ಭಾರೀ ಮಳೆ: ಜುಲೈ 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಂದು (ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ವಸತಿ ಪಿಯು ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು […]

ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ: ವಿದ್ಯಾರ್ಥಿಗಳಿಂದ ಗದ್ದೆ ನಾಟಿ ಕಾರ್ಯ

ಉಡುಪಿ: ಪೋದಾರ್ ಅಂತರಾಷ್ಟ್ರೀಯ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು ಜುಲೈ 15ರಂದು ಮೂಡುಪೆರಂಪಳ್ಳಿಯ ರೈತ ಶಂಕರ್ ಕುಲಾಲ್ ಅವರ ಭತ್ತದ ಗದ್ದೆಗೆ ಭೇಟಿ ನೀಡಿ ಗದ್ದೆ ನಾಟಿ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಈ ಶೈಕ್ಷಣಿಕ ಪ್ರವಾಸದ ಮೂಲಕ ವಿದ್ಯಾರ್ಥಿಗಳು ಭತ್ತದ ಕೃಷಿಯ ವಿವಿಧ ಹಂತಗಳನ್ನು ಪ್ರಾಯೋಗಿಕವಾಗಿ ತಿಳಿದುಕೊಂಡರು. ರೈತರ ಶ್ರಮ, ಕೃಷಿಯ ಮಹತ್ವ ಹಾಗೂ ಆಹಾರ ಉತ್ಪಾದನೆಯ ಹಿಂದಿರುವ ಪರಿಶ್ರಮವನ್ನು ನೇರವಾಗಿ ಅನುಭವಿಸುವ ಅವಕಾಶ ಅವರಿಗೆ ದೊರೆಯಿತು. ವಿದ್ಯಾರ್ಥಿಗಳು ಗದ್ದೆಯಲ್ಲಿ ನಾಟಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿಯ […]

ಇನ್ನು ‘ನಮ್ಮ ಮೆಟ್ರೋ’ದಲ್ಲಿ ಈ ಹುಚ್ಚಾಟಗಳನ್ನೆಲ್ಲಾ ಮಾಡಿದ್ರೆ ಬೀಳುತ್ತೆ ಭಾರೀ ದಂಡ! ಜಾಗೃತೆ!

ಬೆಂಗಳೂರು: ಇನ್ಮುಂದೆ ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದರೆ ಪ್ರಯಾಣಿಕರು ಭಾರೀ ದಂಡ ತೆರಬೇಕಾಗುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಹೊಸ ದಂಡದ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ ನಿಯಮಗಳ ಪ್ರಕಾರ, ಮೆಟ್ರೋ ಟ್ರ್ಯಾಕ್‌ಗೆ ಜಿಗಿಯುವುದು, ಟ್ರ್ಯಾಕ್ ಮೇಲೆ ಓಡಾಡುವುದು, ಟಿಕೆಟ್ ಅಥವಾ ಪಾಸ್‌ಗಳ ದುರ್ಬಳಕೆ ಮಾಡಿದರೆ ₹5,000ರಿಂದ ₹25,000ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ, ಮೆಟ್ರೋ ರೈಲು ಅಥವಾ ನಿಲ್ದಾಣಗಳಲ್ಲಿ ಅನುಮತಿಯಿಲ್ಲದೆ ವ್ಯಾಪಾರ ನಡೆಸಿದರೂ ₹5,000 ದಂಡ ಪಾವತಿಸಬೇಕಾಗುತ್ತದೆ. ಇದುವರೆಗೆ ಮೆಟ್ರೋದಲ್ಲಿ ರೀಲ್ಸ್ […]

ನೀಟ್-2026ರ ಫಲಿತಾಂಶ: ಜ್ಞಾನಸುಧಾದ ಮೇಧಾನ್ಶ್ ಎನ್.ಬಿ ನೀಟ್‍ನಲ್ಲಿ 680 ಅಂಕ ಪಡೆದು, ರಾಷ್ಟ್ರಮಟ್ಟದಲ್ಲಿ 267ನೇ ರ್ಯಾಂಕ್‍ನೊಂದಿಗೆ ದ.ಕ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರಥಮ

ಉಡುಪಿ: ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ)ನಡೆಸಿದ ನೀಟ್-2026ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಸಾವಿರದೊಳಗಿನ ರ್ಯಾಂಕ್ ಪಡೆದಿದ್ದಾರೆ. 680 ಅಂಕ ಪಡೆದು ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾನ್ಶ್ ಎನ್. ಬಿ:ಜ್ಞಾನಸುಧಾ ಸಂಸ್ಥೆಯ ಮೇಧಾನ್ಶ್ ಎನ್.ಬಿ 99.9841992 ಪರ್ಸಂಟೈಲ್‍ನೊಂದಿಗೆ 720ರಲ್ಲಿ 680 ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ ಜನರಲ್ ಮೆರಿಟ್ ವಿಭಾಗದಲ್ಲಿ 267ನೇ ರ್ಯಾಂಕನ್ನು ಹಾಗೂ ಕೆಟಗರಿ ವಿಭಾಗದಲ್ಲಿ 178ನೇ ರ್ಯಾಂಕ್ […]

ನೀಟ್–2026 ಪರೀಕ್ಷಾ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಓಇಇಖಿ–2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಒಂದೇ ಕ್ಯಾಂಪಸ್‌ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ ವ್ಯಾಸಂಗ ಮಾಡಿದ 21 ವಿದ್ಯಾರ್ಥಿಗಳು 99 ಪರ್ಸಂಟೈಲ್‌ಗಿoತ ಅಧಿಕ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿತಂದಿದ್ದಾರೆ.ಆಳ್ವಾಸ್‌ನ ಸರ‍್ಯಕಾಂತ್ ಪಾಟೀಲ್ ಕೆಟಗರಿ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ 97ನೇ ರ‍್ಯಾಂಕ್, ಚೇತನ್ ಯರನಾಳ್ 239ನೇ ರ‍್ಯಾಂಕ್, ಕ್ಲಾರೆನ್ಸ್ ಡಿ’ಸೋಜಾ 724 ರ‍್ಯಾಂಕ್ ಹಾಗೂ ದೀಕ್ಷಿತಾ ಕೆ.ಎಸ್ 951 ರ‍್ಯಾಂಕ್‌ಗಳಿಸಿ ಸಾಧನೆ […]