ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್ ಟರ್ಮ್ ನೀಟ್ ತರಬೇತಿ; ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮಾವಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿರಂತರ ಒಂದಲ್ಲಾ ಒಂದು ಬಹುಪಯೋಗಿ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುತ್ತಾ ಬರುತ್ತಿದೆ.ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಶಿಕ್ಷಣ ನೀಡುವ ಈ ಸಂಸ್ಥೆ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ ಬೆಳೆದು ನಿಂತಿದೆ. ಈಗ ಮತ್ತೊಂದು […]

ಹೆಬ್ರಿಯ ಚಾಣಕ್ಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಚೆಸ್ ತರಗತಿ ಉದ್ಘಾಟನೆ

ಹೆಬ್ರಿ: ಚೆಸ್ ಆಟವು ವಿದ್ಯಾರ್ಥಿಗಳ ಏಕಾಗ್ರತೆ, ತಾರ್ಕಿಕ ಚಿಂತನೆ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 7 ವರ್ಷಗಳಿಂದ ಉಚಿತ ಚೆಸ್ ತರಬೇತಿಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಹೆಬ್ರಿ ಎಸ್. ಆರ್. ಸ್ಕೂಲ್ ಬಳಿಯ ಗುರುಕೃಪಾ ಬಿಲ್ಡಿಂಗ್‌ನಲ್ಲಿರುವಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಉಚಿತ ಚೆಸ್ […]

ಮಂಚಿ ಕುಮೇರಿಯಲ್ಲಿ ಜೋತುಬಿದ್ದ ವಿದ್ಯುತ್ ತಂತಿ: ಅಪಾಯದ ನಡುವೆ ಸಂಚಾರ

ಉಡುಪಿ: ಮಂಚಿ ಕುಮೇರಿಯ ವಾಗ್ಲೆ ಸ್ಟೋರ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ವಿದ್ಯುತ್ ತಂತಿಗಳು ಜೋತುಬಿದ್ದಿರುವುದರಿಂದ ಸಾರ್ವಜನಿಕರು ಆತಂಕದ ನಡುವೆ ಸಂಚರಿಸುವಂತಾಗಿದೆ. ರಸ್ತೆಯಲ್ಲಿ ಸಂಚರಿಸುವ ದೊಡ್ಡ ವಾಹನಗಳಿಗೆ ವಿದ್ಯುತ್ ತಂತಿಗಳು ಸ್ಪರ್ಶಿಸುತ್ತಿದ್ದು, ಅಪಾಯದ ಭೀತಿ ಎದುರಾಗಿದೆ. ಅಲ್ಲದೆ, ಪಾದಚಾರಿಗಳೂ ಭಯದಿಂದಲೇ ಈ ರಸ್ತೆಯಲ್ಲಿ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ವಿದ್ಯುತ್ ತಂತಿಗಳಿಗೆ ಮರಗಳ ಕೊಂಬೆಗಳು ತಾಗುತ್ತಿರುವ ಪರಿಣಾಮ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದೆ. ಗಾಳಿ–ಮಳೆಯ ಸಂದರ್ಭಗಳಲ್ಲಿ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿದೆ. […]

ಹಿರಿಯಡಕ: ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ: 8 ಮಂದಿ ವಶ

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜಾರು ಗ್ರಾಮದ ಮೂಡು ಅಂಜಾರು ಕಲ್ಕುಡ ದೇವಸ್ಥಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿದ ತಂಡವು, ಕೋಳಿಗಳ ಕಾಲಿಗೆ ಹರಿತವಾದ ಬಾಳುಗಳನ್ನು ಕಟ್ಟಿ ಕಾಳಗ ನಡೆಸುತ್ತಾ, ಅದರ ಮೇಲೆ ಹಣ ಪಣವಾಗಿಟ್ಟು ಜೂಜಾಟ ಆಡುತ್ತಿರುವುದನ್ನು ದೃಢಪಡಿಸಿಕೊಂಡಿತು. ಸಿಬ್ಬಂದಿಯ ಮೂಲಕ ದಾಳಿ ನಡೆಸಿದ ವೇಳೆ, ಕೆಲವರು ಕಾಳಗದ […]

ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ

ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ ಯಜಮಾನ ಡಾ. ಕೆ. ಕೃಷ್ಣ ಕುಲಾಲ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರವನ್ನು ಪ್ರಶ್ನಾ ಚಿಂತನೆಯ ಆಧಾರದಲ್ಲಿ 2019ರಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆ ಮಾಡಲಾಗಿದೆ. ಕಳೆದ ಏಳು ವರ್ಷಗಳಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿ […]