ಪೋಷಕತ್ವ ಯೋಜನೆಯಡಿ ಅರ್ಜಿ ಆಹ್ವಾನ

ಉಡುಪಿ: ಬಾಲನ್ಯಾಯ ಕಾಯ್ದೆ 2015ರನ್ವಯ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾದ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದೀರ್ಘಾವಧಿಯಿಂದ ಆಶ್ರಯ ಪಡೆದಿರುವ ಹಾಗೂ ವಿವಿಧ ಕಾರಣಗಳಿಂದ ಪೋಷಕರ ಆರೈಕೆಯಿಂದ ವಂಚಿತರಾದ 07 ರಿಂದ 18 ವರ್ಷದೊಳಗಿನ ಮಕ್ಕಳಿಗೆ ತಾತ್ಕಲಿಕ ಪೋಷಕರನ್ನು ಒದಗಿಸುವುದು ಪೋಷಕತ್ವ ಯೋಜನೆಯ ಮುಖ್ಯ ದೂರದೃಷ್ಟಿಯಾಗಿದೆ. ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿದ್ದು, ವಿವಿಧ ಕಾರಣಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ […]

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ವಿಫಲ: ಕೆಆರ್‌ಎಸ್ ಪಕ್ಷ ಆರೋಪ

ಉಡುಪಿ: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್‌ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿ ಆರಂಭಿಸುವುದಾಗಿ ಘೋಷಿಸಿದ್ದರೂ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಟೀಕಿಸಿದರು. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಲು ವರ್ಗಾವಣೆ ದಂಧೆಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಹಣ ನೀಡಿ […]

ರೈಲಿನೊಳಗೆ ಬೆಡ್‌ರೂಮ್‌ನಂತೆ ಅಲಂಕಾರ ಮಾಡಿ ಹನಿಮೂನ್ ಆಚರಿಸಿ, ಪ್ರೇಮಸುಧೆಯಲ್ಲಿ ಮಿಂದ ನವದಂಪತಿ: ವಿಡಿಯೋ ವೈರಲ್ ಟಿಟಿಇ ಅಮಾನತು!

ಮುಂಬೈ: ಹೊಸದಾಗಿ ಮದುವೆಯಾದ ದಂಪತಿಯೊಬ್ಬರು ತಮ್ಮ ಮೊದಲ ರೈಲು ಪ್ರಯಾಣವನ್ನು ಜೀವಿತಾವಧಿಯ ನೆನಪಾಗಿಸಲು ರೈಲಿನ ಕೂಪೆಯನ್ನೇ ಹನಿಮೂನ್ ಬೆಡ್‌ರೂಮ್‌ನಂತೆ ಅಲಂಕರಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಈ ಅಲಂಕಾರದ ಹಿಂದೆ ಭದ್ರತಾ ನಿಯಮ ಉಲ್ಲಂಘನೆಯ ಆರೋಪ ಕೇಳಿಬಂದಿದ್ದು, ಪ್ರಕರಣದಲ್ಲಿ ಕರ್ತವ್ಯದಲ್ಲಿದ್ದ ಟಿಟಿಇ (Travelling Ticket Examiner) ಅವರನ್ನು ರೈಲ್ವೆ ಇಲಾಖೆ ಅಮಾನತುಗೊಳಿಸಿದೆ. ಜುಲೈ 6ರಂದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಬಲ್ಲಾರ್ಷಾಗೆ ಸಂಚರಿಸುತ್ತಿದ್ದ ನಂದಿಗ್ರಾಮ್ ಎಕ್ಸ್‌ಪ್ರೆಸ್ ರೈಲು ಜಲ್ನಾ ನಿಲ್ದಾಣಕ್ಕೆ ತಲುಪಿದ […]

ಸೆಲ್ಫಿ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್: ಜೀನತ್ ಮತ್ತು ಗೀತಾ ರಾವ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಉಡುಪಿ: ಸೆಲ್ಫಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನಂಜೆಯ ತೇಜೇಶ್ವ‌ರ್ ರಾವ್ ನೀಡಿದ ದೂರಿನ ಪ್ರಕಾರ, ಅವರು 2018ರಿಂದ 2022ರವರೆಗೆ ಉಡುಪಿಯ ಮಹಾಮಾಯ ಕಾಂಪ್ಲೆಕ್ಸ್‌ನಲ್ಲಿ ಮೋದಿಕೇರ್ ಸ್ಟಾಕ್ ಪಾಯಿಂಟ್ ಅಂಗಡಿಯನ್ನು ನಡೆಸುತ್ತಿದ್ದರು. ಈ ಅವಧಿಯಲ್ಲಿ ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ಅವರ ಪರಿಚಯವಾಗಿತ್ತು. ದೂರಿನ ಪ್ರಕಾರ, ಮೊದಲ ಆರೋಪಿತೆ ಝೀನತ್ ಮೋದಿಕೇರ್ […]

ಎಸ್‌ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರದಲ್ಲಿ ಪ್ರಥಮ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ; ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬ್ರಹ್ಮಾವರ: ಎಸ್ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರದಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕ-ಶಿಕ್ಷಕ ಸಂಘದ ಮಹಾಸಭೆ, ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಎಸ್‌ಎಂಎಸ್ ಕಮ್ಯುನಿಟಿ ಹಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಎಸ್‌ಎಂಎಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಲಾರೆನ್ಸ್ ಫಾದರ್ ಉದ್ಘಾಟಿಸಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಶಿಸ್ತು ಮತ್ತು ಪರಿಶ್ರಮದ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಂಗಳೂರಿನ ಗ್ರೇಸ್ […]