ಭಾರತೀಯ ಅಂಚೆ ಇಲಾಖೆ ಸಿಬ್ಬಂದಿಗಳ ಮೇಲೆ ಮಾನಸಿಕ ಒತ್ತಡ, ಟಾರ್ಗೆಟ್ ಹಾಗೂ ಅಂಚೆಇಲಾಖೆ ಖಾಸಗೀಕರಣ ವಿರೋಧಿಸಿ ಅಂಚೆ ಸಿಬ್ಬಂದಿಗಳಿಂದ ಮುಷ್ಕರ

ಮಂಗಳೂರು: ಅಂಚೆ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಗುರಿ (ಟಾರ್ಗೆಟ್) ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿ ಸ್ವಂತ ಹಣದಲ್ಲಿ ವಿವಿಧ ಖಾತೆಗಳನ್ನು ತೆರೆಯಲು ಒತ್ತಾಯಿಸಲಾಗುತ್ತಿದೆ. ಅಲ್ಲದೆ, ವಿದೇಶಿ ಸಲಹಾ ಸಂಸ್ಥೆ ಮೆಕ್ಕಿನ್ಸೆ (McKinsey) ಶಿಫಾರಸುಗಳ ಆಧಾರದ ಮೇಲೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಭಾರತೀಯ ಅಂಚೆ ನೌಕರರ ಒಕ್ಕೂಟ, ಇದರ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟಕ್ಕೆ ಕರೆ ನೀಡಿದೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಚೆ ನೌಕರರ ಸಂಘದ ಕರ್ನಾಟಕ ವಲಯ ಕಾರ್ಯದರ್ಶಿ ವೀರೇಶ್, ಹಂತ […]
ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 7,005 ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಈ ಹಿಂದೆ 2025ರ ನವೆಂಬರ್ 20ರಂದು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 215ರ ಅಡಿಯಲ್ಲಿ ಸಿ.ಎನ್. ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury) ವರದಿಯನ್ನು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆದರೆ, ಆ […]
ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಹರಿಯಬಿಡುತ್ತಿರುವುದರಿಂದ, ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಜೊತೆಗೆ ನಗರ ವ್ಯಾಪ್ತಿಯಲ್ಲಿ ಹರಿಯುವ ಇಂದ್ರಾಣಿ ನದಿಯ ನೀರು ಕಲುಷಿತಗೊಂಡಿರುತ್ತದೆ. ಸಾರ್ವಜನಿಕರು ತಮ್ಮ ಮನೆ, ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಲೇಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ […]
ನೇರ ಸಂದರ್ಶನ

ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್ ಕುಂಜಿಬೆಟ್ಟು ಇಲ್ಲಿ ಜುಲೈ 17 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಲ ಅಥವಾ ದೂ.ಸಂಖ್ಯೆ: […]
ಆಗುಂಬೆ ಘಾಟಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

ಉಡುಪಿ: ಆಗುಂಬೆ ಘಾಟಿಯಲ್ಲಿ ಸುರಂಗ (ಟನಲ್) ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಆಗುಂಬೆ ಸೂರ್ಯಾಸ್ತ ವೀಕ್ಷಣಾ ಸ್ಥಳದಿಂದ ಘಾಟಿಯ ಭೌಗೋಳಿಕ ಪರಿಸ್ಥಿತಿ ಹಾಗೂ ರಸ್ತೆ ಸ್ಥಿತಿಯನ್ನು ಅವಲೋಕಿಸಿದ ಸಚಿವರು, ಘಾಟಿಯ ಧಾರಣಾ ಸಾಮರ್ಥ್ಯ ಕುಸಿತ ಹಾಗೂ ಸುರಕ್ಷತೆ ಕುರಿತಂತೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿದರು. ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ […]