ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ ರಿಂದ ಪ್ರಾರಂಭವಾಗಿರುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್” ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]
ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000/- ಮೊತ್ತದ ವಿದ್ಯುತ್‌ಚಾಲಿತ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಆನ್‌ಲೈನ್ ವೆಬ್‌ಸೈಟ್ udupi.nic.in ನಲ್ಲಿ ನಮೂದಿಸಿದ ಲಿಂಕ್‌ನ ಮುಖಾಂತರ ಅರ್ಜಿಗಳನ್ನು ಭರ್ತಿ ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ದೃಢೀಕರಣದೊಂದಿಗೆ […]
ಮೆಸ್ಕಾಂ ಜನ ಸಂಪರ್ಕ ಸಭೆ

ಉಡುಪಿ: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಜುಲೈ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08259-280300 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಳೆ ವಿಮೆ ಯೋಜನೆ: ನೋಂದಣಿ ಅವಧಿ ವಿಸ್ತರಣೆ

ಉಡುಪಿ: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ, ಜಿಲ್ಲೆಯ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ನಿಗಧಿಪಡಿಸಲಾಗಿದ್ದ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಎಲ್ಲಾ ಅಧಿಸೂಚಿತ ವಿಮಾ ಘಟಕಗಳ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ನೊಂದಣಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ವಿಮೆಗೆ ಒಳಪಡುವ ರೈತರು ಕೂಡಲೇ ತಮ್ಮ ಹತ್ತಿರದ ಬ್ಯಾಂಕ್ ಶಾಖೆಗಳು, ಗ್ರಾಮೀಣ ಸಹಕಾರಿ […]
ನಿಟ್ಟೆಯಲ್ಲಿ ಕರಾವಳಿ ಭಾಗದ ಪ್ರಥಮ ಸಾರ್ವಜನಿಕ ರಿಯಲ್-ಟೈಮ್ ಹವಾಮಾನ ಮತ್ತು ವಾಯು ಗುಣಮಟ್ಟ ಮೊನಿಟರಿಂಗ್ ಕೇಂದ್ರಕ್ಕೆ ಚಾಲನೆ

ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ಹವಾಮಾನ ಮತ್ತು ವಾಯು ಗುಣಮಟ್ಟ ಮೊನಿಟರಿಂಗ್ ಕೇಂದ್ರವನ್ನು ಜುಲೈ 3ರಂದು ನಿಟ್ಟೆ ತಾಂತ್ರಿಕ ಕಾಲೇಜಿನ ಕ್ಯಾಂಪಸ್ ನಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು Wrkwrk, 99Games ಹಾಗೂ Robosoft ಸಂಸ್ಥೆಗಳ ಸಂಸ್ಥಾಪಕರಾದ ರೋಹಿತ್ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ TiE ಮಂಗಳೂರು ಕಾರ್ಯನಿರ್ವಾಹಕ ನಿರ್ದೇಶಕ ಅತುಲ್ ಉಡುಪಿ, ಜನರಲ್ ಇಲೆಕ್ಟ್ರಿಕ್ ಹೆಲ್ತ್ಕೇರ್ ನ ಸಾಫ್ಟ್‌ವೇರ್ ಡೆವಲಪರ್ ಸಿದ್ಧಾರ್ಥ್ ಪೈ, ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾದ ಡಾ. […]