ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ […]

ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ನೋಂದಣಿಗೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. […]

ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿಯಿಂದ ವಾಲಿಬಾಲ್‌ನಲ್ಲಿ ಸಾಧನೆ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿಯ ಕ್ರೀಡಾ ವಸತಿ ನಿಲಯದ ವಾಲಿಬಾಲ್ ವಿಭಾಗದ ಕ್ರೀಡಾಪಟು ನೈಜಾ ಆರ್ ಹೆಗ್ಡೆರವರು, ಇದೇ ಜುಲೈ 01 ರಿಂದ 10ರ ವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆದ 18 ವರ್ಷ ವಯೋಮಾನದ ವಿಶ್ವ ಶಾಲಾ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕರ್ನಾಟಕದ ಏಕೈಕ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ. ನೈಜಾ ಹೆಗ್ಡೆ ಉಡುಪಿ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿಯಾಗಿದ್ದು, ಇವರನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ […]

ಕರಾವಳಿಯ ಪ್ರತಿಯೊಂದು ಕಂಬಳಕ್ಕೂ ರಾಜ್ಯ ಸರಕಾರದಿಂದ ₹5 ಲಕ್ಷ ಅನುದಾನ, ಕಂಬಳ ಪ್ರಿಯರು ಖುಷ್

ಉಡುಪಿ: ವಿವಾದಗಳ ನಡುವೆಯೇ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರ ಮಹತ್ವದ ಕೊಡುಗೆ ನೀಡಿದೆ. ಇನ್ಮುಂದೆ ರಾಜ್ಯದ ಪ್ರತಿಯೊಂದು ಕಂಬಳಕ್ಕೂ ತಲಾ ₹5 ಲಕ್ಷ ಅನುದಾನ ನೀಡಲು ಸರ್ಕಾರ ತೀರ್ಮಾನಿಸಿದೆ. 2025–26ನೇ ಸಾಲಿನಲ್ಲಿ ನಡೆಯಲಿರುವ 23 ಕಂಬಳಗಳಿಗೆ ಒಟ್ಟು ₹1.15 ಕೋಟಿ ಅನುದಾನ ಮಂಜೂರಾಗಿದ್ದು, ಪ್ರವಾಸೋದ್ಯಮ ಇಲಾಖೆ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ. ಸರ್ಕಾರದ ಈ ನಿರ್ಧಾರವನ್ನು ಕಂಬಳ ಆಯೋಜಕರು ಹಾಗೂ ಸಂಘಟನೆಗಳು ಸ್ವಾಗತಿಸಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯಂತೆ ಪ್ರತಿ ಕಂಬಳಕ್ಕೂ […]

ಕಾರ್ಕಳ ಕ್ರೈಸ್ಟ್ ಕಿಂಗ್: ಕಲಿಕಾ ಒತ್ತಡ ನಿವಾರಣೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಪದವಿಪೂರ್ವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಒತ್ತಡ ನಿವಾರಣೆ ಕುರಿತ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋರೋಗ ತಜ್ಞ ಹಾಗೂ ಆಪ್ತ ಸಮಾಲೋಚಕರಾದ ಡಾ.ವಿರೂಪಾಕ್ಷ ದೇವರಮನೆ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು “ಮಾನಸಿಕವಾಗಿ ಬಲಿಷ್ಟವಾಗಿರುವ ಯುವಜನತೆ ದೇಶದ ಸಂಪತ್ತು. ವಿದ್ಯಾರ್ಥಿಗಳಿಗೆ ತಮ್ಮ ಗುರಿಯ ಬಗ್ಗೆ ಸ್ಪಷ್ಟತೆಯಿರಬೇಕು ಮತ್ತು ಆ ಗುರಿ ಸಾಧಿಸಲು […]