ಉಡುಪಿ: ಪೊಲೀಸರು ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು – ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್

ಉಡುಪಿ: ಪೊಲೀಸರು ಸದಾಕಾಲ ತಮ್ಮ ವೃತ್ತಿಯಲ್ಲಿ ಸಂವಿಧಾನವನ್ನು ಎತ್ತಿ ಹಿಡಿಯುವುದರೊಂದಿಗೆ ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ ಸಿಂಗ್ ಹೇಳಿದರು. ಅವರು ನಗರದ ಡಿಎ ಆರ್ ಮೈದಾನದಲ್ಲಿ ಉಡುಪಿ ಜಿಲ್ಲಾ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ವತಿಯಿಂದ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಗಳ 14ನೇ ತಂಡದ ನಿರ್ಗಮನ ಪಥ ಸಂಚಲನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಪೊಲೀಸ್ ವೃತ್ತಿಯಲ್ಲಿ […]

ಮಣಿಪಾಲ: ಈಶ್ವರ ನಗರದ ಕುಡಿಯುವ ನೀರಿನ ಘಟಕಕ್ಕೆ ನುಗ್ಗಿದ ಕಾರು: ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ […]

ಗೋಮಾತೆಗೆ ರಾಷ್ಟ್ರಮಾತೆ ಸ್ಥಾನಮಾನಕ್ಕೆ ಆಗ್ರಹ: ಜು.27ರಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಸೇವೆಗಾಗಿ ಕೇಂದ್ರ ಕಾನೂನು ಜಾರಿಗೊಳಿಸಿ, ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಮಟ್ಟದ ನಾಲ್ಕು ಹಂತದ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಆಚಾರ್ಯರು, ಸಾಧು–ಸಂತರು, ಗೋಸೇವಾ ಸಂಸ್ಥೆಗಳು, ಗೋಪಾಲಕರು ಹಾಗೂ ಗೋಭಕ್ತರ ಸಹಭಾಗಿತ್ವದಲ್ಲಿ ಈ […]

ಜುಲೈ 8: ಸ್ಥಾಪಕರ ದಿನಾಚರಣೆಯ ಅಂಗವಾಗಿ ಟಿಮೋರಾ ಪ್ರೀಸ್ಕೂಲ್‌ನಲ್ಲಿ ವಿಶೇಷ ಕಾರ್ಯಕ್ರಮ

ಮಣಿಪಾಲ :ಕರಾವಳಿ ಜಿಲ್ಲೆಯಲ್ಲಿ ಮಕ್ಕಳ ಪ್ರೀಸ್ಕೂಲ್ ಗೆ ಹೆಸರುವಾಸಿಯಾದ ಸಂಸ್ಥೆ ಟಿಮೋರ ಪ್ರೀಸ್ಕೂಲ್ ತನ್ನ ಯಶಸ್ವಿ ಒಂದು ವರ್ಷದ ಪೂರೈಕೆಯ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಜುಲೈ 8ರಂದು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿಯವರು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಆಶೀರ್ವಚನ ನೀಡಿ, ಸಂಸ್ಥೆಯ ಶೈಕ್ಷಣಿಕ ಸೇವೆಯನ್ನು ಪ್ರಶಂಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲೆಯ ಸಂಸ್ಥಾಪಕಿ ಅರ್ಚನಾ ರಾವ್ ಅವರು ಸ್ವಾಮೀಜಿಯವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು. […]

ಮನೆ ಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಎಚ್ ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠವು ಪ್ರಕರಣದ ವಿಚಾರಣೆ ನಡೆಸಿ, ರೇವಣ್ಣ ವಿರುದ್ಧದ ಆರೋಪಗಳನ್ನು ಬದಲಾಯಿಸಿದ್ದ ಹೈಕೋರ್ಟ್ ಆದೇಶದ ಬಗ್ಗೆ […]