ಉಡುಪಿ ಸೇರಿ ಕರಾವಳಿಗೆ ಎರಡು ದಿನ ರೆಡ್ ಅಲರ್ಟ್: ಭಾರೀ ಮಳೆ ಸುರಿಯುವ ಸಾಧ್ಯತೆ

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 2 ಮತ್ತು 3ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಕರಾವಳಿಯ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ

ಬ್ರಹ್ಮಾವರದಲ್ಲಿ ಭೀಕರ ರಸ್ತೆ ಅಪಘಾತ: ಹುಲಿ ವೇಷದ ಕಲಾವಿದ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್‌ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ. ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ (43) ಎಂದು ಗುರುತಿಸಲಾಗಿದೆ. ಗೋವಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ಐವರು ಉಡುಪಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಗದೂತ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು […]

ರಾಮಮಂದಿರ ಹುಂಡಿ ಹಣ ದುರುಪಯೋಗ ವಿಷಯದಲ್ಲಿ ಯಾರೂ ಮೌನವಾಗಿಲ್ಲ- ಸಂಸದ ಕೋಟ

ಉಡುಪಿ: ಅಯೋಧ್ಯೆಯ ರಾಮಮಂದಿರ ಹುಂಡಿ ಹಣ ದುರುಪಯೋಗ ವಿಷಯದಲ್ಲಿ ಯಾರೂ ಮೌನವಾಗಿಲ್ಲ. ರಾಮಮಂದಿರ ಹಿಂದೂಗಳ ಶ್ರದ್ಧಾಕೇಂದ್ರವಾಗಿದ್ದು, ಅಲ್ಲಿ ನಡೆದಿರುವ ಘಟನೆ ದೇಶಕ್ಕೂ, ಬಿಜೆಪಿಗೂ ಹಾಗೂ ಸಂಘ ಪರಿವಾರಕ್ಕೂ ನೋವುಂಟು ಮಾಡಿದೆ. ತಪ್ಪಿತಸ್ಥರ ವಿರುದ್ಧ ತಕ್ಷಣ ಬಂಧನ ಸೇರಿದಂತೆ ಕ್ರಮ ಕೈಗೊಳ್ಳಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿಯವರೂ ಹೇಳಿದ್ದಾರೆ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, […]

ವಾಟ್ಸಾಪ್‌ನಲ್ಲಿ ಬಿಗ್ ಅಪ್ಡೇಟ್! ಇನ್ಮುಂದೆ ಫೋನ್ ನಂಬರ್ ಇಲ್ಲದೇ ಚಾಟ್ ಮಾಡಬಹುದು

ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್‌ಗಳಲ್ಲಿ ಒಂದಾದ ವಾಟ್ಸಾಪ್ ತನ್ನ ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೊಸ ಫೀಚರ್‌ ಅನ್ನು ಘೋಷಿಸಿದೆ. ಇನ್ನು ಮುಂದೆ ಹೊಸ ವ್ಯಕ್ತಿಯೊಂದಿಗೆ ಚಾಟ್ ಮಾಡಲು ಅಥವಾ ಸಂಪರ್ಕ ಸಾಧಿಸಲು ಕಡ್ಡಾಯವಾಗಿ ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳುವ ಅಗತ್ಯ ಇರುವುದಿಲ್ಲ. ಕಂಪನಿಯು ಪರಿಚಯಿಸುತ್ತಿರುವ ಹೊಸ ವ್ಯವಸ್ಥೆಯಡಿ ಪ್ರತಿಯೊಬ್ಬ ಬಳಕೆದಾರರು ತಮ್ಮದೇ ಆದ ವಿಶಿಷ್ಟ (Unique) ಯೂಸರ್‌ನೇಮ್ ಆಯ್ಕೆ ಮಾಡಿಕೊಳ್ಳಬಹುದು. ಇದೇ ಯೂಸರ್‌ನೇಮ್ ಮೂಲಕ ಇತರರು ಅವರನ್ನು ವಾಟ್ಸಾಪ್‌ನಲ್ಲಿ ಹುಡುಕಿ ಸಂಪರ್ಕಿಸಬಹುದಾಗಿದೆ. […]

ಹೊಲದ ಕಸಕ್ಕೂ ಚಿನ್ನದ ಬೆಲೆ! ರೈತರೇ, ಕೃಷಿ ತ್ಯಾಜ್ಯದಿಂದ ₹50 ಸಾವಿರ ಆದಾಯವಿದೆ ಗಮನಿಸಿ

ಬೆಂಗಳೂರು: ಬೆಳೆ ಕಟಾವಿನ ಬಳಿಕ ಹೊಲದಲ್ಲಿ ಉಳಿಯುವ ಕೃಷಿ ತ್ಯಾಜ್ಯವನ್ನು ಸುಟ್ಟು ಹಾಕುವ ಬದಲು ಅದನ್ನೇ ಆದಾಯದ ಮೂಲವನ್ನಾಗಿ ಪರಿವರ್ತಿಸಿಕೊಳ್ಳುವ ಹೊಸ ಅವಕಾಶ ರೈತರಿಗೆ ಲಭ್ಯವಾಗಿದೆ. ಕಾರ್ಬನ್ ಕ್ರೆಡಿಟ್ ವ್ಯವಸ್ಥೆಯ ಮೂಲಕ ಕಬ್ಬು, ಜೋಳ, ಬಾಳೆ ಸೇರಿದಂತೆ ವಿವಿಧ ಬೆಳೆಗಳ ತ್ಯಾಜ್ಯದಿಂದ ವರ್ಷಕ್ಕೆ ₹30 ಸಾವಿರದಿಂದ ₹50 ಸಾವಿರಕ್ಕೂ ಹೆಚ್ಚು ಹೆಚ್ಚುವರಿ ಆದಾಯ ಗಳಿಸುವ ಸಾಧ್ಯತೆ ಇದೆ. ಈ ಹೊಸ ಪರಿಕಲ್ಪನೆಯನ್ನು ಬೆಂಗಳೂರಿನ ರಿನ್ಯೂಕ್ರೆಡ್ (RenewCred) ಸ್ಟಾರ್ಟ್‌ಅಪ್ ಪರಿಚಯಿಸಿದೆ. ಅಭಿಮನ್ಯು ರಾಠಿ ಮತ್ತು ಯೋಗೇಂದ್ರ ಪಾಂಚಾಲ್ ಸ್ಥಾಪಿಸಿರುವ […]