ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

ಉಡುಪಿ: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ.ಜೆ. ಮೆಟಲ್ ಸಂಖ್ಯೆ- 156 ರವರು, ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಜೂನ್ 1 ರಿಂದ 25 ರ ವರೆಗೆ ನಡೆದ ರಾಜ್ಯ ಮಟ್ಟದ “ಗೃಹರಕ್ಷಕರ ಅಧಿಕಾರಿಗಳ ತರಬೇತಿ” (ಮಹಿಳೆಯರಿಗೆ) ಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆoಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಬಸ್ ಏಣಿಯಲ್ಲಿ ನೇತಾಡಿದ ವಿದ್ಯಾರ್ಥಿಗಳು; ವಿಡಿಯೋ ವೈರಲ್

ಉಡುಪಿ: ಖಾಸಗಿ ಬಸ್‌ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಉಡುಪಿ ಜಿಲ್ಲೆಯ ಹರಿಕಂಡಿಗೆ–ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನದ್ದು ಎನ್ನಲಾಗಿದೆ. ಬಸ್‌ನಲ್ಲಿ ಅತಿಯಾದ ಜನಸಂದಣಿ ಇದ್ದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಏಣಿಯಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ವಿದ್ಯಾರ್ಥಿಗಳ ಈ ಅಪಾಯಕಾರಿ ಪ್ರಯಾಣದ ಕುರಿತು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ […]
ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ: ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಜೆ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಿಸಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರು ಅಗತ್ಯವಿಲ್ಲದೆ ಹೊರಗಡೆ ಸಂಚರಿಸದಂತೆ, ತಗ್ಗು ಪ್ರದೇಶಗಳು, ನದಿ […]
BSNL ನಲ್ಲಿದೆ ಭರ್ಜರಿ ಉದ್ಯೋಗಾಕಾಶ:ಕೇಂದ್ರ ಸರ್ಕಾರಿ ಉದ್ಯೋಗವೇ ಬೇಕು ಅನ್ನೋರು ಚೂರು ಇಲ್ಲಿ ಗಮನಿಸಿ

ನವದೆಹಲಿ: ಕೇಂದ್ರ ಸರ್ಕಾರದ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಜೂನಿಯರ್ ಟೆಲಿಕಾಂ ಆಫೀಸರ್ (JTO – Telecom) ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 3 ಬೆಳಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಪ್ರಮುಖ ದಿನಾಂಕಗಳು ವಯೋಮಿತಿ ಮತ್ತು ಅರ್ಹತೆ ಅಭ್ಯರ್ಥಿಗಳು ಕನಿಷ್ಠ 20 […]
LPG ಗ್ರಾಹಕರೇ ಇಂದಿನಿಂದ ಹೊಸ ನಿಯಮಗಳು ಜಾರಿ, ಸಿಲಿಂಡರ್ ಬುಕ್ ಮಾಡುವ ಮುನ್ನ ಈ ಎಲ್ಲಾ ವಿಷಯಗಳು ನಿಮಗೆ ಗೊತ್ತಿರಲಿ!

ನವದೆಹಲಿ: ಜುಲೈ 1ರಿಂದ ಎಲ್‌ಪಿಜಿ (LPG) ಸಿಲಿಂಡರ್ ಹಾಗೂ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸೇವೆಗಳಿಗೆ ಸಂಬಂಧಿಸಿದಂತೆ ಹಲವು ಹೊಸ ನಿಯಮಗಳು ಜಾರಿಗೆ ಬಂದಿವೆ. ಇಂಡೇನ್, ಭಾರತ್ ಗ್ಯಾಸ್ ಮತ್ತು ಎಚ್‌ಪಿ ಗ್ಯಾಸ್ ಸೇರಿದಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಈ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಗ್ರಾಹಕರಿಗೆ ಹೆಚ್ಚು ಪಾರದರ್ಶಕ ಹಾಗೂ ಸುರಕ್ಷಿತ ಸೇವೆ ಒದಗಿಸುವುದು ಇದರ ಉದ್ದೇಶವಾಗಿದೆ. ಹೊಸ ನಿಯಮಗಳು ಲಕ್ಷಾಂತರ LPG ಮತ್ತು PNG ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, […]