ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನ. ಸರ್ಕಾರ ನೀಡಿರುವ ಸೂಚನೆಗಳನ್ನು ಆಧರಿಸಿ, ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನ ಸೌಲಭ್ಯ: ಅರ್ಜಿ ಸೌಲಭ್ಯ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬoಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ಲಿಂಕ್‌ನಲ್ಲಿ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ […]
ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ರವರನ್ನು ನವದೆಹಲಿ ಕೇಂದ್ರ ಕಚೇರಿಯ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಡಾ ಪಿ.ಜಿ.ಆರ್. ಸಿಂಧಿಯಾ ರವರ ಶಿಫಾರಸಿನ ಮೇರೆಗೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ಮುಖ್ಯ ರಾಷ್ಟ್ರೀಯ ಆಯುಕ್ತರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಕೆ. ಖಂಡೇಲ್ವಾಲ್ ಇವರನ್ನು ಸಾಂಸ್ಕೃತಿಕ […]
ಉಡುಪಿಯ ರಕ್ಷಿತ ಗೆ ಮಿಸ್ ಮಣಿಪಾಲ್ ಕಿರೀಟ

ಆ್ಯಂಕರ್- ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಫ್ಯಾಶನ್ ಶೋ ನಲ್ಲಿ ಉಡುಪಿಯ ರಕ್ಷಿತ ಮಿಸ್ ಮಣಿಪಾಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳ 500 ಮಂದಿ ಸ್ಪರ್ಧಾಳುಗಳು ಟೀನ್ ಮಣಿಪಾಲ್, ಮಿಸ್ಟರ್ ಮಣಿಪಾಲ್,ಮಿಸೆಸ್ ಮಣಿಪಾಲ್, ಮಿಸ್ ಮಣಿಪಾಲ್ ವಿಭಾಗಗಳಲ್ಲಿ ಸರ್ಧೆ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಮಿಸ್ ಮಣಿಪಾಲ್ ವಿನ್ನರ್ ರಕ್ಷಿತ, ಈ ಸ್ಪರ್ಧೆ ನಮಗೆ ಒಂದೊಳ್ಳೆ ಅವಕಾಶ ಕೊಟ್ಟಿದೆ. ಮಿಸ್ ಮಣಿಪಾಲ್ ಕಿರೀಟ ಗೆದ್ದ ಬಳಿಕ ಗೋವಾದಲ್ಲಿ ಮಿಸ್ ಸೌಥ್ ಇಂಡಿಯಾ ಸ್ಪರ್ಧೆಗೆ ಅವಕಾಶ […]
ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್ ಮುಂಭಾಗದಲ್ಲಿ ಸರಣಿ ಅಪಘಾತ; ಎರಡು ಕಾರು ಜಖಂ

ಉಡುಪಿ: ಉಡುಪಿ ಜಯಲಕ್ಷ್ಮೀ ಸಿಲ್ಕ್ಸ್ ಮುಂಭಾಗದಲ್ಲಿ ರಾ.ಹೆ. (169ಎ)ರಲ್ಲಿ ಶನಿವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಜಖಂಗೊಂಡಿವೆ. ಬನ್ನಂಜೆ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎರಡು ಕಾರುಗಳಿಗೆ ಡಿಕ್ಕಿ ಹೊಡಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಅಪಘಾತದ ಪರಿಣಾಮ ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರ ಪೊಲೀಸರು ವಾಹನಗಳ ಸಂಚಾರವನ್ನು ಸುಗಮಗೊಳಿಸಿದರು.