ಒಂದೇ ಸಲ ಮಳೆ ಅಬ್ಬರಿಸಿ ಭೀಕರವಾಗಲಿದೆಯಾ ವಾತಾವರಣ? ರಾಜ್ಯದಲ್ಲಿ ಭೂಕುಸಿತದ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, ಹಲವು ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು: ಜುಲೈ 7ರಿಂದ 11ರವರೆಗೆ ರಾಜ್ಯದ ಘಟ್ಟ ಪ್ರದೇಶಗಳ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಅಪಾಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಅದರಲ್ಲೂ ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ […]
ಮುಂಬೈನಲ್ಲಿ ಮುಂದುವರಿದ ಭಾರೀ ಮಳೆ, ಭೂಕುಸಿತಕ್ಕೆ 8 ಸಾವು, ಘಾಟಿ ರಸ್ತೆಗಳು ಬಂದ್, ರೈಲು, ಬಸ್ ಸಂಚಾರವೂ ಅಸ್ತವ್ಯಸ್ತ

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾನುವಾರ ಒಂದೇ ದಿನ ಮಳೆಗೆ ಸಂಬಂಧಿಸಿದ ವಿವಿಧ ಅವಘಡಗಳಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸೋಮವಾರವೂ ಮಳೆಯ ಅಬ್ಬರ ಮುಂದುವರಿದ ಪರಿಣಾಮ ಭೂಕುಸಿತ, ಪ್ರವಾಹ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮುಂಖುರ್ಡ್ ಪ್ರದೇಶದಲ್ಲಿ ಚಾಲ್ ಕಟ್ಟಡದ ಒಂದು ಭಾಗ ಕುಸಿದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದೆಡೆ ಮರ ಬಿದ್ದು ಒಬ್ಬರು ಹಾಗೂ ಕಟ್ಟಡದ ಗ್ರಿಲ್ […]
ಉಡುಪಿ ಪತ್ರಿಕಾ ಭವನ ಸಮಿತಿ: ಲೆಕ್ಕಾಚಾರ ಮಂಡನೆ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರ

ಉಡುಪಿ: ಉಡುಪಿ ಪತ್ರಿಕಾ ಭವನ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು. ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ವರದಿ ವಾಚಿಸಿ, 2024-2025 ಹಾಗೂ 2025-2026 ನೇ ಸಾಲಿನ ಲೆಕ್ಕಪತ್ರವನ್ನು ಸಭೆಯ ಮುಂದಿಟ್ಟರು. ಲೆಕ್ಕಪರಿಶೋಧಕರಿಂದ ಪರಿಶೋಧನೆಗೆ ಒಳಪಟ್ಟಿರುವ ವರದಿಯನ್ನು ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಅಂಗೀಕರಿಸಿದರು. ಲೆಕ್ಕಪತ್ರವನ್ನು ಅಂಗೀಕರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ 2022 ರ ಅಕ್ಟೋಬರ್ 19 […]
ಹಿರಿಯಡಕ: ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ

ಉಡುಪಿ: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ […]
ಇನ್‌ಸ್ಟಾಗ್ರಾಂಗೆ ಕೇಂದ್ರ ಸರ್ಕಾರದ ಶಾಕ್ :ಇನ್ಮುಂದೆ ಈ ರೀತಿಯ ರೀಲ್ಸ್ ಹಾಕುವಂತಿಲ್ಲ!

ನವದೆಹಲಿ: ಮಕ್ಕಳ ಲೈಂಗಿಕ ಶೋಷಣೆ ಹಾಗೂ ದೌರ್ಜನ್ಯಕ್ಕೆ (CSAM/CSEAM) ಸಂಬಂಧಿಸಿದ ವಿಷಯಗಳು ಮತ್ತು ಅವುಗಳನ್ನು ಉತ್ತೇಜಿಸುವ ಜಾಹೀರಾತುಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಮೆಟಾ (ಇನ್‌ಸ್ಟಾಗ್ರಾಂ)ಗೆ ನಿರ್ದೇಶನ ನೀಡಿದೆ. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಏಳು ದಿನಗಳೊಳಗೆ ಸ್ಪಷ್ಟೀಕರಣ ನೀಡುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನೋಟಿಸ್ ಜಾರಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಂನಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಷಯಗಳು ಹಾಗೂ ಜಾಹೀರಾತುಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ […]