ರಿಯಲ್ ಎಸ್ಟೇಟ್ ಹೂಡಿಕೆ ಹೆಸರಲ್ಲಿ ₹70 ಲಕ್ಷ ವಂಚನೆ; ಬ್ಲ್ಯಾಕ್ ಮೇಲ್, ಜೀವಬೆದರಿಕೆ ಆರೋಪದಲ್ಲಿ ಮಹಿಳೆ ಬಂಧನ

ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ ₹70 ಲಕ್ಷ ಪಡೆದು ವಂಚನೆ ನಡೆಸಿದ ಹಾಗೂ ಬಳಿಕ ಹಣಕ್ಕಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಕಾಪು ತಾಲೂಕಿನ ಪಡುಬಿದ್ರೆ ಸಮೀಪದ ಕಂಚಿನಡ್ಕ ನಿವಾಸಿ ಝೀನತ್‌ ಇಬ್ರಾಹಿಂ ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಉಡುಪಿ ಮೂಲದ ದೂರುದಾರರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೇಳೆ ಆರೋಪಿತೆಯ ಪರಿಚಯವಾಗಿದ್ದು, ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ […]

ನಗದು-ದಾಖಲೆಗಳಿದ್ದ ಪರ್ಸ್ ಮರಳಿಸಿ ಮಾದರಿಯಾದ ಆಟೋ ಚಾಲಕ

ಬಂಟ್ವಾಳ: ನಗದು ಹಾಗೂ ಪ್ರಮುಖ ದಾಖಲೆಗಳಿದ್ದ ಕಳೆದುಹೋಗಿದ್ದ ಪರ್ಸ್ ಅನ್ನು ಅದರ ಮಾಲೀಕರಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಮೂಲಕ ಆಟೋ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಶುಕ್ರವಾರ ಕಲ್ಲಡ್ಕದಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆಯ ಸತ್ಯಶ್ರೀ ಕ್ಯಾಟರಿಂಗ್ ಮತ್ತು ಮಾತೃಶ್ರೀ ಕ್ಯಾಟರಿಂಗ್ ಮಾಲೀಕರ ಸಹೋದರರೂ ಆಗಿರುವ ಆಟೋ ಚಾಲಕ ರುದ್ರೇಶ್ ಪೆರ್ನೆ ಅವರು ಕೆಲಸದ ನಿಮಿತ್ತ ಕಲ್ಲಡ್ಕಕ್ಕೆ ಬಂದಿದ್ದ ವೇಳೆ, ಸರ್ವಿಸ್ ರಸ್ತೆಯಲ್ಲಿ ಬಿದ್ದಿದ್ದ ಪರ್ಸ್‌ ಕಂಡು ತೆಗೆದುಕೊಂಡಿದ್ದಾರೆ. ಪರ್ಸ್‌ನಲ್ಲಿದ್ದ ಮಾಹಿತಿಯ ಆಧಾರದ ಮೇಲೆ ಅದರ ಮಾಲೀಕರನ್ನು […]

ಕಾರ್ಕಳ ಕ್ರೈಸ್ಟ್ ಕಿಂಗ್: ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಕಾರ್ಕಳ: ಇಲ್ಲಿನ ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಸ್ತ್ರೀ ವೇಷಧಾರಿ ಶಶಿಕಾಂತ್ ಶೆಟ್ಟಿ ದೀಪ ಬೆಳಗುವುದರ ಮೂಲಕ 2026-27ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ತರಬೇತಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಹಚ್ಚುವ ದೀಪ ಒಂದುಕಡೆ ಇದ್ದರೆ ಅದರ ಬೆಳಕು ಮಾತ್ರ ಎಲ್ಲಾ ಕಡೆ ಪಸರಿಸುತ್ತದೆ. ಮಕ್ಕಳು ವಿವಿಧ ಕಲೆಗಳಲ್ಲಿ ಪಾರಂಗತರಾಗಿ ಈ ಸಮಾಜದಲ್ಲಿ ಪ್ರಜ್ವಲಿಸುವ ದೀಪಗಳಾಗಬೇಕು. ಶಿಕ್ಷಣ ಸಂಸ್ಥೆಗಳು […]

ವೈರಲ್ ಆಗ್ತಿದೆ ಸಮಯಪ್ರಜ್ಞೆಯಿಂದ ಜೀವ ಉಳಿಸಿದ ಅಲೋಶಿಯಸ್ ವಿದ್ಯಾರ್ಥಿಗಳ ಕಾರ್ಯ

ಮಂಗಳೂರು: ಸಮಾಜ ಕಾರ್ಯ ಶಿಕ್ಷಣ(MSW) ಕೇವಲ ಪಠ್ಯದಲ್ಲಿ ಮಾತ್ರವಲ್ಲ, ನಿಜಜೀವನದಲ್ಲೂ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ನಿದರ್ಶನದಂತೆ ಅಪಾರ ಮೆಚ್ಚುಗೆ ಗಳಿಸುತ್ತಿದೆ ನಗರದ ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ತಂಡ. ಈ ವಿದ್ಯಾರ್ಥಿಗಳು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರ ಜೀವ ಉಳಿಸುವ ಮೂಲಕ ಮಾನವೀಯತೆ, ಸಮಯಪ್ರಜ್ಞೆ ಹಾಗೂ ಧೈರ್ಯದ ಮಾದರಿಯಾಗಿದೆ. ಜೂನ್ 30ರಂದು ನಗರದ ಬಸ್ ನಿಲ್ದಾಣದ ಬಳಿ ಭಾರೀ ಮಳೆಯಿಂದ ಅಂಗಡಿಯ ದೊಡ್ಡ ಗಾಜಿನ ಫಲಕ ಒಡೆದು ಅಲ್ಲಿಂದ […]

ರಾಮಮಂದಿರದ ಬಳಿಕ ಇದೀಗ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಇದೀಗ ಉತ್ತರಾಖಂಡದ ಪ್ರಸಿದ್ಧ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗದ ಆರೋಪ ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ (BKTC) ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಮಾಹಿತಿ ನೀಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಪರಿಶೀಲಿಸಲು ತನಿಖಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಕೆಲ […]