ಪೆಟ್ರೋಲ್-ಡೀಸೆಲ್ ಮಾರಾಟಕ್ಕೆ ಇದ್ದ ಎಲ್ಲಾ ನಿರ್ಬಂಧ ರದ್ದು: ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಜುಲೈ 1ರಿಂದ ಇಂಧನ ಮಾರಾಟವು ಎಂದಿನಂತೆ ಯಾವುದೇ ನಿರ್ಬಂಧವಿಲ್ಲದೆ ನಡೆಯಲಿದೆ. ಈ ಕುರಿತು ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದ್ದು, ಪ್ರತಿ ವ್ಯಕ್ತಿಗೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಮಾರಾಟ ಮಾಡಬೇಕೆಂಬ ನಿಯಮ ಸೇರಿದಂತೆ ಜೂನ್ 11ರಂದು ಜಾರಿಗೊಳಿಸಿದ್ದ ಎಲ್ಲಾ ನಿರ್ಬಂಧಗಳು ಜುಲೈ 1ರಿಂದ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದ ಇಂಧನ ಪೂರೈಕೆ ಮತ್ತು ವಿತರಣಾ ವ್ಯವಸ್ಥೆಯ ಸ್ಥಿತಿಗತಿಗಳನ್ನು […]

ವಿದ್ಯುತ್ ಕಂಬ ಸೇರಿಸಿ ರಸ್ತೆ ಕಾಂಕ್ರೀಟೀಕರಣ: ಅವ್ಯವಸ್ಥೆ ವಿರುದ್ಧ ಶಾಸಕಿ ಭಾಗೀರಥಿ ಮುರುಳ್ಯ ಗರಂ

ಸುಳ್ಯ: ಸುಳ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳಭಾಗದಿಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಡೆಗೆ ಸಾಗುವ ರಸ್ತೆಯಲ್ಲಿ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅದರ ಸುತ್ತಲೇ ಕಾಂಕ್ರೀಟ್ ರಸ್ತೆ ನಿರ್ಮಿಸಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ಈ ರಸ್ತೆಯ ಕೆಲಭಾಗದಲ್ಲಿ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳಲಾಗಿದ್ದು, ರಸ್ತೆ ಮಧ್ಯದಲ್ಲಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸದೆ ಅದನ್ನೇ ಒಳಗೊಂಡಂತೆ ರಸ್ತೆ ನಿರ್ಮಿಸಲಾಗಿದೆ. ಇದರಿಂದ ವಾಹನ ಸವಾರರಿಗೆ ಅಪಾಯ ಎದುರಾಗುವ ಸಾಧ್ಯತೆ ಹೆಚ್ಚಿದ್ದು, ಅಪಘಾತ ಸಂಭವಿಸುವ ಭೀತಿ ವ್ಯಕ್ತವಾಗಿದೆ. ವಿಷಯ ತಿಳಿದ ಬಳಿಕ […]

ಕೆ.ಎಸ್.ಓ.ಯು: ಜುಲೈ ಆವೃತ್ತಿಯ ಪ್ರವೇಶಾತಿ ಆರಂಭ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾo, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ ಸರ್ಟಿಫಿಕೆಟ್ ಕೋರ್ಸ್ಗಳ ಪ್ರವೇಶಾತಿಗಳು ನಡೆಯುತ್ತಿದ್ದು, ಆಸಕ್ತರು ಪ್ರಾದೇಶಿಕ ಕೆಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ http://www.ksoumysuru.ac.inಅನ್ನು ಅಥವಾ […]

ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (ನಿ) ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ. ನೀಟ್ ಹಾಗೂ ಜೆ.ಇ.ಇ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಸರ್ಕಾರಿ ಕಾಲೇಜು/ ಖಾಸಗಿ/ ಮ್ಯಾನೆಟ್‌ಮೆಂಟ್ ಕೋಟಾದಡಿ ಅರಿವು ಸಾಲ ಯೋಜನೆಯಡಿಯಲ್ಲಿ ಗರಿಷ್ಠ 5 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ […]

ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಪ.ವರ್ಗದ ಕೊರಗ ಸಮುದಾಯದ 10ನೇ ತರಗತಿ ಹಾಗೂ ಮೇಲ್ಪಟ್ಟ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಐಟಿಡಿಪಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಕುಂದಾಪುರ, ಕಾರ್ಕಳ ತಾಲೂಕು ಕಚೇರಿ ಹಾಗೂ ಎಲ್ಲ ಗ್ರಾಮ ಪಂಚಾಯತ್‌ಗಳಿoದ ಪಡೆಯಬಹುದು. ಅರ್ಜಿ ಹಾಗೂ ಸಂಬoಧಿಸಿದ ದಾಖಲಾತಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು/ಕಾಲೇಜಿನ ಪ್ರಾಂಶುಪಾಲರಿoದ ಧೃಡೀಕರಿಸಿಕೊಂಡು ರಜತಾದ್ರಿಯಲ್ಲಿರುವ ಐಟಿಡಿಪಿ ಕಚೇರಿಗೆ ಸಲ್ಲಿಸುವಂತೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.