ಬಸ್‌ನಲ್ಲೇ ಅಸಭ್ಯ ವರ್ತನೆ; ಕಾಮುಕ ನಿರ್ವಾಹಕ ಪೊಲೀಸ್ ಬಲೆಗೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲೇ ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಬಸ್ ನಿರ್ವಾಹಕನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ ಆರೋಪಿ. ಪೊಲೀಸರ ಮಾಹಿತಿ ಪ್ರಕಾರ, ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸೆಲಿನಾ ಬಸ್‌ನಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಇರ್ಫಾನ್, ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಬಸ್‌ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿನಿಯರ ಎದುರೇ ತನ್ನ […]

ಷೇರು ಹೂಡಿಕೆಯಲ್ಲಿ ಲಾಭದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ: ಉಡುಪಿ ಮೂಲದ ಮಹಿಳೆ ಬಂಧನ

ಉಡುಪಿ/ಮುಂಬೈ: ಷೇರು ಮಾರುಕಟ್ಟೆ ಹೂಡಿಕೆಯ ಮೇಲೆ ಶೇ.10ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಚೆಕ್ ಬೌನ್ಸ್ ಹಾಗೂ ಆರ್ಥಿಕ ವಂಚನೆಗೆ ಸಂಬಂಧಿಸಿದ ಇತರ ಪ್ರಕರಣಗಳೂ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುಂಬೈನ ಕಾಂದಿವಲಿ ಪಶ್ಚಿಮ ನಿವಾಸಿ, ಸುಮಾರು 60 ವರ್ಷದ ರಜನಿ ದಯಾನಂದ ಶೆಟ್ಟಿ ನೀಡಿದ ದೂರಿನ ಪ್ರಕಾರ, […]