ಉಡುಪಿ: ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿ; ಮೂವರು ಆರೋಪಿಗಳ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜೂನ್ 27ರಂದು ರಾತ್ರಿ ಸುಮಾರಿಗೆ ಕಾರಿನಲ್ಲಿ ಬಂದ ಮೂವರು ಆರೋಪಿಗಳು ಕಾರಿಗೆ ₹4,711.09 ಮೌಲ್ಯದ ಡೀಸೆಲ್ ತುಂಬಿಸಿಕೊಂಡಿದ್ದರು. ಬಳಿಕ QR ಕೋಡ್ ಸ್ಕ್ಯಾನ್ ಮಾಡಿ ಬಿಲ್ ನೀಡುವಂತೆ ಸಿಬ್ಬಂದಿಗೆ ಹೇಳಿ, ಹಣ ಪಾವತಿಸುವಂತೆ ನಂಬಿಸಿ ಯಾವುದೇ ಹಣ ನೀಡದೇ ಕಾರಿನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ […]
ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್- ಎಸ್.ಎಸ್.ಪಿ ತಂತ್ರಾoಶವಾದ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ […]
ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ.ವರ್ಗದ ಮತ್ತು ಇತರೆ ಜನಾಗಂಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ […]
ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪತ್ರ, ಪ.ಜಾ ಮತ್ತು ಪ.ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100/- ಛಾಪಾ ಕಾಗದಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು […]
ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ ಸೇರಿದಂತೆ ಹಲವಾರು ಶರಣರು ರಚಿಸಿದ ಸಾವಿರಾರು ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅವುಗಳನ್ನು ಮುದ್ರಿಸುವ ಮೂಲಕ ವಚನ ಸಾಹಿತ್ಯವೂ ಇಂದಿಗೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ ಫ. ಗು ಹಳಕಟ್ಟಿಯವರ ಶ್ರಮ ಅವಿರತವಾದುದು ಎಂದು ಕರಾವಳಿ ಅಬಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ […]