ಬ್ರಹ್ಮಾವರ: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ

ಉಡುಪಿ: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಎತ್ತಿನಟ್ಟಿ–ಮದಗದ ಸಮೀಪ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಶಮಂತ್ ಅವರು ಶಿರಿಯಾರ ಪೇಟೆಯಿಂದ ತಮ್ಮ ಸ್ಕೂಟಿಯಲ್ಲಿ ಎತ್ತಿನಟ್ಟಿ ಭಾಗದ ಮನೆಗೆ ತೆರಳುತ್ತಿದ್ದ ವೇಳೆ, ಸೈಬ್ರಕಟ್ಟೆ ಕಡೆಯಿಂದ ಬಂದ ಕಾರು ಬಲಭಾಗಕ್ಕೆ ತಿರುಗುವ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಅಪಘಾತದ ಸಂಪೂರ್ಣ […]

ಕಾಲ್ನಡಿಗೆಯಲ್ಲೇ 3,550 ಮೆಟ್ಟಿಲೇರಿ ಹರಕೆ ಪೂರೈಸಿದ 116 ವರ್ಷದ ಲಕ್ಷ್ಮವ್ವ: ಕರ್ನಾಟಕದ ಈ ಛಲಗಾತಿ ಅಜ್ಜಿಯ ಸಾಹಸಕ್ಕೆ ಬೆರಗಾದ ಭಕ್ತರು

ತಿರುಪತಿ: ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಕರ್ನಾಟಕ ಮೂಲದ ಶತಾಯುಷಿ ವೃದ್ಧೆ ಲಕ್ಷ್ಮವ್ವ ಅವರು ತಮ್ಮ ಅಪರೂಪದ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ತಿರುಮಲಕ್ಕೆ ಆಗಮಿಸಿದ ಅವರು, ಅಲಿಪಿರಿ ಮಾರ್ಗದ ಸುಮಾರು 3,550 ಮೆಟ್ಟಿಲುಗಳನ್ನು ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಲುಪಿರುವುದು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಭೀಮವ್ವ ಎಂದೂ ಕರೆಯಲ್ಪಡುವ ಲಕ್ಷ್ಮವ್ವ ಅವರಿಗೆ ಕುಟುಂಬಸ್ಥರ ಮಾಹಿತಿ ಪ್ರಕಾರ 116 ವರ್ಷ ವಯಸ್ಸಾಗಿದೆ. ಅವರ ಅಧಿಕೃತ ವಯಸ್ಸಿನ ದಾಖಲೆಗಳು ಲಭ್ಯವಾಗದಿದ್ದರೂ, ಶತಾಯುಷಿಯಾಗಿರುವುದು ವಿಡಿಯೊಗಳಲ್ಲಿ […]

ಉಡುಪಿ: ಅಕ್ರಮ ಮದ್ಯ ಮಾರಾಟ; ಓರ್ವ ಬಂಧನ

ಉಡುಪಿ: ನಗರದ ಹಳೆ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ನಗರ ಠಾಣೆ ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ಮೂಲದ ಕಂಟ್ಯಪ್ಪ ಮೇಥಿ (32) ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಸಿಟಿ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ […]

ದೇವಾಡಿಗ ಸಮಾಜಕ್ಕೆ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ: ಡಿ.20ರಂದು ಉಡುಪಿಯಲ್ಲಿ “ವಿಶ್ವ ದೇವಾಡಿಗ ಮಹಾಧಿವೇಶನ”

ಉಡುಪಿ: ದೇವಾಡಿಗ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಸಮುದಾಯಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು ಎಂಬ ಉದ್ದೇಶದಿಂದ ವಿಶ್ವ ದೇವಾಡಿಗ ಮಹಾಮಂಡಳ, ಬಾರ್ಕೂರು ವತಿಯಿಂದ ಡಿಸೆಂಬರ್ 20ರಂದು ಉಡುಪಿಯ ಚಿಟ್ಟಾಡಿಯ ಬಯಲು ರಂಗಮಂದಿರದಲ್ಲಿ ವಿಶ್ವ ದೇವಾಡಿಗ ಮಹಾಧಿವೇಶನ ಆಯೋಜಿಸಲಾಗಿದೆ ಎಂದು ಮಹಾಮಂಡಳದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಧಿವೇಶನದ ಕಾರ್ಯಾಲಯವನ್ನು ಜುಲೈ 5ರಂದು ಉದ್ಘಾಟಿಸಲಾಗುವುದು. ಮಹಾಧಿವೇಶನದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20 ಸಾವಿರಕ್ಕೂ ಅಧಿಕ […]

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ (MCN) ನ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗವು 2025–26 ನೇ ಸಾಲಿನ ಉದ್ಯೋಗ ನಿಯೋಜನೆ ಅಭಿಯಾನವನ್ನು ಜುಲೈ 2, 2026 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ರವರೆಗೆ ಯಶಸ್ವಿಯಾಗಿ ಆಯೋಜಿಸಿತು. ಭಾರತದ ಪ್ರಮುಖ ಮಲ್ಟಿ-ಸ್ಪೆಷಾಲಿಟಿ ಆರೋಗ್ಯ ಸಂಸ್ಥೆಗಳಲ್ಲಿ ಒಂದಾದ ಹೈದರಾಬಾದ್‌ನ ಹೈಟೆಕ್ ಸಿಟಿಯ ಯಶೋದಾ ಆಸ್ಪತ್ರೆಗಳ ಸಹಯೋಗದೊಂದಿಗೆ ನೇಮಕಾತಿ ಅಭಿಯಾನವನ್ನು ನಡೆಸಲಾಯಿತು. ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ನೇಮಕಾತಿ ತಂಡಕ್ಕೆ ಆತ್ಮೀಯ ಸ್ವಾಗತ ಕೋರುವುದರೊಂದಿಗೆ […]