನ್ನಿಂಗ್ ವಿತ್ ಶಾರುಖ್ ಖಾನ್ ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಪಾಲ್ಗೊಂಡು, ಮಾತನಾಡಿದರು.ಚಿಕ್ಕಂದಿನಲ್ಲಿ ಕೆಲ ಕಾಲ ಮಂಗಳೂರಿನಲ್ಲಿದ್ದರೂ ಕಿಂಗ್ ಖಾನ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡುತ್ತಿರುವ ಶಾರುಖ್ ಮಂಗಳೂರಿನ ಅಭಿಮಾನಿಗಳ ಪ್ರೀತಿ, ಅಭಿಮಾನಕ್ಕೆ ಫಿದಾ ಆದರು. ಮಂಗಳೂರು ಸುಂದರವಾದ ನಗರ. ನಾನು ವಿಮಾನ ನಿಲ್ದಾಣದಲ್ಲಿ ಇಳಿದು, ಈ ವೇದಿಕೆಗೆ ಬರುವ ವರೆಗೂ ನನಗೆ ನೀವು ಪ್ರೀತಿ […]