ವಿಶ್ವವಿಖ್ಯಾತ ನಾಡಹಬ್ಬ ದಸರಾ ವೇಳಾಪಟ್ಟಿ ರೆಡಿ, ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಚರ್ಚೆ

ಬೆಂಗಳೂರು: 2026ರ ನಾಡಹಬ್ಬ ಮೈಸೂರು ದಸರಾವನ್ನು ಅದ್ಧೂರಿಯಾಗಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ ದಸರಾ ಮಹೋತ್ಸವದ ರೂಪುರೇಷೆ, ಗಜಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ನಿರ್ಧರಿಸಿದಂತೆ, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆಗೆ ಪುಷ್ಪಾರ್ಚನೆ […]

ರೋಟರಿ ಕ್ಲಬ್ ಮಣಿಪಾಲ್ ಟೌನ್‌ನಿಂದ ರಸ್ತೆ ವಿಭಾಜಕ ಹಸಿರೀಕರಣಕ್ಕೆ ಚಾಲನೆ

ಉಡುಪಿ: ನಗರದ ಸೌಂದರ್ಯ ಹೆಚ್ಚಿಸುವ ಹಾಗೂ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ರೋಟರಿ ಕ್ಲಬ್ ಮಣಿಪಾಲ್ ಟೌನ್ ವತಿಯಿಂದ ‘ಗ್ರೀನ್ ರಿಬ್ಬನ್’ ಯೋಜನೆಯಡಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಕಾಯಿನ್ ಸರ್ಕಲ್‌ವರೆಗಿನ ಡಾ. ವಿ.ಎಸ್. ಆಚಾರ್ಯ ಹೆದ್ದಾರಿಯ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಪರಿಸರ ಸಂರಕ್ಷಣೆಗೆ ರೋಟರಿ ಸಂಸ್ಥೆ ಕೈಗೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ. ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ವೇಳೆ ಸುರಿದ ಮಳೆ ಪ್ರಕೃತಿ […]

ಖ್ಯಾತ ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಶಾಕ್,ಚೆಕ್ ಬೌನ್ಸ್ ಪ್ರಕರಣ, 3 ತಿಂಗಳ ಜೈಲು ಶಿಕ್ಷೆ

ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್‌ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ ಪಾಲ್ ಯಾದವ್ ಮತ್ತೆ ಜೈಲುಪಾಲಾಗಿದ್ದಾರೆ. ವಿಚಾರಣೆಯ ವೇಳೆ ಅವರ ನಡೆ-ನುಡಿಯನ್ನು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಪ್ರೊಬೇಷನ್ (ಪರಿವೀಕ್ಷಣೆಯಡಿ ಬಿಡುಗಡೆ) ಸೌಲಭ್ಯ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ರಾಜ್‌ಪಾಲ್ ಯಾದವ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿ, ನೆಗೋಶಿಯಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆಯ ಸೆಕ್ಷನ್ 138ರ ಅಡಿಯಲ್ಲಿ ವಿಚಾರಣಾ […]

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಸಿಸಿಟಿವಿ ಕಡ್ಡಾಯ: ಭದ್ರತೆ ಹೆಚ್ಚಿಸಲು ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಎ, ಬಿ ಹಾಗೂ ಸಿ ವರ್ಗದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಜರಾಯಿ ಇಲಾಖೆಯ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ, ದೇವಸ್ಥಾನಗಳ ಆಸ್ತಿಪಾಸ್ತಿಗಳ ಸುರಕ್ಷತೆ ಹಾಗೂ ಭಕ್ತರ ಧಾರ್ಮಿಕ ಭಾವನೆಗಳ ರಕ್ಷಣೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ಹೊಸ ಮಾರ್ಗಸೂಚಿಗಳ […]

ಲಾಂಚ್ ಆಯ್ತು BSNL ಸ್ಯಾಟಲೈಟ್ ಫೋನ್: ನೆಟ್ ವರ್ಕ್ ಇಲ್ಲದೆಯೂ ಕಾಲ್ ಮಾಡಬಹುದು, ಯಾರಿಗೆಲ್ಲಾ ಬೆಸ್ಟ್ ಈ ಫೋನ್!

ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ (BSNL) ಭಾರತದಲ್ಲಿ ಹೊಸ ಸ್ಯಾಟಲೈಟ್ ಫೋನ್ ಅನ್ನು ಪರಿಚಯಿಸಿದ್ದು, ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಕರೆ ಮಾಡಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಈ ಫೋನ್‌ನ ಬೆಲೆ ₹1.34 ಲಕ್ಷ ನಿಗದಿಯಾಗಿದ್ದು, ಇದು ಸಾಮಾನ್ಯ ಸ್ಮಾರ್ಟ್‌ಫೋನ್‌ಗಿಂತ ಸಂಪೂರ್ಣ ಭಿನ್ನವಾಗಿದೆ. ಈ ಫೋನ್‌ನ ಪ್ರಮುಖ ವಿಶೇಷತೆ ಎಂದರೆ ಇದು ಮೊಬೈಲ್ ಟವರ್‌ಗಳನ್ನು ಅವಲಂಬಿಸುವುದಿಲ್ಲ. ಸಾಮಾನ್ಯ ಮೊಬೈಲ್‌ಗಳು ಹತ್ತಿರದ ಟವರ್ ಮೂಲಕ ಸಂಪರ್ಕ ಸಾಧಿಸಿದರೆ, ಈ ಸ್ಯಾಟಲೈಟ್ ಫೋನ್ ನೇರವಾಗಿ ಕಕ್ಷೆಯಲ್ಲಿರುವ ಉಪಗ್ರಹಕ್ಕೆ ಸಂಪರ್ಕ ಹೊಂದುತ್ತದೆ. ಹೀಗಾಗಿ […]