ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್? ಹಣ ಹೆಚ್ಚಳದ ಬಗ್ಗೆ ಬಂದಿದೆ ಹೊಸ ಸಲಹೆ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಹಣದುಬ್ಬರ ಮತ್ತು ಜೀವನ ವೆಚ್ಚದ ಏರಿಕೆಗೆ ಅನುಗುಣವಾಗಿ ಫಲಾನುಭವಿಗಳಿಗೆ ನೀಡುವ ಮಾಸಿಕ ₹2,000 ನೆರವನ್ನು ಕಾಲಕಾಲಕ್ಕೆ ಪರಿಷ್ಕರಿಸಬೇಕು ಎಂಬ ಶಿಫಾರಸು ಮಾಡಲಾಗಿದೆ. ಆದರೆ ಸದ್ಯಕ್ಕೆ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ₹2,000ರಿಂದ ಹೆಚ್ಚಿಸುವ ಯಾವುದೇ ಅಧಿಕೃತ ಸರ್ಕಾರದ ನಿರ್ಧಾರ ಪ್ರಕಟವಾಗಿಲ್ಲ. ಸಮಿತಿಯ ವರದಿ ಪ್ರಕಾರ, ಕರ್ನಾಟಕ ಸೇರಿದಂತೆ 15ಕ್ಕೂ ಹೆಚ್ಚು ರಾಜ್ಯಗಳಲ್ಲಿ ಜಾರಿಯಲ್ಲಿರುವ ಮಹಿಳಾ ಆರ್ಥಿಕ ನೆರವು ಯೋಜನೆಗಳು ಕುಟುಂಬಗಳ ಉಳಿತಾಯ […]

ಚಲಿಸುತ್ತಿದ್ದ ರೈಲಿನಲ್ಲೇ ಸುರಕ್ಷಿತ ಹೆರಿಗೆ: ವೈದ್ಯಕೀಯ ವಿದ್ಯಾರ್ಥಿಗಳ ಸಮಯಪ್ರಜ್ಞೆಗೆ ಮೆಚ್ಚುಗೆ

ಚಲಿಸುತ್ತಿದ್ದ ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ ಮಾಡಿಸಿ ತಾಯಿ-ಮಗುವಿನ ಜೀವ ಉಳಿಸಿದ ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಮಾನವೀಯತೆ ಹಾಗೂ ವೈದ್ಯಕೀಯ ಕೌಶಲ್ಯದ ಮಾದರಿಯಾಗಿದ್ದಾರೆ. ಮಾನಸರೋಗ ಹಾಗೂ ಮನೋವಿಜ್ಞಾನ ವಿಭಾಗದ ಡಾ. ರಶ್ಮಿ ಬೀಳಗಿ, ಡಾ. ಶಾಹಿನ್ ಎಂ ಹಾಗೂ ಡಾ. ಲತಾಶ್ರೀ ಎನ್ ಅವರು ವಾರಾಣಸಿಯಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಸಮ್ಮೇಳನಕ್ಕೆ ರೈಲಿನಲ್ಲಿ ತೆರಳುತ್ತಿದ್ದ ವೇಳೆ ಸಹಪ್ರಯಾಣಿಕೆಯಾಗಿದ್ದ ಪೂರ್ಣಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಪರಿಸ್ಥಿತಿ ಪರಿಶೀಲಿಸಿದ ಅವರು ರೈಲಿನಲ್ಲೇ […]