ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,2ಎ,2ಬಿ,3ಎ,3ಬಿ, ಪ.ಜಾತಿ ಮತ್ತು ಪ.ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20. ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಅನ್ನು ನೋಡಬಹುದಾಗಿದ್ದು, ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್, […]
ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಿ ಘೋಷಿಸಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮುಂದಾಗಬೇಕೆoದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗುತ್ತವೆ. ಸಾರ್ವಜನಿಕರು ತಂಬಾಕು ಉತ್ಪನ್ನಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯವನ್ನು […]
ಹಣಕಾಸಿನ ಗುರಿಯನ್ನು ಸಾಧಿಸಲು ನೀವು ತಯಾರಿದ್ದೀರಾ..!

ನೀವು ಉಡುಪಿ ಆಸು ಪಾಸಿನವರೇ…?🔹ಭಾರತೀಯ ಶೇರ್ ಮಾರ್ಕೆಟ್ ಬಗ್ಗೆ ತಿಳಿಯಬೇಕೇ …?🔹ಹಾಗಾದರೆ ಜುಲೈ 3 ರ ಶುಕ್ರವಾರದ ಉಚಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ🙏🙏🔹ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:🔎ಬುಲ್ ಫೋರ್ಸ್ ಪ್ರೈವೇಟ್ ಲಿ,ಉಡುಪಿ- ಮಣಿಪಾಲ ರಸ್ತೆ(ಕ್ರೋಮಾ ದ ಮುಂಭಾಗ) 83103565339886432197
ಉತ್ತಮ ಮಳೆಗಾಗಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

ಉಡುಪಿ: ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವರಿಗೆ ಸೀಯಾಳ ಅಭಿಷೇಕ ಸೋಮವಾರ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಕರಾವಳಿ ಜಿಲ್ಲೆ ಸಹಿತ ರಾಜ್ಯದಾದ್ಯಂತ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವರಿಗೆ ಸೀಯಾಳ ಅಭಿಷೇಕ ನಡೆಸುವ ಸಂಕಲ್ಪ ಮಾಡಿದ್ದು, ಇಂದು ಬೆಳಿಗ್ಗೆಯಿಂದಲೇ ಉಡುಪಿ ಜಿಲ್ಲೆಯಾದ್ಯಂತ […]
ಉಡುಪಿ: ಪ್ರತಿಷ್ಠಿತ ಹೋಟೆಲ್’ನಲ್ಲಿ ವಿವಿಧ ಹುದ್ದೆಗಳು

ಉಡುಪಿ: ಉಡುಪಿಯಲ್ಲಿರುವ ಪ್ರತಿಷ್ಠಿತ ಹೋಟೆಲ್’ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಇಮೇಲ್ ಮೂಲಕ ಕಳಿಸಬೇಕಾಗಿ ತಿಳಿಸಿದೆ[email protected]