ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ ; ವಿಶೇಷ ಪೂಜೆ ಸಲ್ಲಿಕೆ.

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ ಸ್ವಾಗತಿಸಿತು. ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಹಾಗೂ ದೇಶದ ಸುಖ-ಶಾಂತಿ, ಸಮೃದ್ಧಿಗಾಗಿ […]

ಫಿಫಾ ವಿಶ್ವಕಪ್ ಸೆಮಿಫೈನಲ್-ಫೈನಲ್ ಹಿನ್ನೆಲೆ: ಬೆಂಗಳೂರಿನಲ್ಲಿ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ತಡರಾತ್ರಿ 3.30ರವರೆಗೆ ಆಹಾರ ಸೇವೆಗೆ ಅನುಮತಿ

ಬೆಂಗಳೂರು,: ಫಿಫಾ ವಿಶ್ವಕಪ್ 2026ರ ನಿರ್ಣಾಯಕ ಪಂದ್ಯಗಳ ಹಿನ್ನೆಲೆಯಲ್ಲಿ ಬೆಂಗಳೂರು ಫುಟ್‌ಬಾಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ದಿನಗಳಲ್ಲಿ ನಗರದಲ್ಲಿನ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ಬೆಳಗಿನ 3.30 ಗಂಟೆಯವರೆಗೆ ಆಹಾರ ಸೇವೆ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘದ (NRAI) ಮನವಿಯನ್ನು ಪರಿಗಣಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಆದೇಶ […]

ಮಲ್ಪೆ ಕಡಲತೀರದಲ್ಲಿ ಬಲೆಗೆ ಸಿಲುಕಿದ್ದ ಆಮೆ ರಕ್ಷಣೆ

ಉಡುಪಿ: ಮಲ್ಪೆ ಕಡಲತೀರದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಸ್ಥಳೀಯ ಮೀನುಗಾರರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಮಲ್ಪೆಯ ಹನುಮಾನ್ ವಿಠೋಭ ಭಜನಾ ಮಂದಿರದ ಮುಂಭಾಗದ ಕಡಲತೀರದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ಬಲೆಗೆ ಸಿಕ್ಕಿಕೊಂಡಿದ್ದ ಆಮೆಯನ್ನು ಕನ್ನಿ ಮೀನುಗಾರ ಸಂಘದ ಸಕ್ರಿಯ ಸದಸ್ಯ ಹಾಗೂ ಸ್ಥಳೀಯ ನಿವಾಸಿ ಜ್ಞಾನೇಶ್ವರ್ ಕೋಟ್ಯಾನ್ ಗಮನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಆಮೆಯನ್ನು ಸುರಕ್ಷಿತವಾಗಿ ದಡಕ್ಕೆ ತಂದು, ಅದರ ದೇಹಕ್ಕೆ ಸುತ್ತಿಕೊಂಡಿದ್ದ ಮೀನುಗಾರಿಕಾ ಬಲೆಗಳನ್ನು […]

ಕಾರ್ಕಳ: ಯಶೋಯಾನ -2026 ಶೈಕ್ಷಣಿಕ ವಲಯದ ಎಸೆಸೆಲ್ಸಿ ಸಾಧನೆಯ ಸಂಭ್ರಮ ಕಾರ್ಯಕ್ರಮ

ಕಾರ್ಕಳ: 2025-26ರ ಶೈಕ್ಷಣಿಕ ವರ್ಷದಲ್ಲಿ 99.85% ಫಲಿತಾಂಶ ಪಡೆದು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಮತ್ತು ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಕಾರ್ಕಳ ಶೈಕ್ಷಣಿಕ ವಲಯದ ( ಕಾರ್ಕಳ ಮತ್ತು ಹೆಬ್ರಿ ತಾ.) ಶಾಲೆಗಳನ್ನು ಗೌರವಿಸಿ ಅಭಿನಂದಿಸುವ ಯಶೋಯಾನ -2026 ಕಾರ್ಯಕ್ರಮವು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ತಾಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘ, ಪ್ರೌಢಶಾಲಾ ಸಹಶಿಕ್ಷಕರ ಸಂಘ ಮತ್ತು ಕ್ರಿಯೇಟಿವ್ ವಿದ್ಯಾಸಂಸ್ಥೆಗಳು ಈ ಕಾರ್ಯಕ್ರಮದ ಆಯೋಜನೆ ಮಾಡಿದ್ದವು. ಕಾರ್ಕಳದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಅವರು […]

ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿ: ಅರ್ಜಿ ಸಲ್ಲಿಸೋದು ಹೇಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಭರ್ಜರಿ ಅವಕಾಶ ನೀಡಿದೆ. ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಅಧಿಸೂಚನೆಗಳ ಬಳಿಕ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಒಟ್ಟು 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ (SRPC) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಹುದ್ದೆಗಳ ವಿವರ ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP), ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) […]