ದಿಡುಪೆ ಜಲಪಾತದಲ್ಲಿ ಸ್ಥಳೀಯ ಯುವಕರಿಂದ ನೈತಿಕ ಪೊಲೀಸ್ ಗಿರಿ, ಐವರ ವಿರುದ್ಧ ಎಫ್‌ಐಆರ್‌ ದಾಖಲು

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಐವರು ಸೇರಿದಂತೆ ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನಿಂದ ಸ್ನೇಹಿತನೊಂದಿಗೆ ಜುಲೈ 12ರಂದು ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಯುವತಿ ಮತ್ತು […]

ಸಿಎಂ ಭೇಟಿಗೆ ಬಂದ ಖ್ಯಾತ ನಟಿ ಪ್ರೇಮಾ, ಒಳಗೆ ಹೋಗದಂತೆ ತಡೆದ ಭದ್ರತಾ ಸಿಬ್ಬಂದಿ, ನಿರಾಶೆಯಿಂದ ವಾಪಾಸ್ ತೆರಳಿದ ನಟಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ಬಂದಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಪ್ರೇಮಾ ಅವರನ್ನು ಭದ್ರತಾ ಸಿಬ್ಬಂದಿ ಒಳಪ್ರವೇಶಕ್ಕೆ ಅವಕಾಶ ನೀಡದ ಘಟನೆ ನಡೆದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಉದ್ದೇಶದಿಂದ ಪ್ರೇಮಾ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ ಭದ್ರತಾ ಸಿಬ್ಬಂದಿ, ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕಾದರೆ ಅಧಿಕೃತವಾಗಿ ‘ಕೃಷ್ಣಾ’ ಕಚೇರಿಗೆ ತೆರಳುವಂತೆ ಸೂಚನೆ ನೀಡಿದ್ದು, ನಿವಾಸದೊಳಗೆ ಪ್ರವೇಶಿಸಲು ಅವಕಾಶ ನೀಡಿಲ್ಲ […]

ಪೆರ್ಡೂರು ಎ ಪಿ ಟಿ ಶಾಲೆ, ಉಚಿತ ಸಮವಸ್ತ್ರ ವಿತರಣೆ: ಮಕ್ಕಳ ಉಜ್ಜಲ ಭವಿಷ್ಯಕ್ಕೆ ಪೋಷಕರ ತ್ಯಾಗ ಅಗತ್ಯ – ಹೆಬ್ರಿ ಉದಯ ಕುಮಾರ್ ಶೆಟ್ಟಿ

ಹೆಬ್ರಿ: ನಮ್ಮ ಮಕ್ಕಳ ಉಜ್ಜಲ ಭವಿಷ್ಯಕ್ಕೆ ಶಾಲೆ ಮಾತ್ರ ಹೊಣೆ ಅಲ್ಲ. ಜೊತೆಗೆ ಪೋಷಕರ ಪಾತ್ರ ಕೂಡ ಅಷ್ಟೇ ಮುಖ್ಯ. ಶಾಲೆಯಿಂದ ಬಂದ ಮಕ್ಕಳ ಜೊತೆ ಪ್ರೀತಿಯಿಂದ ಬೆರೆತು ಅವರ ಕಲಿಕೆಯ ಬಗ್ಗೆ ಗಮನ ಹರಿಸಬೇಕು. ಮಕ್ಕಳಿಗೆ ಟಿವಿ ಮೊಬೈಲ್ ನೋಡಬೇಡಿ ಹೇಳುವ ಮೊದಲು ನಾವು ನೋಡದೆ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತ್ಯಾಗ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ ಹೇಳಿದರು. ಅವರು ಪೆರ್ಡೂರು ಅನಂತ ಪದ್ಮಾನಾಭ ದೇವಸ್ಥಾನ […]