ಜವಾಹರ ನವೋದಯ ವಿದ್ಯಾಲಯ: 6 ನೇ ತರಗತಿ ಪ್ರವೇಶಾತಿ – ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಹೆಬ್ರಿಯ ಚಾರಾದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಯ ಪ್ರವೇಶಾತಿಗಾಗಿ, 5 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಮೀಪದ ಜವಾಹರ್ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ತಾವು ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನವೆಂಬರ್ […]
ಕುಂದಾಪುರ: ರೈತರಿಂದಲೇ ಮುಂಗಾರು ಬೆಳೆ ಸಮೀಕ್ಷೆಗೆ ಅವಕಾಶ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ತಂತ್ರಾoಶವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾoಶದ ಎಫ್.ಐ.ಡಿ. ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2026-27 ತಂತ್ರಾoಶವನ್ನು ಡೌನ್‌ಲೋಡ್ ಮಾಡಿಕೊಂಡು, ಅನಂತರ ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಒ.ಟಿ.ಪಿ. ಆಯ್ಕೆಯನ್ನು ಮಾಡಬೇಕು. ಆಧಾರ್ ಸಂಖ್ಯೆಗೆ […]
ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

ಉಡುಪಿ: ವಿಶೇಷಚೇತನರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಲವು ಪ್ರತಿಭೆಗಳಿವೆ ಅವರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸುವ ಕೆಲಸವನ್ನು ಸಮಾಜ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಎಸ್ ಹೇಳಿದರು. ಅವರು ಬುಧವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, […]
ಪತ್ರಕರ್ತ ಶಿಜಿತ್ ಅವರ ತಂದೆ ಸುರೇಶ್ ನಿಧನ

ಉಡುಪಿ: ಮೂಡಬೆಟ್ಟು ನಿವಾಸಿ ಸುರೇಶ್ ಕೆ.(72) ಅಲ್ಪಕಾಲದ ಅಸೌಖ್ಯದಿಂದ ಜು.9ರಂದು ಸಂಜೆ ವೇಳೆ ನಿಧನರಾದರು. ಇವರು ಪತ್ನಿ, ಪುತ್ರ ಪತ್ರಕರ್ತ ಶಿಜಿತ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಜು.11ರಂದು ಶನಿವಾರ ಮಧ್ಯಾಹ್ನ12ಗಂಟೆಗೆ ಇವರ ಅಂತಿಮ ದರ್ಶನಕ್ಕೆ ಮೂಡಬೆಟ್ಟುವಿನ ಮನೆಯಲ್ಲಿ ಅವಕಾಶ ನೀಡಲಾಗಿದೆ. ಅಂತ್ಯ ಸಂಸ್ಕಾರವು ಮಧ್ಯಾಹ್ನ 1ಗಂಟೆಗೆ ಬೀಡಿನಗುಡ್ಡೆಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳೇ ಇಲ್ಲಿ ಗಮನಿಸಿ, ಅರ್ಜಿ ತಿದ್ದುಪಡಿಗೆ ಜುಲೈ 13ರವರೆಗೆ ಅವಕಾಶವಿದೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (Civil Police Constable) ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ನೀಡಿದೆ. ಅರ್ಜಿ ಸಲ್ಲಿಸುವ ವೇಳೆ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಾಧಿಕಾರ ವಿಶೇಷ ‘Edit Application’ ಲಿಂಕ್ ಅನ್ನು ತೆರೆಯಿದ್ದು, ಜುಲೈ 13ರವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಪ್ರಕಾರ, ಅರ್ಜಿ ಭರ್ತಿ ಮಾಡುವ ವೇಳೆ ಗಡಿಬಿಡಿ ಅಥವಾ ತಾಂತ್ರಿಕ […]