ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿoಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ ಪ್ರಾರಂಭವಾಗಿದ್ದು, ಐಟಿಐ ಹಾಗೂ ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ 2 ನೇ ವರ್ಷ/ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶಾತಿಯ ಅವಧಿ ಶೀಘ್ರವೇ ಮುಗಿಯಲಿದ್ದು, ಸೀಮಿತ ಸಂಖ್ಯೆಯ ಸೀಟುಗಳು ಮಾತ್ರ ಸಂಸ್ಥೆಯಲ್ಲಿ ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ಮೊ.ನಂ: 8124489163, ದೂ.ಸಂಖ್ಯೆ: 0821-2516322 ಅನ್ನು […]

ಜು. 10 ರಂದು ನೇರ ಸಂದರ್ಶನ

ಉಡುಪಿ: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s ಎದುರಿನ v2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, […]

ಜುಲೈ 8ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 8 (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ. ದಕ್ಷಿಣ […]

ಹೆಬ್ರಿ: ವ್ಯಕ್ತಿ ನಾಪತ್ತೆ

ಉಡುಪಿ ಜುಲೈ 07: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ ವ್ಯಕ್ತಿಯು ಜೂನ್ 28 ರಂದು ಸಂಜೆ 7.30 ರ ಸುಮಾರಿಗೆ ತನ್ನ ಮಗನೊಂದಿಗೆ ಗಲಾಟೆ ಮಾಡಿ, ಮನೆ ಬಿಟ್ಟು ಹೋಗುವುದಾಗಿ ಹೇಳಿ ತನ್ನ ಓಮ್ನಿ ಕಾರಿನಲ್ಲಿ ಬಟ್ಟೆಬರೆಯೊಂದಿಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ, ತಮಿಳು ಹಾಗೂ ತೆಲುಗು […]

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆರ್‌ಎಸ್‌ಎಸ್ ಕಾರಣ- ಎಂ.ಜಿ.ಹೆಗಡೆ

ಉಡುಪಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಇದರಿಂದ ಅಸುನೀಗಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಲೈಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ಕ್ಯಾಂಡಲ್ ಲೈಟ್ ಮಾರ್ಚ್‌ಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಬಳಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಚಾಲನೆ ನೀಡಿದರು. ಅಲ್ಲಿಂದ ಹೊರಟ ಜಾಥವು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣದ ಮಾರ್ಗವಾಗಿ ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ […]