ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ

ಉಡುಪಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ನಿಷೇಧ ದಿನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಾರಾಗೃಹದಲ್ಲಿನ 145 ಖೈದಿಗಳಿಗೆ ಮಂಗಳವಾರ ಟಿ.ಬಿ, ಎಕ್ಸ-ರೇ, ಐ.ಸಿ.ಟಿ.ಸಿ, ಹೆಪಟೈಟಿಸ್-ಬಿ ಮತ್ತು ಸಿ-ಡ್ರಗ್ ಟೆಸ್ಟ್, ರಕ್ತದೊತ್ತಡ, ಮಧುಮೇಹ, ಸಿಪ್ಲಿಸ್, ಸಾಮಾನ್ಯ ತಪಾಸಣೆ ಮತ್ತು ಉಪಚಾರವನ್ನು ಹಾಗೂ ಮಾದಕ ವಸ್ತು ಪತ್ತೆ ಹಚ್ಚುವ ಶಿಬಿರವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕ ವಿಜಯಕುಮಾರ ದಿ. ಚವ್ಹಾಣ್ ಮಾತನಾಡಿ, ಖೈದಿಗಳ ಆರೋಗ್ಯ ತಪಾಸಣೆ […]
ಆರೋಗ್ಯ ವೃದ್ಧಿಗೆ ದೈಹಿಕ ಅರಿವು ಮುಖ್ಯ: ಬಸ್ರೂರು ರಾಜೀವ ಶೆಟ್ಟಿ

ಉಡುಪಿ: ಮನುಷ್ಯನಿಗೆ ಇಂದು ಸಾಕಷ್ಟು ಸವಲತ್ತುಗಳು ಇರುವುದು ದೈಹಿಕ ಆರೋಗ್ಯದ ಮೇಲೆ ಪರಿಣಾjಮ ಬೀರಿದೆ. ಪ್ರತಿಯೊಬ್ಬರೂ ದೇಹದ ಅಂಗಾoಗಗಳ ರಚನೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ. ಈ ದೃಷ್ಟಿಯಿಂದ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ಕುಂಜಿಬೆಟ್ಟಿನ ಓಕುಡೆ ii, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಇವರ […]
ಜಿಲ್ಲೆಯಲ್ಲಿರುವ ಕಾಲುಸಂಕಗಳ ಗುಣಮಟ್ಟವನ್ನು ಪರಿಶೀಲಿಸಿ, ವರದಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿರುವ ಕಾಲುಸಂಕಗಳ ಗುಣಮಟ್ಟವನ್ನು ತಾಂತ್ರಿಕ ತಂಡದೊoದಿಗೆ ಪರಿಶೀಲಿಸಿ, ಅವುಗಳ ಸ್ಥಿತಿಗತಿಗಳ ಕುರಿತ ಸಮರ್ಪಕ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 600 ಕ್ಕೂ ಹೆಚ್ಚು ಕಾಲುಸಂಕಗಳಿದ್ದು, ಒಂದೊಮ್ಮೆ ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕಗಳ ಮೇಲೆ ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಚರಿಸಿದ್ದಲ್ಲಿ ಪ್ರಾಣಹಾನಿ ಆಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ […]
ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಹೃದಯಾಘಾತದಿಂದ ನಿಧನ

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ನಾಗೇಶ್ ಗಾಣಿಗ ಅವರು, ಕಳೆದ ಹಲವಾರು ವರ್ಷಗಳಿಂದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿದ್ದರು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು […]
ಆಗುಂಬೆ ಘಾಟಿ ಟನಲ್ ನಿರ್ಮಾಣ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಉಡುಪಿ: ಆಗುಂಬೆ ಘಾಟಿಯಲ್ಲಿ ಟನಲ್ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಗುಂಬೆ ಘಾಟಿಯಲ್ಲಿ ಡಬಲ್ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆಯ ಅನುಮತಿ ಸೇರಿದಂತೆ ಹಲವು ಸವಾಲುಗಳಿವೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು […]